ಉಡುಪಿ: ‘ಧರ್ಮಸ್ಥಳ ಕ್ಷೇತ್ರದ ಮೇಲೆ ನಡೆಯುತ್ತಿರುವ ವೈಚಾರಿಕ ಆಕ್ರಮಣ ಇತ್ತೀಚೆಗೆ ನಾವು ಎದುರಿಸುವ ಸವಾಲಾಗಿದ್ದು, ಮೂರು ವರ್ಷಗಳ ಹಿಂದೆ ಉಡುಪಿ ಕೃಷ್ಣ ಮಠದ ಮೇಲೂ ಆಕ್ರಮಣ ನಡೆದಿತ್ತು. ಇನ್ನು ಸ್ವಲ್ಪ ದಿನಗಳಲ್ಲಿ ಬೇರೆ ಬೇರೆ ದೇವಸ್ಥಾನಗಳ ಮೇಲೂ ಆಕ್ರಮಣಗಳು ನಡೆಯಬಹುದು, ಯಾಕೆಂದರೆ ಹುಲಿಗೆ ರಕ್ತದ ರುಚಿ ಸಿಕ್ಕಿದೆ’ ಎಂದು ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್. ಸಂತೋಷ್ ಹೇಳಿದರು.

ಬಿಜೆಪಿ ಉಡುಪಿ ಜಿಲ್ಲಾ ಕಚೇರಿಯ ನೂತನ ಕಟ್ಟಡದ ಭೂಮಿ ಪೂಜೆಯನ್ನು ಶುಕ್ರವಾರ ನೆರವೇರಿಸಿ ಅವರು ಮಾತನಾಡಿದರು.

‘ವೈಚಾರಿಕವಾಗಿರುವ ವಾಮಪಂಥೀಯರು, ರಾಜಕೀಯ ಶಕ್ತಿಗಳು ಶಬರಿಮಲೆಯಲ್ಲಿ ಸ್ವಲ್ಪ ರಕ್ತದ ರುಚಿ ನೋಡಿದರು, ಈಶ ಆಶ್ರಮದಲ್ಲಿ, ಶನಿ ಶಿಂಗ್ನಾಪುರದಲ್ಲಿ ರಕ್ತದ ರುಚಿ ನೋಡಿದರು. ಧರ್ಮಸ್ಥಳದಲ್ಲೂ ಅದನ್ನೇ ಪ್ರಯತ್ನಿಸುತ್ತಿದ್ದಾರೆ’ ಎಂದರು.

‘ನಡೆದಿರತಕ್ಕ ಆಕ್ರಮಣಗಳಿಗೆ ಏನು ಶಿಕ್ಷೆ ಆಗಬೇಕೋ ಅದು ಆಗಬೇಕು. ಜೊತೆಗೆ ನಡೆಯುತ್ತಿರುವ ಅಪಪ್ರಚಾರಗಳಿಗೂ ತಕ್ಕನಾದ ಶಿಕ್ಷೆಯಾಗಬೇಕು’ ಎಂದು ಹೇಳಿದರು.

‘ಕುಂಭಮೇಳದ ಕುರಿತು ಸಾಕಷ್ಟು ಅಪಪ್ರಚಾರಗಳು ನಡೆದವು. ಆದರೆ ನಮ್ಮ ದೇಶದಲ್ಲಿ ಗಟ್ಟಿಯಾದ ನಂಬಿಕೆ ಇದೆ. ಅಪಪ್ರಚಾರ ಮಾಡಿದಷ್ಟು ಅಲ್ಲಿಗೆ ಹೆಚ್ಚು ಜನರು ಹೋಗಿದ್ದಾರೆ’ ಎಂದರು.

‘ದೇಶಕ್ಕೆ, ಸಂಸ್ಕೃತಿಗೆ ಎದುರಾಗುವ ಸವಾಲುಗಳಿಗೆ ನಾವು ತಕ್ಕ ಉತ್ತರ ಕೊಡುತ್ತೇವೆ’ ಎಂದೂ ಹೇಳಿದರು.

ಸಂಸದ ಕೋಟ ಶ್ರೀನಿವಾಸ ಪೂಜಾರಿ, ಶಾಸಕರಾದ ಯಶ್ಪಾಲ್ ಸುವರ್ಣ, ಸುನಿಲ್ ಕುಮಾರ್, ಗುರ್ಮೆ ಸುರೇಶ್ ಶೆಟ್ಟಿ, ಕಿರಣ್ ಕುಮಾರ್ ಕೊಡ್ಗಿ, ಗುರುರಾಜ್ ಗಂಟಿಹೊಳೆ ಉಪಸ್ಥಿತರಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.