ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಎಂಜಿಎಂ ಕಾಲೇಜಿನಲ್ಲಿ ರಕ್ತದಾನ ಶಿಬಿರ

Last Updated 11 ಜನವರಿ 2023, 12:47 IST
ಅಕ್ಷರ ಗಾತ್ರ

ಉಡುಪಿ: ಎಂಜಿಎಂ ಕಾಲೇಜಿನ ಯೂತ್ ರೆಡ್‌ಕ್ರಾಸ್ ಘಟಕದ ವತಿಯಿಂದ ಕಾಲೇಜಿನ ಐಕ್ಯೂಎಸಿ, ಎನ್‌ಎಸ್ಎಸ್‌, ಎನ್‌ಸಿಸಿ, ರೇಂಜರ್ಸ್ ಮತ್ತು ರೋವರ್ಸ್ ಘಟಕ ಹಾಗೂ ಕಾಮರ್ಸ್ ಕ್ಲಬ್ ಸಹಯೋಗದಲ್ಲಿ ಬೃಹತ್ ರಕ್ತದಾನ ಶಿಬಿರ ನಡೆಯಿತು.

ಮಣಿಪಾಲ ಕೆಎಂಸಿಯ ರಕ್ತನಿಧಿ ವಿಭಾಗದ ಮುಖ್ಯಸ್ಥೆ ಹಾಗೂ ಪ್ರಾಧ್ಯಾಪಕಿ ಶಮೀ ಶಾಸ್ತ್ರಿ ಕಾರ್ಯಕ್ರಮ ಉದ್ಘಾಟಿಸಿ ರಕ್ತದಾನದ ಅಗತ್ಯತೆ ಹಾಗೂ ಸ್ವಯಂಪ್ರೇರಿತ ರಕ್ತದಾನಿಗಳ ಕೊರತೆಯಿಂದ ಉಂಟಾಗುವ ಸಮಸ್ಯೆಯ ಕುರಿತು ಮಾಹಿತಿ ನೀಡಿದರು.

ಕಾಲೇಜಿನ ಪ್ರಾಂಶುಪಾಲ ಪ್ರೊ.ಲಕ್ಷ್ಮೀನಾರಾಯಣ ಕಾರಂತ ಅಧ್ಯಕ್ಷತೆ ವಹಿಸಿ ಮಾತನಾಡಿ, ಎಂಜಿಎಂ ಕಾಲೇಜು ಹಲವು ವರ್ಷಗಳಿಂದ ರಕ್ತದಾನ ಶಿಬಿರವನ್ನು ಆಯೋಜಿಸಿಕೊಂಡು ಬರುತ್ತಿದ್ದು ಸಮಾಜಮುಖಿಯಾಗಿದೆ. ಇಂತಹ ಶಿಬಿರಗಳು ನಿರಂತರವಾಗಿ ನಡೆಯಲಿ ಎಂದು ಹಾರೈಸಿದರು.

ಐಕ್ಯೂಎಸಿ ಸಂಯೋಜಕ ಪ್ರೊ.ಬಿ.ಅರುಣ್ ಕುಮಾರ್, ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿ ಪ್ರೊ.ರಮೇಶ್ ಕಾರ್ಲ, ರೆಡ್‌ಕ್ರಾಸ್ ಸಂಯೋಜಕ ಅನಿಲ್ ಕುಮಾರ್, ಸಹ ಸಂಯೋಜಕಿ ಬಿ.ಯಶಸ್ವಿನಿ, ರೆಡ್‌ಕ್ರಾಸ್ ಕಾರ್ಯದರ್ಶಿ ಶಶಾಂಕ್ ಎಸ್. ಶೆಟ್ಟಿ ಉಪಸ್ಥಿತರಿದ್ದರು. ವಿದ್ಯಾರ್ಥಿ ಶ್ರೀರಶ್ ಕಾರ್ಯಕ್ರಮ ನಿರೂಪಿಸಿದರು. ಕಾಲೇಜಿನಿಂದ ಒಟ್ಟು 119 ಯೂನಿಟ್ ರಕ್ತ ಸಂಗ್ರಹಿಸಿ ಕೆಎಂಸಿ ರಕ್ತನಿಧಿಗೆ ಹಸ್ತಾಂತರಿಸಲಾಯಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT