ಉಡುಪಿ: ಮಣಿಪಾಲದ ಕೆಎಂಸಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವಪೇಜಾವರ ಮಠದ ವಿಶ್ವೇಶತೀರ್ಥ ಸ್ವಾಮೀಜಿ ಅವರನ್ನು ಮಂಗಳವಾರ ಭೇಟಿಯಾದಉಡುಪಿಯ ಧರ್ಮಾಧ್ಯಕ್ಷ ಜೆರಾಲ್ಡ್ ಲೋಬೊ ಅವರು, ಶ್ರೀಗಳು ಶೀಘ್ರ ಗುಣಮುಖರಾಗುವಂತೆ ಚರ್ಚ್‌ನಲ್ಲಿ ಪ್ರಾರ್ಥನೆ ಸಲ್ಲಿಸಿರುವುದಾಗಿ ತಿಳಿಸಿದರು.

ಸ್ವಾಮೀಜಿ ಚೇತರಿಕೆಗೆ ಹಲವೆಡೆ ವಿಶೇಷ ಪೂಜೆ, ಪ್ರಾರ್ಥನೆಗಳು ಮುಂದುವರಿದಿವೆ.ಪೂರ್ಣಪ್ರಜ್ಞ ಪೀಠ, ಕೃಷ್ಣಮಠ, ಅನಂತೇಶ್ವರ, ಚಂದ್ರಮೌಳೇಶ್ವರ ದೇವಸ್ಥಾನಗಳಲ್ಲಿ ನಿತ್ಯ ಪೂಜೆಗಳು ನಡೆಯುತ್ತಿವೆ.

ಪೇಜಾವರ ಶ್ರೀಗಳು ಗುಣಮುಖರಾಗಲಿ, ಕೃಷ್ಣಪೂಜೆ ಮಾಡುವಂತಾಗಲಿ ಎಂದು ನಿತ್ಯ ಲಕ್ಷ ತುಳಸಿ ಅರ್ಚನೆಯ ವೇಳೆ ವಿಶೇಷ ಪೂಜೆ ಹಾಗೂ ಪ್ರಾರ್ಥನೆ ಸಲ್ಲಿಸಲಾಗುತ್ತಿದೆ ಎಂದು ಪರ್ಯಾಯ ಪಲಿಮಾರು ಮಠದ ವಿದ್ಯಾಧೀಶ ಶ್ರೀಗಳು ತಿಳಿಸಿದರು.

ವೈದ್ಯಕೀಯ ನೆರವು: ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಹಾಗೂ ಕೇಂದ್ರ ಆರೋಗ್ಯ ಸಚಿವ ಹರ್ಷವರ್ಧನ್ ಕೆಎಂಸಿ ವೈದ್ಯರ ಜತೆ ನಿರಂತರ ಸಂಪರ್ಕದಲ್ಲಿದ್ದು, ತುರ್ತು ವೈದ್ಯಕೀಯ ನೆರವು ಅಗತ್ಯಬಿದ್ದರೆ ತಿಳಿಸುವಂತೆ ಸೂಚಿಸಿರುವುದಾಗಿ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕ ಡಾ. ಅವಿನಾಶ್ ಶೆಟ್ಟಿ ತಿಳಿಸಿದರು.

ಚಿಕಿತ್ಸೆಗೆ ಸ್ಪಂದನೆ: ಶ್ರೀಗಳು ಶ್ವಾಸಕೋಶ ಸೋಂಕಿನಿಂದ ಬಳಲುತ್ತಿದ್ದು ಚಿಕಿತ್ಸೆಗೆ ನಿಧಾನವಾಗಿ ಸ್ಪಂದಿಸುತ್ತಿದ್ದಾರೆ. ಆರೋಗ್ಯ ಸ್ಥಿತಿ ಸುಧಾರಿಸಲು ಹೆಚ್ಚು ಸಮಯ ಬೇಕಾಗಬಹುದು ಎಂದು ಬೆಂಗಳೂರು ಮಣಿಪಾಲ್ ಆಸ್ಪತ್ರೆಯ ಶ್ವಾಸಕೋಶ ವಿಭಾಗದ ತಜ್ಞ ವೈದ್ಯ ಡಾ.ಸತ್ಯನಾರಾಯಣ ತಿಳಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.