ಕಾಪು (ಪಡುಬಿದ್ರಿ): ಸಮಾಜ ಸೇವಕ ದಿ. ಲೀಲಾಧರ ಶೆಟ್ಟಿ ಮತ್ತು ವಸುಂದರಾ ಶೆಟ್ಟಿ ಅವರ ಸ್ಮರಣಾರ್ಥ ಗುರುವಾರ ಕಾಪು ಶ್ರೀವೀರಭದ್ರ ಸಭಾಭವನದಲ್ಲಿ ರಕ್ತದಾನ ಶಿಬಿರ ನೆರವೇರಿತು.

ಮುಳುಗು ತಜ್ಞ ಅಶೋಕ್ ಶೆಟ್ಟಿ ದೆಂದೂರು ದಂಪತಿ ಹಾಗೂ ಕಾಪು ಪುರಸಭೆ ಪೌರಕಾರ್ಮಿಕರನ್ನು ಸನ್ಮಾನಿಸಲಾಯಿತು. 110 ಯುನಿಟ್ ರಕ್ತ ಸಂಗ್ರಹಿಸಲಾಯಿತು. ದಿ. ಲೀಲಾಧರ ಶೆಟ್ಟಿ ದಂಪತಿಗಳ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಲಾಯಿತು.

ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಕಾಪು ಶ್ರೀಲಕ್ಷ್ಮಿ ಜನಾರ್ದನ ದೇಗುಲದ ಮೊಕ್ತೇಸರ ಮನೋಹರ ಎಸ್ ಶೆಟ್ಟಿ, ‘ಲೀಲಾಧರ ಶೆಟ್ಟಿಯವರು ನಮ್ಮನ್ನು ಆಗಲಿ ಒಂದು ವರ್ಷವಾದರೂ ಅವರು ಮಾಡಿದ ಸಮಾಜ ಸೇವೆ ನಿತ್ಯ ನಿರಂತರ’ ಎಂದರು.

ಕಾಪು ತಹಶೀಲ್ದಾರ್ ಪ್ರತಿಭಾ ಆರ್ ಮಾತನಾಡಿ, ‘ಸಮಾಜ ಸೇವಕ ದಿ. ಲೀಲಾಧರ ಶೆಟ್ಟಿ ಅವರ ಸಾಮಾಜಿಕ ಸೇವೆ, ರಕ್ತದಾನ ಶಿಬಿರ, ಅಶಕ್ರು– ಶಾಲಾ ಮಕ್ಕಳಿಗೆ ನೀಡಿದ ಸಹಾಯ ಎಂದೂ ಮರೆಯಲಾಗದು’ ಎಂದರು.

ಮಾಜಿ ಶಾಸಕ ಲಾಲಾಜಿ ಆರ್ ಮೆಂಡನ್, ಪುರಸಭಾಧ್ಯಕ್ಷೆ ಕುಮಾರಿ ಹರಿನಾಕ್ಷಿ ದೇವಾಡಿಗ, ಶ್ರೀಧರ್ ಶೆಟ್ಟಿ ಮುಲುಂಡ್, ಯೋಗೇಶ್ ಶೆಟ್ಟಿ, ಜಯಲಕ್ಷ್ಮಿ ಸುರೇಶ್ ಶೆಟ್ಟಿ, ಪ್ರಭಾಕರ್ ಪೂಜಾರಿ, ಡಾ. ವೀಣಾ ಕುಮಾರಿ, ಡಾ. ರಾಜಶ್ರೀ ಕಿಣಿ, ಮೋಹನ್ ದಾಸ್ ಶೆಟ್ಟಿ ಕರಂದಾಡಿ, ಕುತ್ಯಾರು ಪ್ರಸಾದ್ ಶೆಟ್ಟಿ, ರಮೇಶ್ ಶೆಟ್ಟಿ ಜಾರ್ಕಳ ಇದ್ದರು.

ಪ್ರಭಾತ್ ಶೆಟ್ಟಿ ಸ್ವಾಗತಿಸಿದರು. ಸೂರಿ ಶೆಟ್ಟಿ ಪ್ರಾಸ್ತಾವಿಕವಾಗಿ ಮಾತನಾಡಿದರು. ದಿವಾಕರ್ ಶೆಟ್ಟಿ ಮಲ್ಲಾರು ನಿರೂಪಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.