ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಾಪು: ವಿಕಾಸ್ ತೀರ್ಥ ಬೈಕ್ ರ್‍ಯಾಲಿ

Last Updated 21 ಜೂನ್ 2022, 4:19 IST
ಅಕ್ಷರ ಗಾತ್ರ

ಕಾಪು (ಪಡುಬಿದ್ರಿ): ಕಾಪು ಕ್ಷೇತ್ರ ಬಿಜೆಪಿ ಯುವ ಮೋರ್ಚಾದ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ವಿಕಾಸ್ ತೀರ್ಥ ಬೈಕ್ ರ್‍ಯಾಲಿಗೆ ಕಾಪು ಶಾಸಕ ಲಾಲಾಜಿ ಆರ್. ಮೆಂಡನ್ ಚಾಲನೆ ನೀಡಿದರು.

ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಎಂಟು ವರ್ಷಗಳನ್ನು ಪೂರೈಸುತ್ತಿರುವ ಸಂದರ್ಭದಲ್ಲಿ ನಡೆದ ಈ ರ್‍ಯಾಲಿಯಲ್ಲಿ 200ಕ್ಕೂ ಅಧಿಕ ಬೈಕ್‌ಗಳಲ್ಲಿ ಲಾಲಾಜಿ ಆರ್. ಮೆಂಡನ್ ಸಹಿತ ಪಕ್ಷದ ಮುಖಂಡರು ಮತ್ತು ಕಾರ್ಯಕರ್ತರು ಭಾಗವಹಿಸಿದ್ದರು. ಕಾಪು ಲಕ್ಷ್ಮೀ ಜನಾರ್ದನ ದೇವಸ್ಥಾನ ದಿಂದ ಹೊರಟ ಬೈಕ್ ರ್‍ಯಾಲಿ ಮೂಳೂರು, ಉಚ್ಚಿಲ, ಪಾಂಗಾಳ, ಕಟಪಾಡಿಗೆ ತೆರಳಿ ಮರಳಿ ಕಾಪುವಿಗೆ ಬಂದು ಸಮಾಪನಗೊಂಡಿತು.

ಬಳಿಕ ಮಾತನಾಡಿದ ಲಾಲಾಜಿ ಮೆಂಡನ್, ‘ಕೇಂದ್ರ ಸರ್ಕಾರದ ಯೋಜನೆಗಳನ್ನು ಜನರಿಗೆ ತಲುಪಿಸುವಲ್ಲಿ ಮತ್ತು ಜನರಲ್ಲಿ ಸರ್ಕಾರದ ಬಗ್ಗೆ ವಿಶ್ವಾಸ ಮೂಡಿಸುವಲ್ಲಿ ಯುವ ಮೋರ್ಚಾದ ರ್‍ಯಾಲಿ ಮಹತ್ವವನ್ನು ಪಡೆದಿದೆ’ ಎಂದರು.

ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ಸುರೇಶ್ ನಾಯಕ್, ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಮಟ್ಟಾರು ರತ್ನಾಕರ ಹೆಗ್ಡೆ, ಹಿಂದುಳಿದ ವರ್ಗಗಳ ಮೋರ್ಚಾದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಯಶ್‌ಪಾಲ್ ಸುವರ್ಣ, ಬಿಜೆಪಿ ರಾಜ್ಯ ಕಾರ್ಯಕಾರಣಿ ಸದಸ್ಯರಾದ ಸುರೇಶ್ ಪಿ. ಶೆಟ್ಟಿ ಗುರ್ಮೆ, ಗೀತಾಂಜಲಿ ಸುವರ್ಣ, ರಾಜ್ಯ ಮಹಿಳಾ ಮೋರ್ಚಾ ಪ್ರಧಾನ ಕಾರ್ಯದರ್ಶಿ ಶಿಲ್ಪಾ ಜಿ.ಸುವರ್ಣ, ಯುವ ಮೋರ್ಚಾ ರಾಜ್ಯ ಕಾರ್ಯದರ್ಶಿ ಶ್ವೇತಾ ಪೂಜಾರಿ, ಮಹಿಳಾ ಮೋರ್ಚಾ ಜಿಲ್ಲಾಧ್ಯಕ್ಷೆ ವೀಣಾ ಕೆ.ಶೆಟ್ಟಿ, ಜಿಲ್ಲಾ ಉಪಾಧ್ಯಕ್ಷ ಶ್ರೀಶ ನಾಯಕ್ ಪೆರ್ಣಂಕಿಲ, ಕಾಪು ಕ್ಷೇತ್ರಾಧ್ಯಕ್ಷ ಶ್ರೀಕಾಂತ್ ನಾಯಕ್, ಯುವ ಮೋರ್ಚಾ ಜಿಲ್ಲಾ ಅಧ್ಯಕ್ಷ ವಿಖ್ಯಾತ್ ಶೆಟ್ಟಿ, ಯುವ ಮೋರ್ಚಾ ಕಾಪು ಮಂಡಲ ಅಧ್ಯಕ್ಷ ಸಚಿನ್ ಸುವರ್ಣ ಪಿತ್ರೋಡಿ, ಮುಖಂಡರಾದ ಪ್ರವೀಣ್ ಕುಮಾರ್, ಸುರೇಂದ್ರ ಪಣಿಯೂರು, ಪ್ರವೀಣ್ ಕುಮಾರ್ ಗುರ್ಮೆ, ಸಂತೋಷ್ ಕುಮಾರ್ ಮೂಡುಬೆಳ್ಖೆ, ರವಿ ಸಾಲ್ಯಾನ್, ಯುವ ಮೋರ್ಚಾ ಪದಾಧಿಕಾರಿಗಳಾದ ಸತೀಶ್ ಪೂಜಾರಿ, ವಿಜೇತ್ ಕುಮಾರ್, ಸಚಿನ್ ಸುವರ್ಣ, ಸೋನು ಪಾಂಗಾಳ, ಪ್ರವೀಣ್ ಅಡ್ವೆ, ಪ್ರಕಾಶ್ ಆಚಾರ್ಯ, ರಕ್ಷಿತ್, ಪ್ರವೀಣ್ ಕುಮಾರ್, ಉದಯ್, ಅಭಿರಾಜ್ ಸುವರ್ಣ, ಮಹಿಳಾ ಮೋರ್ಚಾ ಅಧ್ಯಕ್ಷೆ ಸುಮಾ ಯು. ಶೆಟ್ಟಿ, ಪುರಸಭೆ ವ್ಯಾಪ್ತಿ ಬಿಜೆಪಿ ಅಧ್ಯಕ್ಷ ಸಂದೀಪ್ ಶೆಟ್ಟಿ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT