ಬೈಂದೂರು: ಇಲ್ಲಿನ ಪಟ್ಟಣ ಪಂಚಾಯಿತಿಯಿಂದ ಗ್ರಾಮೀಣ ಪ್ರದೇಶಗಳನ್ನು ಬೇರ್ಪಡಿಸಬೇಕು ಎಂದು ರೈತರು ಹೋರಾಟ ನಡೆಸುತ್ತಿರುವುದು ನ್ಯಾಯಯುತವಾಗಿದೆ. ರೈತರಿಗೆ ನ್ಯಾಯ ಒದಗಿಸುವ ನೆಲೆಯಲ್ಲಿ ಭಾರತೀಯ ಜನತಾ ಪಕ್ಷ ಸದಾ ರೈತರ ಪರವಾಗಿದೆ ಎಂಬ ನಿಲುವು ಸ್ಪಷ್ಟಪಡಿಸುವ ಉದ್ದೇಶದಿಂದ ಪ್ರತಿಭಟನೆ ಕೈಗೊಂಡಿದ್ದೇವೆ ಎಂದು ಶಾಸಕ ಗುರುರಾಜ ಗಂಟಿಹೊಳೆ ಹೇಳಿದರು.

ಬಿಜೆಪಿ ವತಿಯಿಂದ ಇಲ್ಲಿನ ಪಟ್ಟಣ ಪಂಚಾಯಿತಿ ಅವೈಜ್ಞಾನಿಕತೆ ರದ್ದುಪಡಿಸುವಂತೆ ತಾಲ್ಲೂಕು ಆಡಳಿತದ ಸೌಧದ ಎದುರು ನಡೆದ ಪ್ರತಿಭಟನೆಯಲ್ಲಿ ಅವರು ಮಾತನಾಡಿ, ಬೈಂದೂರು ಪಟ್ಟಣ ಪಂಚಾಯಿತಿ ವ್ಯಾಪ್ತಿಯ ಗ್ರಾಮೀಣ ಭಾಗದ ರೈತರಿಗೆ ಅನೇಕ ತೊಂದರೆಗಳಾಗುತ್ತಿದೆ ಎಂದರು.

ಮುಖಂಡರು ಮಾತನಾಡಿದರು. ತಹಶೀಲ್ದಾರ್ ರಾಮಚಂದ್ರಪ್ಪ ಅವರ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಲಾಯಿತು. ಪ್ರತಿಭಟನೆಗೂ ಮೊದಲು ಬೈಂದೂರು ಸೇನೇಶ್ವರ ದೇವಸ್ಥಾನದಿಂದ ತಾಲ್ಲೂಕು ಆಡಳಿತ ಸೌಧದವರೆಗೆ ನೂರಾರು ರೈತರು ಕಾಲ್ನಡಿಗೆ, ಬೈಕ್ ರ್ಯಾಲಿ ನಡೆಸಿದರು.

ಕಿಸಾನ್ ಸಂಘದ ಕುಮ್ಕಿ ಹೊರಾಟಗಾರ ಸತ್ಯನಾರಾಯಣ ಭಟ್, ಜಿ.ಪಂ. ಮಾಜಿ ಸದಸ್ಯ ಸುರೇಶ ಬಟವಾಡಿ, ಬಿಜೆಪಿ ಮಂಡಲ ಅಧ್ಯಕ್ಷೆ ಅನಿತಾ ಆರ್.ಕೆ, ಪ್ರಧಾನ ಕಾರ್ಯದರ್ಶಿ ಗೋಪಾಲ ಪೂಜಾರಿ ವಸ್ರೆ, ಯುವ ಮೋರ್ಚಾ ಅಧ್ಯಕ್ಷ ಗಜೇಂದ್ರ ಬೇಲೆಮನೆ, ಜೈಸನ್ ಎಂ.ಡಿ. ಜಯಾನಂದ ಹೋಬಳಿದಾರ, ಗೋಪಾಲಕೃಷ್ಣ ಕಲ್ಮಕ್ಕಿ, ಶ್ರೀಧರ ಜಿಜೂರು, ಕಾರ್ಯಕರ್ತರು ಭಾಗವಹಿಸಿದ್ದರು. ಪುಷ್ಟರಾಜ ಶೆಟ್ಟಿ ನಿರೂಪಿಸಿದರು. ಕರಣ್ ಪೂಜಾರಿ ವಂದಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.