ಮಂಗಳವಾರ, ನವೆಂಬರ್ 19, 2019
25 °C
04 udp bojegowda

ಸಾಂವಿಧಾನಿಕ ಸಂಸ್ಥೆಗಳ ದುರುಪಯೋಗ: ಭೋಜೇಗೌಡ

Published:
Updated:

ಉಡುಪಿ: ಇಡಿಯಂತಹ ಸಾಂವಿಧಾನಿಕ ಸಂಸ್ಥೆಗಳನ್ನು ಕೇಂದ್ರ ಸರ್ಕಾರ ದುರುಪಯೋಗ ಮಾಡಿಕೊಂಡಿದ್ದರಿಂದ ಡಿ.ಕೆ.ಶಿವಕುಮಾರ್ ಜೈಲಿಗೆ ಹೋಗಬೇಕಾಯಿತು ಎಂದು ವಿಧಾನ ಪರಿಷತ್ ಸದಸ್ಯ ಭೋಜೇಗೌಡ ಅಭಿಪ್ರಾಯಪಟ್ಟರು.

ಉಡುಪಿಯಲ್ಲಿ ಬುಧವಾರ ಮಾತನಾಡಿದ ಅವರು, ಸಾಂವಿಧಾನಿಕ ಸಂಸ್ಥೆಗಳು ಸ್ವಾಯತ್ತವಾಗಿ ಕೆಲಸ ಮಾಡಬೇಕು. ಡಿ.ಕೆ.ಶಿವಕುಮಾರ್ ಅವರು ಸತತವಾಗಿ ವಿಚಾರಣೆಗೆ ಹಾಜರಾದರೂ, ಸರಿಯಾಗಿ ಸ್ಪಂದಿಸುತ್ತಿಲ್ಲ ಎಂಬ ಕಾರಣ ನೀಡಿ ಅವರನ್ನು ಇಡಿ ಅಧಿಕಾರಿಗಳು ಬಂಧಿಸಿದ್ದು ಸರಿಯಲ್ಲ ಎಂದರು.

ಇದೇವೇಳೆ ಪ್ರಮೋದ್ ಮಧ್ವರಾಜ್ ಜೆಡಿಎಸ್‌ ಸದಸ್ಯತ್ವಕ್ಕೆ ರಾಜೀನಾಮೆ ನೀಡಿರುವ ಕುರಿತು ಪ್ರತಿಕ್ರಿಯಿಸಿದ ಅವರು, ಪಕ್ಷ ಬಿಟ್ಟು ಬೇರೆ ಪಕ್ಷ ಹೋಗುವವರನ್ನು ಹಿಡಿದಿಡಲು ಸಾಧ್ಯವಿಲ್ಲ ಎಂದರು.

ಜಿಲ್ಲಾ ಆಸ್ಪತ್ರೆಗೆ ಭೇಟಿ ನೀಡಿ ಅಲ್ಲಿನ ವ್ಯವಸ್ಥೆಗಳನ್ನು ಪರಿಶೀಲಿಸಿದ ಭೋಜೇಗೌಡರು, ‘ಜಿಲ್ಲಾ ಆಸ್ಪತ್ರೆಯಲ್ಲಿ ಶುಚಿತ್ವದ ಸಮಸ್ಯೆ ಇಲ್ಲ. ಆದರೆ, ಜಿಲ್ಲಾ ಆಸ್ಪತ್ರೆಗೆ ಕನಿಷ್ಠ 250 ಬೆಡ್‌ಗಳು ಇರಬೇಕಿತ್ತು. ಜತೆಗೆ ಸಿಬ್ಬಂದಿ ಕೊರತೆ ಇರುವುದು ಗಮನಕ್ಕೆ ಬಂದಿದೆ. ಎಲ್ಲ ವಿಭಾಗಕ್ಕೂ ವೈದ್ಯರು ಒಬ್ಬರು ಮಾತ್ರ ಇದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಸರ್ಕಾರ ತಕ್ಷಣ ನೇಮಕಾತಿ ಬಗ್ಗೆ ಗಮನ ಹರಿಸಬೇಕು ಎಂದರು.

ರೋಗಿಗಳನ್ನು ಜಿಲ್ಲಾ ಆಸ್ಪತ್ರೆಯ ಶೌಚಾಲಯದಲ್ಲಿ ಮಲಗಿಸಿಲ್ಲ. ಶೌಚಾಲಯದ ಪಕ್ಕದ ಕೊಠಡಿಯಲ್ಲಿ ಹಾಕಲಾಗಿದೆ. ಮುಂದೆ ಈ ರೀತಿಯ ಪ್ರಮಾದಗಳು ಆಗದಂತೆ ಅಧಿಕಾರಿಗಳಿಗೆ ಸೂಚಿಸುತ್ತೇನೆ ಎಂದರು.

ಪ್ರತಿಕ್ರಿಯಿಸಿ (+)