ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹಿಮಾಚಲದಲ್ಲಿ ಬಿಜೆಪಿಗೆ ಮುಖಭಂಗ: ಕಾಂಚನ್

Last Updated 8 ಡಿಸೆಂಬರ್ 2022, 16:17 IST
ಅಕ್ಷರ ಗಾತ್ರ

ಉಡುಪಿ: ಗುಜರಾತ್‌ನಲ್ಲಿ ಬಿಜೆಪಿ ಅಧಿಕಾರ ಉಳಿಸಿಕೊಂಡಿರುವುದನ್ನೇ ದೊಡ್ಡ ಸಾಧನೆ ಎಂಬಂತೆ ಬಿಂಬಿಸಲಾಗುತ್ತಿದೆ. ಹಿಮಾಚಲ ಪ್ರದೇಶದಲ್ಲಿ ಬಿಜೆಪಿ ಅಧಿಕಾರ ಕಳೆದುಕೊಂಡಿರುವುದು ದೊಡ್ಡ ಮುಖಭಂಗ ಎಂದು ಉಡುಪಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಮೇಶ್ ಕಾಂಚನ್ ದೂರಿದ್ದಾರೆ.

ಕಾಂಗ್ರೆಸ್‌ ಮುಕ್ತ ಭಾರತ ಎಂದು ಹೇಳುತ್ತಿದ್ದ ಬಿಜೆಪಿ ಈಚೆಗೆ ನಡೆದ ಹಲವು ಉಪ ಚುನಾವಣೆಗಳ ಸೋಲಿನಿಂದ ಕಂಗೆಟ್ಟಿದೆ. ಕಾಂಗ್ರೆಸ್ ಮುಕ್ತ ಭಾರತ ಅಸಾಧ್ಯ ಎಂಬ ಸ್ಪಷ್ಟ ಸಂದೇಶವನ್ನು ಜನರು ನೀಡಿದ್ದಾರೆ. ಹಿಮಾಚಲ ಪ್ರದೇಶದಲ್ಲಿ ಅಧಿಕಾರ ಹಿಡಿದಿರುವ ಕಾಂಗ್ರೆಸ್‌ ಮತ್ತಷ್ಟು ಬಲಗೊಳ್ಳಲಿದೆ ಎಂದರು.

ಗುಜರಾತ್‌ ಫಲಿತಾಂಶ ಕರ್ನಾಟಕದ ಮುಂದಿನ ಚುನಾವಣೆಗೆ ದಿಕ್ಸೂಚಿ ಎನ್ನುವುದು ಸರಿಯಲ್ಲ. ಕರ್ನಾಟಕ ಭೌಗೋಳಿಕವಾಗಿ ಭಿನ್ನವಾಗಿದ್ದು, ಜನ ಜೀವನ, ಚಿಂತನಕ್ರಮ ಭಿನ್ನವಾಗಿದೆ. ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ಜನವಿರೋಧಿ ನೀತಿಯಿಂದ ಜನರು ಬೇಸತ್ತಿದ್ದಾರೆ. ಕರ್ನಾಟಕದಲ್ಲಿ ಮತ್ತೆ ಕಾಂಗ್ರೆಸ್‌ ಅಧಿಕಾರಕ್ಕೆ ಬರಲಿದೆ.

ಮಲ್ಲಿಕಾರ್ಜುನ್ ಖರ್ಗೆ ಕಾಂಗ್ರೆಸ್‌ ರಾಷ್ಟ್ರೀಯ ಅಧ್ಯಕ್ಷರಾದ ನಂತರ, ರಾಹುಲ್ ಗಾಂಧಿ ಹಾಗೂ ಹಿರಿಯ ನಾಯಕರ ಸಾಮೂಹಿಕ ನಾಯಕತ್ವದಲ್ಲಿ ಕಾಂಗ್ರೆಸ್‌ ಮುನ್ನಡೆಯಲಿದೆ. ಬಿಜೆಪಿಯ ಪತನ ಆರಂಭಗೊಂಡಿದೆ ಎಂದು ರಮೇಶ್ ಕಾಂಚನ್ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT