ಮಂಗಳವಾರ, 23 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಉಡುಪಿ: ಜಿಲ್ಲಾಧಿಕಾರಿ ಕಚೇರಿಗೆ ಬಿಜೆಪಿ ರೈತ ಮೋರ್ಚಾದಿಂದ ಮುತ್ತಿಗೆ

Published 26 ಜೂನ್ 2024, 11:25 IST
Last Updated 26 ಜೂನ್ 2024, 11:25 IST
ಅಕ್ಷರ ಗಾತ್ರ

ಉಡುಪಿ: ಬಿತ್ತನೆ ಬೀಜದ ದರ ಏರಿಕೆಯನ್ನು ವಿರೋಧಿಸಿ ಹಾಗೂ ಹೈನುಗಾರರಿಗೆ ಹಾಲಿನ ಪ್ರೋತ್ಸಾಹ ಧನ ಬಿಡುಗಡೆಗೊಳಿಸಬೇಕೆಂದು ಆಗ್ರಹಿಸಿ ಬಿಜೆಪಿ ಜಿಲ್ಲಾ ಘಟಕ ಹಾಗೂ ಜಿಲ್ಲಾ ಬಿಜೆಪಿ ರೈತ ಮೋರ್ಚಾದ ವತಿಯಿಂದ ಜಿಲ್ಲಾಧಿಕಾರಿ ಕಚೇರಿಗೆ ಬುಧವಾರ ಮುತ್ತಿಗೆ ಹಾಕಿ ಪ್ರತಿಭಟಿಸಲಾಯಿತು.

ಶಾಸಕ ಯಶ್ ಪಾಲ್ ಸುವರ್ಣ, ರೈತ ಮೋರ್ಚಾದ ರಾಜ್ಯ ಘಟಕ ಕಾರ್ಯದರ್ಶಿ ನವೀನ್ ಕುಮಾರ್ , ಜಿಲ್ಲಾ ಘಟಕದ ಅಧ್ಯಕ್ಷ ಕಿಶೋರ್‌ ಕುಮಾರ್‌ ಕುಂದಾಪುರ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿದ ಕಾರ್ಯಕರ್ತರು ಸುರಿಯುವ ಮಳೆಯನ್ನೂ ಲೆಕ್ಕಿಸದೆ ಜಿಲ್ಲಾಧಿಕಾರಿ ಕಚೇರಿಗೆ ಪ್ರವೇಶಿಸಲು ಯತ್ನಿಸಿದರು.

ಪೊಲೀಸರು ಅವರನ್ನು ತಡೆದಾಗ ನೂಕಾಟ ತಳ್ಳಾಟ ನಡೆಯಿತು.

ಬಳಿಕ ಶಾಸಕರು ಹಾಗೂ ಮುಖಂಡರು ಜಿಲ್ಲಾಧಿಕಾರಿ ಕಚೇರಿಗೆ ತೆರಳಿ ಮನವಿ ಸಲ್ಲಿಸಿದರು

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT