ಉಡುಪಿ: ಯುವ ಮೋರ್ಚಾ ರಾಜ್ಯ ವಿಶೇಷ ಕಾರ್ಯಕಾರಿಣಿ ಸಭೆ ನ.22ರಂದು ಬೆಳಿಗ್ಗೆ 10 ಗಂಟೆಗೆ ಮಣಿಪಾಲದ ಹೋಟೆಲ್ ಕಂಟ್ರಿ ಇನ್ ಸಭಾಂಗಣದಲ್ಲಿ ನಡೆಯಲಿದೆ ಎಂದುಬಿಜೆಪಿ ಯುವ ಮೋರ್ಚಾ ಜಿಲ್ಲಾ ಘಟಕದ ಅಧ್ಯಕ್ಷ ವಿಖ್ಯಾತ್ ಶೆಟ್ಟಿ ತಿಳಿಸಿದರು.

ಶನಿವಾರ ಬಿಜೆಪಿ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ವಿಶೇಷ ಕಾರ್ಯಕಾರಿಣಿ ಸಭೆಗೆ ರಾಜ್ಯ ಯುವ ಮೋರ್ಚಾ ಪದಾಧಿಕಾರಿಗಳು ಹಾಗೂ ರಾಜ್ಯದ 39 ಸಂಘಟನಾತ್ಮಕ ಜಿಲ್ಲೆಗಳ ಯುವ ಮೋರ್ಚಾ ಜಿಲ್ಲಾ ಘಟಕದ ಅಧ್ಯಕ್ಷರು ಮತ್ತು ಪ್ರಧಾನ ಕಾರ್ಯದರ್ಶಿಗಳು ಭಾಗವಹಿಸಲಿದ್ದಾರೆ ಎಂದರು.

ಯುವ ಮೋರ್ಚಾ ರಾಷ್ಟ್ರೀಯ ಅಧ್ಯಕ್ಷ ಹಾಗೂ ಸಂಸದರೂ ಆದ ತೇಜಸ್ವಿ ಸೂರ್ಯ ರಾಜ್ಯ ವಿಶೇಷ ಕಾರ್ಯಕಾರಿಣಿ ಸಭೆ ಉದ್ಘಾಟಿಸಲಿದ್ದಾರೆ. ಯುವ ಮೋರ್ಚಾ ರಾಜ್ಯ ಘಟಕದ ಅಧ್ಯಕ್ಷ ಡಾ.ಸಂದೀಪ್ ಕುಮಾರ್ ಅಧ್ಯಕ್ಷತೆ ವಹಿಸಲಿದ್ದಾರೆ.

ಅಂದು ಬೆಳಿಗ್ಗೆ 9 ಗಂಟೆಗೆ ಉಭಯ ನಾಯಕರನ್ನು ಜೋಡುಕಟ್ಟೆಯಲ್ಲಿ ಸ್ವಾಗತಿಸಿ, ಬೈಕ್ ರ್ಯಾಲಿ ಮೂಲಕ ಮಣಿಪಾಲದವರೆಗೆ ಕರೆತರಲಾಗುವುದು. ಡಾ.ವಿ.ಎಸ್.ಆಚಾರ್ಯ ಅವರ ಪುತ್ಥಳಿಗೆ ಮಾಲಾರ್ಪಣೆ ಮಾಡಲಾಗುವುದು ಎಂದು ತಿಳಿಸಿದರು.

ವಿಶೇಷ ಕಾರ್ಯಕಾರಣಿಯಲ್ಲಿ ಮೀನುಗಾರಿಕೆ, ಬಂದರು, ಒಳನಾಡು ಜಲಸಾರಿಗೆ ಸಚಿವ ಎಸ್.ಅಂಗಾರ, ಇಂಧನ, ಕನ್ನಡ ಮತ್ತು ಸಂಸ್ಕೃತಿ ಖಾತೆ ಸಚಿವ ವಿ.ಸುನೀಲ್ ಕುಮಾರ್, ಸಮಾಜ ಕಲ್ಯಾಣ ಮತ್ತು ಹಿಂದುಳಿದ ವರ್ಗಗಳ ಖಾತೆ ಸಚಿವ ಕೋಟ ಶ್ರೀನಿವಾಸ ಪೂಜಾರಿ, ರಾಜ್ಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಜಿ.ವಿ.ರಾಜೇಶ್, ರಾಜ್ಯ ಪ್ರಧಾನ ಕಾರ್ಯದರ್ಶಿ ಮಹೇಶ್ ಟೆಂಗಿನಕಾಯಿ, ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್, ಮಂಗಳೂರು ವಿಭಾಗ ಪ್ರಭಾರಿ ಕೆ.ಉದಯ ಕುಮಾರ್ ಶೆಟ್ಟಿ, ಶಾಸಕರಾದ ಕೆ.ರಘುಪತಿ ಭಟ್, ಲಾಲಾಜಿ ಆರ್. ಮೆಂಡನ್, ಹಾಲಾಡಿ ಶ್ರೀನಿವಾಸ ಶೆಟ್ಟಿ, ಬಿ.ಎಂ.ಸುಕುಮಾರ್ ಶೆಟ್ಟಿ ಭಾಗವಹಿಸಲಿದ್ದಾರೆ.

ರಾಜ್ಯ ವಿಶೇಷ ಕಾರ್ಯಕಾರಣಿ ಹಿನ್ನೆಲೆಯಲ್ಲಿ ನ.21ರಂದು ಸಂಜೆ 6 ಗಂಟೆಗೆ ಬಿಜೆಪಿ ಯುವ ಮೋರ್ಚಾ ರಾಜ್ಯ ಪದಾಧಿಕಾರಿಗಳ ಸಭೆ ನಡೆಯಲಿದೆ ಎಂದು ತಿಳಿಸಿದರು

ಯುವ ಮೋರ್ಚಾ ಜಿಲ್ಲಾ ಉಪಾಧ್ಯಕ್ಷ ಅಕ್ಷಿತ್ ಶೆಟ್ಟಿ ಹೆರ್ಗ, ಪ್ರಧಾನ ಕಾರ್ಯದರ್ಶಿ ಶರತ್ ಶೆಟ್ಟಿ ಉಪ್ಪುಂದ, ಸಹ ವಕ್ತಾರ ಶಿವಕುಮಾರ್ ಅಂಬಲಪಾಡಿ, ಕಾರ್ಯಾಲಯ ಕಾರ್ಯದರ್ಶಿ ಸತ್ಯಾನಂದ ನಾಯಕ್, ಯುವ ಮೋರ್ಚಾ ಜಿಲ್ಲಾ ಕಾರ್ಯದರ್ಶಿ ಸತೀಶ್ ಪೂಜಾರಿ ಉದ್ಯಾವರ ಮತ್ತು ಅಭಿರಾಜ್ ಸುವರ್ಣ ಪತ್ರಿಕಾಗೋಷ್ಠಿಯಲ್ಲಿ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.