ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಿದ್ಯಾರ್ಥಿನಿಯರಿಗೆ ಗುಪ್ತಸ್ಥಳದಲ್ಲಿ ತರಬೇತಿ: ರಘುಪತಿ ಭಟ್‌ ಆರೋಪ

Last Updated 9 ಫೆಬ್ರುವರಿ 2022, 15:04 IST
ಅಕ್ಷರ ಗಾತ್ರ

ಉಡುಪಿ: ‘ಇಲ್ಲಿನ ಸರ್ಕಾರಿ ಬಾಲಕಿಯರ ಪದವಿಪೂರ್ವ ಕಾಲೇಜಿನಲ್ಲಿ ಹಿಜಾಬ್ ಧರಿಸಿ ತರಗತಿ ಪ್ರವೇಶಕ್ಕೆ ಒತ್ತಾಯಿಸುತ್ತಿರುವ ವಿದ್ಯಾರ್ಥಿನಿಯರಿಗೆ ಧಾರ್ಮಿಕ ವಿಚಾರಗಳ ಬಗ್ಗೆ ಗುಪ್ತಸ್ಥಳದಲ್ಲಿ ತರಬೇತಿ ನೀಡಲಾಗಿದೆ’ ಎಂದು ಶಾಸಕ ರಘುಪತಿ ಭಟ್‌ ಆರೋಪಿಸಿದ್ದಾರೆ.

ಮಾಧ್ಯಮ ಪ್ರತಿನಿಧಿಗಳ ಜತೆ ಮಾತನಾಡಿರುವ ಶಾಸಕರು, ‘ಆರಂಭದಲ್ಲಿ ಉಡುಪಿ ಕಾಲೇಜಿನ 12 ವಿದ್ಯಾರ್ಥಿನಿಯರು ಹಿಜಾಬ್ ಧರಿಸಲು ಅನುಮತಿ ಕೋರಿ ಮನವಿ ನೀಡಿದ್ದರು. ಅವರಲ್ಲಿ 6 ವಿದ್ಯಾರ್ಥಿನಿಯರು ನಿರ್ಧಾರದಿಂದ ಹಿಂದೆ ಸರಿದರು. ಉಳಿದ 6 ವಿದ್ಯಾರ್ಥಿನಿಯರ ತಲೆಗೆ ಧಾರ್ಮಿಕ ವಿಚಾರಗಳನ್ನು ತುಂಬಲಾಗಿದೆ’ ಎಂದರು.

‘ವಿದ್ಯಾರ್ಥಿನಿಯರು, ಪೋಷಕರು ಯಾರ ಜತೆ ಸಂಪರ್ಕ ಹೊಂದಿದ್ದರು, ಹಣಕಾಸು ವ್ಯವಹಾರ ನಡೆದಿದೆಯೇ ಎಂಬೆಲ್ಲ ಮಾಹಿತಿಗಳು ತನಿಖೆಯಿಂದ ಬಯಲಾಗಲಿವೆ’ ಎಂದು ಹೇಳಿದರು.

ಫೋಟೊ ದಾಖಲೆ ಬಿಡುಗಡೆ:ಹಿಜಾಬ್ ಧರಿಸಲು ಅನುಮತಿ ಕೋರಿ ಪ್ರತಿಭಟನೆ ನಡೆಸುತ್ತಿರುವ ವಿದ್ಯಾರ್ಥಿನಿಯರು ಹಿಂದೆ ಶಾಲಾ ನಿಯಮಾವಳಿಗಳಿಗೆ ಒಪ್ಪಿ ಪತ್ರಕ್ಕೆ ಸಹಿ ಹಾಕಿದ ಬಳಿಕವೂ ಹಿಜಾಬ್ ಧರಿಸಲು ಪಟ್ಟು ಹಿಡಿದಿದ್ದಾರೆ. ಪ್ರತಿಭಟನಾ ನಿರತ ವಿದ್ಯಾರ್ಥಿನಿಯರ ಪೈಕಿ ಅಲಿಯಾ ಬಾನು ಎಂಬಾಕೆ ಈ ಹಿಂದೆ ಕಾಲೇಜಿನಲ್ಲಿ ನಡೆದ ಸಮಾರಂಭವೊಂದರಲ್ಲಿ ಹಿಜಾಬ್ ಇಲ್ಲದೆ ಭಾಗವಹಿಸಿದ್ದಾರೆ. ಈ ಬಗ್ಗೆ ಫೋಟೊ ದಾಖಲೆಗಳಿವೆ ಎಂದು ತಿಳಿಸಿದ್ದಾರೆ.

ಉಡುಪಿ ಸರ್ಕಾರಿ ಪದವಿಪೂರ್ವ ಕಾಲೇಜಿನಲ್ಲಿ ಹಿಂದಿನಿಂದಲೂ ವಿದ್ಯಾರ್ಥಿನಿಯರು ಹಿಜಾಬ್ ಧರಿಸುತ್ತಿರಲಿಲ್ಲ. ಈಚೆಗೆ 6 ವಿದ್ಯಾರ್ಥಿನಿಯರು ವಿವಾದ ಸೃಷ್ಟಿಸಿದ್ದಾರೆ ಎಂದು ಹಲವು ಫೋಟೊ ದಾಖಲೆಗಳನ್ನು ಬಿಡುಗಡೆ ಮಾಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT