ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಕ್ತದಾನ; ದೇಹ ಮನಸ್ಸು ಆರೋಗ್ಯಯುತ

Last Updated 7 ಫೆಬ್ರುವರಿ 2023, 15:20 IST
ಅಕ್ಷರ ಗಾತ್ರ

ಉಡುಪಿ: ರಕ್ತದಾನದಿಂದ ರಕ್ತದೊತ್ತಡ, ಮಧುಮೇಹದಂತಹ ರೋಗಗಳು ನಿಯಂತ್ರಣಕ್ಕೆ ಬರುವುದರ ಜತೆಗೆ ಆತ್ಮತೃಪ್ತಿ ಸಿಗುತ್ತದೆ ಎಂದು ಇಂಡಿಯನ್ ಮೆಡಿಕಲ್ ಅಸೋಸಿಯೇಶನ್ ಉಡುಪಿ ಕರಾವಳಿ ಶಾಖೆಯ ಅಧ್ಯಕ್ಷ ಡಾ.ಪಿ.ವಿ.ಭಂಡಾರಿ ಹೇಳಿದರು.

ಉಡುಪಿ ಮುಸ್ಲಿಂ ವೆಲ್‌ಫೇರ್ ಅಸೋಸಿಯೇಶನ್ ಮತ್ತು ಮಣಿಪಾಲ ಕೆಎಂಸಿಯ ಬ್ಲಡ್‌ಬ್ಯಾಂಕ್ ಸಹಯೋಗದಲ್ಲಿ ಉಡುಪಿ ಜಾಮೀಯ ಮಸೀದಿಯಲ್ಲಿ ಏರ್ಪಡಿಸಲಾದ ರಕ್ತದಾನ ಶಿಬಿರ ಉದ್ಘಾಟಿಸಿ ಮಾತನಾಡಿದರು.

ರಕ್ತದಾನ ಮನುಷ್ಯನ ದೈಹಿಕ ಮತ್ತು ಮಾನಸಿಕ ಆರೋಗ್ಯದ ಮೇಲೆ ಸಕಾರಾತ್ಮಕ ಪರಿಣಾಮ ಬೀರುತ್ತದೆ. ದೇಶದಲ್ಲಿ ಪ್ರತಿವರ್ಷ 41 ದಶಲಕ್ಷ ಯುನಿಟ್ ರಕ್ತದ ಕೊರತೆ ಎದುರಾಗುತ್ತಿದೆ. ಸಮಯಕ್ಕೆ ಸರಿಯಾಗಿ ರಕ್ತ ಸಿಗದೆ ವಿವಿಧ ಕಾಯಿಲೆಗಳಿಂದ ಬಳಲುತ್ತಿರುವ ರೋಗಿಗಳು, ಅಪಘಾತದ ಗಾಯಾಳುಗಳು ಮೃತಪಡುತ್ತಿದ್ದಾರೆ. ಅಮೂಲ್ಯವದ ಜೀವಗಳನ್ನು ಉಳಿಸಲು ರಕ್ತದಾನ ಮಾಡುವುದು ಅತಿ ಅಗತ್ಯವಾಗಿದ್ದು, ಸ್ವಯಂ ಪ್ರೇರಿತರಾಗಿ ರಕ್ತದಾನ ಮಾಡಬೇಕು ಎಂದು ಕರೆ ನೀಡಿದರು.

ಜನಸಾಮಾನ್ಯರಲ್ಲಿ ರಕ್ತದಾನದ ಬಗ್ಗೆ ತಪ್ಪು ಕಲ್ಪನೆಗಳಿದ್ದು ಹೋಗಲಾಡಿಸಬೇಕು. ಹೆಚ್ಚು ಜನರು ಸೇರುವ ಧಾರ್ಮಿಕ ಕೇಂದ್ರಗಳಲ್ಲಿ ನಿಯಮಿತವಾಗಿ ರಕ್ತದಾನ ಶಿಬಿರ ಆಯೋಜಿಸಿದರೆ ದೇಶದಲ್ಲಿನ ರಕ್ತದ ಕೊರತೆ ನೀಗಿಸಬಹುದು. ಧಾರ್ಮಿಕ ಕೇಂದ್ರಗಳು ಪೂಜೆ ಪ್ರಾರ್ಥನೆಗಳಿಗೆ ಸೀಮಿತವಾಗಿರದೆ ಸಮಾಜಮುಖಿಯಾಗಿ ಸ್ಪಂದಿಸಬೇಕು ಎಂದರು.

ಮಣಿಪಾಲ ಕೆಎಂಸಿ ಬ್ಲಡ್ ಬ್ಯಾಂಕಿನ ಡಾ.ಮುಹಮ್ಮದ್ ಅಝೀಝ್ ಮಾತನಾಡಿ, ರಕ್ತದಾನದಿಂದ ಮೂವರ ಪ್ರಾಣ ಉಳಿಸಬಹುದು. ರಕ್ತವನ್ನು ಉತ್ಪಾದಿಸಲು ಸಾಧ್ಯವಿಲ್ಲ. ಮನುಷ್ಯ ದಾನ ಮಾಡಿದರಷ್ಟೆ ರಕ್ತದ ಉತ್ಪಾದನೆ ಸಾಧ್ಯ ಎಂದರು.

ಉಡುಪಿ ಮಸೀದಿ ಅಧ್ಯಕ್ಷ ಮುಹಮ್ಮದ್ ಅರ್ಶಾದ್, ಖತೀಬ್ ವೌಲಾನ ರಶೀದ್ ಅಹ್ಮದ್ ನದ್ವಿ, ಅಸೋಸಿಯೇಶನ್ ಪ್ರಧಾನ ಕಾರ್ಯದರ್ಶಿ ಯು. ಇಬ್ರಾಹಿಮ್ ಇದ್ದರು. ಅಬ್ದುಲ್ ಗಫೂರ್ ಅಧ್ಯಕ್ಷತೆ ವಹಿಸಿದ್ದರು. ಮಾಜಿ ಅಧ್ಯಕ್ಷ ವಿ.ಎಸ್.ಉಮರ್ ಸ್ವಾಗತಿಸಿದರು. ಕಾರ್ಯಕಾರಿ ಸಮಿತಿ ಸದಸ್ಯ ಇಕ್ಬಾಲ್ ಮನ್ನಾ ಕಾರ್ಯಕ್ರಮ ನಿರೂಪಿಸಿ ವಂದಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT