ಬೈಂದೂರು: ನಮ್ಮ ಪವಿತ್ರ ಸಂಸ್ಕಾರಯುಕ್ತ ಜೀವನ ಮೌಲ್ಯಗಳು ಉಳಿಯಬೇಕಾದರೆ ಮನೆ ಮನಗಳು ಧರ್ಮಕ್ಷೇತ್ರವಾಗಬೇಕು. ಸಮಾಜದಲ್ಲಿ ಉತ್ತಮ ಸಂಸ್ಕೃತಿ ಸಂಸ್ಕಾರವನ್ನು ಬೆಳೆಸಬೇಕು ಎಂದು ನಿಪ್ಪಾಣಿ ಮಹಾಕಾಳಿ ಮಹಾಸಂಸ್ಥಾನ ಸದ್ಧರ್ಮ ಓಂ ಶಕ್ತಿ ಪೀಠಾಧೀಶ ಅರುಣಾನಂದತೀರ್ಥ ಸ್ವಾಮೀಜಿ ಹೇಳಿದರು.

ಬಿಜೂರು ಸುಮನಾವತಿ ನದಿ ತೀರದಲ್ಲಿ ₹5 ಕೋಟಿ ವೆಚ್ಚದಲ್ಲಿ ನಿರ್ಮಾಣವಾಗುತ್ತಿರುವ ಕೋಟಿ ಚೆನ್ನಯ ಪಂಜುರ್ಲಿ ನೂತನ ಗರಡಿ ಕಾಮಗಾರಿಗೆ ಶಿಲಾನ್ಯಾಸ ನೆರವೇರಿಸಿ ಅವರು ಆಶೀರ್ವಚನ ನೀಡಿದರು.

ದೇವರು, ದೈವಸ್ಥಾನಗಳು ಜೀರ್ಣೋದ್ಧಾರವಾದ ನಂತರ ಅಲ್ಲಿನ ನಡಾವಳಿಗಳನ್ನು ಕ್ರಮಬದ್ಧವಾಗಿ ಪಾಲಿಸಿಕೊಂಡು ಬರಬೇಕು. ಭಕ್ತರು, ಕುಟುಂಬಸ್ಥರು ಸಮರ್ಪಣಾ ಭಾವದಿಂದ ಸಹಕಾರ ನೀಡಿದಲ್ಲಿ ಮಾತ್ರ ಅಭಿವೃದ್ಧಿ ಸಾಧ್ಯ ಎಂದರು.

ಕೋಟಿ ಚೆನ್ನಯ ಪಂಜುರ್ಲಿ ಗರಡಿ ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಡಾ.ಗೋವಿಂದ ಬಾಬು ಪೂಜಾರಿ, ಮಾಲತಿ ಪೂಜಾರಿ ದಂಪತಿ ಗುರುಗಳ ಪಾದಪೂಜೆ ನೆರವೇರಿಸಿದರು. ಸಂಸದ ಬಿ.ವೈ. ರಾಘವೇಂದ್ರ ಅವರನ್ನು ಸನ್ಮಾನಿಸಲಾಯಿತು.

ಗೌರಿಗದ್ದೆ ಅವಧೂತ ವಿನಯ ಗುರೂಜಿ, ಶಾಸಕ ಗುರುರಾಜ ಗಂಟಿಹೊಳೆ, ಕೋಟಿ ಚೆನ್ನಯ ಪಂಜುರ್ಲಿ ಗರಡಿ ಪಾತ್ರಿ ರಾಮ ಎಂ. ಪೂಜಾರಿ, ಆಡಳಿತ ಮಂಡಳಿ ಅಧ್ಯಕ್ಷ ಗೋವಿಂದ ಎಂ. ಪೂಜಾರಿ, ಗರಡಿ ಬಲ್ಲಾಳ ಸೀತಾರಾಮ ಶೆಟ್ಟಿ, ಗೋವಿಂದ ಶೇರಿಗಾರ್ (ಕರ್ತುಗಳು), ಉದ್ಯಮಿಗಳಾದ ಲಕ್ಷ್ಮೀಕಾಂತ್ ಬೆಸ್ಕೂರ್, ಶೇಖರ ಪೂಜಾರಿ, ವೆಂಕಟ್ರಮಣ ಶೇರುಗಾರ್, ನರಸಿಂಹ ಪೂಜಾರಿ, ಭಾಸ್ಕರ ಪೂಜಾರಿ, ಕೃಷ್ಣ ಪೂಜಾರಿ ಪೇರಂಜಾಲು, ಸೂರ್ಯ ಎಸ್. ಪೂಜಾರಿ ಕಟ್ಟೆಮನೆ, ಪಂಜು ಪೂಜಾರಿ ಆಸ್ರಣ್ಣ, ಜಟ್ನಾಡಿಮಕ್ಕಿ ಶ್ರೀನಿವಾಸ ಪೂಜಾರಿ ಆಸ್ರಣ್ಣ, ರಾಮ ಎ. ಪೂಜಾರಿ ಚಮ್ಮಾನ್ಹಿತ್ಲು ಭಾಗವಹಿಸಿದ್ದರು.

ಬಿಜೂರು ಅರೆಕಲ್ಲು ದುರ್ಗಾಪರಮೇಶ್ವರಿ ದೇವಸ್ಥಾನ ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ರಾಜೇಂದ್ರ ಬಿಜೂರು ಸ್ವಾಗತಿಸಿದರು. ಉಪಾಧ್ಯಕ್ಷ ಸುರೇಶ ಬಿಜೂರು ವಂದಿಸಿದರು. ಸುಬ್ರಹ್ಮಣ್ಯ ಜಿ. ಉಪ್ಪುಂದ ನಿರೂಪಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.