ಪಡುಬಿದ್ರಿ ಬ್ಲೂ ಫ್ಲಾಗ್ ಬೀಚ್: 17ರಿಂದ ಪ್ರವಾಸಿಗರಿಗೆ ಮುಕ್ತ

ಉಡುಪಿ: ಪಡುಬಿದ್ರಿ ಬ್ಲೂಫ್ಲಾಗ್ ಬೀಚ್ ಡಿ.17ರಿಂದ ಪ್ರವಾಸಿಗರಿಗೆ ಮುಕ್ತವಾಗಿದೆ ಎಂದು ಜಿಲ್ಲಾಡಳಿತ ತಿಳಿಸಿದೆ. ಪ್ರವಾಸಿಗರು ಕಡಲ ತೀರಗಳ ಸುಂದರ ಚಟುವಟಿಕೆಗಳನ್ನು ಆಸ್ವಾದಿಸಲು ಪಡುಬಿದ್ರಿ ಎಂಡ್ ಪಾಯಿಂಟ್ ಬೀಚ್ ಅನ್ನು ಅಂತರರಾಷ್ಟ್ರೀಯ ಮಟ್ಟದಲ್ಲಿ ಮಾನ್ಯತೆ ಹೊಂದಿರುವ ಸುಸಜ್ಜಿತ ಬೀಚ್ ಆಗಿ ಅಭಿವೃದ್ಧಿಪಡಿಸಿದೆ. ಪ್ರವಾಸಿಗರು ಇದರ ಸದುಪಯೋಗಪಡೆದುಕೊಳ್ಳಬೇಕು ಎಂದು ಜಿಲ್ಲಾ ಪ್ರವಾಸೋದ್ಯಮ ಅಭಿವೃದ್ಧಿ ಸಮಿತಿಯ ಅಧ್ಯಕ್ಷರೂ ಆಗಿರುವ ಜಿಲ್ಲಾಧಿಕಾರಿ ಜಿ. ಜಗದೀಶ್ ತಿಳಿಸಿದ್ದಾರೆ.
ಬೀಚ್‌ನಲ್ಲಿ ಬ್ಯಾಂಬೂ ನಿರ್ಮಾಣ ಕಾಮಗಾರಿ ನಡೆಯುತ್ತಿದ್ದ ಕಾರಣ ಪ್ರವಾಸಿಗರ ಪ್ರವೇಶಕ್ಕೆ ನಿರ್ಬಂಧವಿತ್ತು. ಇದೀಗ ಕಾಮಗಾರಿ ಮುಕ್ತಾಯವಾಗಿದ್ದು, ಮತ್ತೆ ಪ್ರವಾಸಿಗರನ್ನು ಕೈಬೀಸಿ ಕರೆಯುತ್ತಿದೆ ಬ್ಲೂಫ್ಲಾಗ್ ಬೀಚ್.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.