ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಜಿಲ್ಲೆಗೆ ಅವಳಿ ಸಚಿವ ಸ್ಥಾನ: ಸಂಭ್ರಮ

ಪಟಾಕಿ ಸಿಡಿಸಿ, ಸಿಹಿ ಹಂಚಿ ಕಾರ್ಯಕರ್ತರ ಸಂಭ್ರಮಾಚರಣೆ
Last Updated 4 ಆಗಸ್ಟ್ 2021, 15:12 IST
ಅಕ್ಷರ ಗಾತ್ರ

ಉಡುಪಿ: ಶಾಸಕ ಸುನಿಲ್ ಕುಮಾರ್ ಹಾಗೂ ಕೋಟ ಶ್ರೀನಿವಾಸ ಪೂಜಾರಿ ಅವರು ಸಚಿವರಾಗುತ್ತಿದ್ದಂತೆ, ತವರು ಜಿಲ್ಲೆಯಲ್ಲಿ ಸಂಭ್ರಮ ಮನೆಮಾಡಿದೆ. ಉಭಯ ನಾಯಕರ ಅಭಿಮಾನಿಗಳು ಹಾಗೂ ಬಿಜೆಪಿ ಕಾರ್ಯಕರ್ತರು ಸಂಭ್ರಮ ಆಚರಿಸಿದ್ದಾರೆ.

ಜಿಲ್ಲಾ ಬಿಜೆಪಿ ಕಚೇರಿ ಎದುರು ಕಾರ್ಯಕರ್ತರು ಸಂಭ್ರಮಾಚರಣೆ ಮಾಡಿದರು. ಪಕ್ಷದ ಪರ ಹಾಗೂ ನಾಯಕರ ಪರ ಘೋಷಣೆ ಕೂಗಿ ಸಂತಸ ವ್ಯಕ್ತಪಡಿಸಿದರು.

ಒಂದೇ ಅವಧಿಯಲ್ಲಿ ಮೊದಲ ಬಾರಿಗೆ ಜಿಲ್ಲೆಯ ಇಬ್ಬರಿಗೆ ಸಚಿವ ಸ್ಥಾನ ನೀಡಿರುವುದು ಸ್ವಾಗತಾರ್ಹ ಎಂದು ಉಡುಪಿ ಪೆರಂಪಳ್ಳಿ ಬಿಜೆಪಿ ಘಟಕದಿಂದ ಸಂಭ್ರಮಾಚರಣೆ ಮಾಡಲಾಯಿತು. ಕಾರ್ಯಕರ್ತರು ಹಾಗೂ ಅಭಿಮಾನಿಗಳು ಪಟಾಕಿ ಸಿಡಿಸಿ, ಸಿಹಿ ಹಂಚಿ ಸಂಭ್ರಮಿಸಿದರು.

ಬೆಂಗಳೂರಿನ ಬಿಜೆಪಿ ಕಚೇರಿಯಲ್ಲಿ ಕೋಟ ಶ್ರೀನಿವಾಸ ಪೂಜಾರಿ ಅರವರನ್ನು ಅಭಿನಂದಿಸಲಾಯಿತು. ಈ ಸಂದರ್ಭ ಮಂಗಳೂರು ವಿಭಾಗ ಪ್ರಭಾರಿ ಕೆ. ಉದಯ ಕುಮಾರ್ ಶೆಟ್ಟಿ, ಉಡುಪಿ ಜಿಲ್ಲಾ ಘಟಕದ ಅಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್, ಕರಾವಳಿ ಪ್ರಾಧಿಕಾರದ ಅಧ್ಯಕ್ಷ ಮಟ್ಟಾರು ರತ್ನಾಕರ ಹೆಗ್ಡೆ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸದಾನಂದ , ಜಿಲ್ಲಾ ವಕ್ತಾರ ಗುರುಪ್ರಸಾದ್, ಸತೀಶ್ ಕುಂಪಲ ಇದ್ದರು.

ಸುನಿಲ್ ಕುಮಾರ್ ಹಾಗೂ ಕೋಟ ಶ್ರೀನಿವಾಸ ಪೂಜಾರಿ ಅವರಿಗೆ ಆ.6ರಂದು ಮಧ್ಯಾಹ್ನ 3ಕ್ಕೆ ಅಮೃತ್ ಗಾರ್ಡನ್‌‌ನಲ್ಲಿ ಅಭಿನಂದನಾ ಸಮಾರಂಭ ಆಯೋಜಿಸಲಾಗಿದೆ. ಪರ್ಕಳದಲ್ಲಿ ಮಧ್ಯಾಹ್ನ 2.30ಕ್ಕೆ ಇಬ್ಬರು ನಾಯಕರನ್ನು ಸ್ವಾಗತಿಸಿ ಅಮೃತ್ ಗಾರ್ಡನ್‌ಗೆ ಕರೆದೊಯ್ಯಲಾಗುವುದು ಎಂದು ಶಾಸಕ ರಘುಪತಿ ಭಟ್ ತಿಳಿಸಿದ್ದಾರೆ.

ಜಿಲ್ಲಾ ಬಿಜೆಪಿ ಅಭಿನಂದನೆ:ಜಿಲ್ಲೆಯ ಇಬ್ಬರು ನಾಯರಿಗೆ ಸಚಿವ ಸ್ಥಾನ ದೊರೆತಿರುವುದು ಸಂತಸದ ವಿಚಾರ. ಕರಾವಳಿಯ ಉಡುಪಿ ಜಿಲ್ಲೆಗೆ ಅವಳಿ ಸಚಿವರನ್ನು ನೀಡಿದ ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್ ಷಾ, ರಾಷ್ಟ್ರೀಯ ಅಧ್ಯಕ್ಷರಾದ ಜೆ.ಪಿ.ನಡ್ಡ, ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ, ರಾಜ್ಯ ಘಟಕದ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರಿಗೆ ಜಿಲ್ಲಾ ಬಿಜೆಪಿಯಿಂದ ಅಭಿನಂದನೆ ಸಲ್ಲಿಸುವುದಾಗಿ ಜಿಲ್ಲಾ ಘಟಕದ ಅಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ತಿಳಿಸಿದ್ದಾರೆ.

ಉಸ್ತುವಾರಿ ಸಚಿವರ ನೇಮಕ

ಸಚಿವ ಸಂಪುಟ ರಚನೆಯಾದ ಬೆನ್ನಲ್ಲೇ ಜಿಲ್ಲಾ ಉಸ್ತುವಾರಿ ಸಚಿವರ ನೇಮಕ ಮಾಡಲಾಗಿದ್ದು ವಿ.ಸುನಿಲ್ ಕುಮಾರ್ ಅವರನ್ನು ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರನ್ನಾಗಿ ಹಾಗೂ ಕೋಟ ಶ್ರೀನಿವಾಸ ಪೂಜಾರಿ ಅವರನ್ನು ಕೊಡಗು ಜಿಲ್ಲಾ ಉಸ್ತುವಾರಿ ಸಚಿವರನ್ನಾಗಿ ನೇಮಿಸಲಾಗಿದೆ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT