ಬೈಂದೂರು: ತಾಲ್ಲೂಕಿನ ಬಿಜೂರು ಗ್ರಾಮದ ನಂದಿಕೇಶ್ವರ ಹಾಗೂ ಪರಿವಾರ ದೈವಗಳ ದೈವಸ್ಥಾನದಲ್ಲಿ ಏಪ್ರಿಲ್ 12ರಿಂದ 18ರವರೆಗೆ ನಂದಿಕೇಶ್ವರ ಪರಿವಾರ ದೈವಗಳ ಮತ್ತು ನಾಗ ದೇವರ ಪುನರ್ ಪ್ರತಿಷ್ಠೆ, ಬ್ರಹ್ಮಕಲಶೋತ್ಸವ ಹಾಗೂ ಸುವರ್ಣ ಮಹೋತ್ಸವ ಹಾಗೂ ರಾಮನಾಮ ಕೋಟಿ ಜಪಯಜ್ಞ ಕಾರ್ಯಕ್ರಮ ನಡೆಯಲಿದೆ.

ಕಾರ್ಯಕ್ರಮದ ಪ್ರಯುಕ್ತ ರಾಕ್ಷೋಘ್ನ ಹೋಮ, 1008 ಅಷ್ಟೋತ್ತರ ಸಹಸ್ರ ಬ್ರಹ್ಮಕಲಶ, ಕಲಶ ಸ್ಥಾಪನಾ ಪೂಜೆ, ನಾಗದೇವರ ಶಿಲಾಬಿಂಬ ಪುನರ್ ಪ್ರತಿಷ್ಠೆ, ವಿವಿಧ ಹೋಮಗಳು, ಪರಿವಾರ ದೈವಗಳ ಪ್ರತಿಷ್ಠೆ, ಅಷ್ಟೋತ್ತರ ಸಹಸ್ರ ಕಲಶಾಭಿಷೇಕ, ಆಶ್ಲೇಷಾಬಲಿ, ಕೋಷ್ಮಾಂಡಬಲಿ ಸಮರ್ಪಣೆ ನಡೆಯಲಿದೆ.

15ರಂದು ಬೆಳಿಗ್ಗೆ 8.05ಕ್ಕೆ ಭಜನಾ ಸುವರ್ಣ ಮಹೋತ್ಸವದ ರದೀಪ ಸ್ಥಾಪನೆ, 18ರಂದು ಬೆಳಿಗ್ಗೆ 8.30ರಿಂದ ಪ್ರದೀಪ ವಿಸರ್ಜನೆಯೊಂದಿಗೆ ಭಜನಾ ಮಂಗಲೋತ್ಸವ ಜರುಗಲಿದೆ. ಅಂದು ಬೆಳಿಗ್ಗೆ 9.30ರಿಂದ ಭಜನಾ ಸುವರ್ಣ ಮಹೋತ್ಸವದ ಅಂಗವಾಗಿ ರಾಮನಾಮ ಕೋಟಿ ಜಪ ಯಜ್ಞ ಆರಂಭಗೊಂಡು ಪೂರ್ಣಾಹುತಿ ನಡೆಯಲಿದೆ. ಸಂಜೆ ಗಂಟೆ 5ರಿಂದ ಗೆಂಡಸೇವೆ ನಡೆಯಲಿದ್ದು, ರಾತ್ರಿ ಗಂಟೆ 7.30ರಿಂದ ಅನ್ನಸಂತರ್ಪಣೆ, ರಾತ್ರಿ ಗಂಟೆ 8ರಿಂದ ಕ್ಷೇತ್ರ ಹಿರಿಯಡ್ಕ ಅವರಿಂದ ಸ್ವಾಮಿ ವೀರಭದ್ರ ಯಕ್ಷಗಾನ ನಡೆಯಲಿದೆ. ಭಕ್ತರು ಭಾಗವಹಿಸುವಂತೆ ಪ್ರಕಟಣೆ ಕೋರಿದೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260410-28-890895389

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.