ಭಾನುವಾರ, 15 ಸೆಪ್ಟೆಂಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಪುಸ್ತಕದಿಂದ ಬೌದ್ಧಿಕ ಸತ್ಯದ ದರ್ಶನ: ಸಾಹಿತಿ ಜನಾರ್ದನ ಭಟ್

ಮನೆಯೇ ಗ್ರಂಥಾಲಯದ ನೂರರ ಸಂಭ್ರಮ
Published : 4 ಸೆಪ್ಟೆಂಬರ್ 2024, 4:38 IST
Last Updated : 4 ಸೆಪ್ಟೆಂಬರ್ 2024, 4:38 IST
ಫಾಲೋ ಮಾಡಿ
Comments

ಉಡುಪಿ: ಪುಸ್ತಕ ನೀಡುವ ಬೌದ್ಧಿಕ ಸತ್ಯದ ದರ್ಶನ ಯಾವುದೇ ಮಾಧ್ಯಮಗಳು ನೀಡಲು ಸಾಧ್ಯವಿಲ್ಲ ಪುಸ್ತಕದಿಂದ ಬದುಕು ಬದಲಾಗಲು ಸಾಧ್ಯ ಎಂದು ಸಾಹಿತಿ ಬಿ.ಜನಾರ್ದನ ಭಟ್ ಹೇಳಿದರು.

ಕನ್ನಡ ಸಾಹಿತ್ಯ ಪರಿಷತ್ ಉಡುಪಿ ತಾಲ್ಲೂಕು ಘಟಕದ ವತಿಯಿಂದ ಮಂಗಳವಾರ ಡಾ.ಎ.ವಿ.ಬಾಳಿಗ ಆಸ್ಪತ್ರೆ ಸಭಾಂಗಣದಲ್ಲಿ ನಡೆದ ಮನೆಯೇ ಗ್ರಂಥಾಲಯ ಅಭಿಯಾನದ ಶತ ಸಂಭ್ರಮ ಕಾರ್ಯಕ್ರಮದಲ್ಲಿ ಗ್ರಂಥಾಲಯಕ್ಕೆ ಪುಸ್ತಕ ಹಸ್ತಾಂತರಿಸಿ ಅವರು ಮಾತನಾಡಿದರು.

ಪುಸ್ತಕ ಓದುವ ಅಭ್ಯಾಸ ಈಚೆಗಿನ ಶಿಕ್ಷಣ ಕ್ರಮದಿಂದ ಕಡಿಮೆಯಾಗುತ್ತಿದೆ. ಈ ನಿಟ್ಟಿನಲ್ಲಿ ಕಸಾಪದ ಈ ಕಾರ್ಯಕ್ರಮ ಶ್ಲಾಘನೀಯ ಎಂದರು.

ವಿದೇಶದಲ್ಲಿ ಯಾವುದೇ ಪುಸ್ತಕವನ್ನು ಡಿಜಿಟಲ್ ಮಾಧ್ಯಮದ ಮೂಲಕ ಕ್ಷಣಾರ್ಧದಲ್ಲಿ ಪಡೆಯುವ ವ್ಯವಸ್ಥೆ ಇದೆ.ಇದು ಕನ್ನಡದಲ್ಲಿ ಕೂಡ ನಡೆಯಬೇಕು ಎಂದರು.

ಅಧ್ಯಕ್ಷತೆ ವಹಿಸಿ ಮಾತನಾಡಿದ ಆಸ್ಪತ್ರೆಯ ವೈದ್ಯಕೀಯ ನಿರ್ದೇಶಕ ಡಾ.ಪಿ.ವಿ. ಭಂಡಾರಿ, ಮಾನಸಿಕ ಒತ್ತಡ ಕಡಿಮೆ ಮಾಡಲು ಪುಸ್ತಕ ಅತ್ಯುತ್ತಮ ಸಾಧನ ಎಂದರು.

ಸಂಸ್ಕೃತಿ ವಿಶ್ವ ಪ್ರತಿಷ್ಠಾನದ ಸ್ಥಾಪಕರಾದ ವಿಶ್ವನಾಥ ಶೆಣೈ ಗ್ರಂಥಾಲಯ ಉದ್ಘಾಟಿಸಿದರು. ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕಿ ಪೂರ್ಣಿಮಾ, ಸಂಸ್ಕೃತಿ ವಿಶ್ವ ಪ್ರತಿಷ್ಠಾನದ ಅಧ್ಯಕ್ಷ ಪ್ರೊ. ಶಂಕರ್, ಮನೋರೋಗ ತಜ್ಞ ಡಾ. ವಿರೂಪಾಕ್ಷ ದೇವರಮನೆ, ಕಸಾಪ ಉಡುಪಿ ಜಿಲ್ಲಾ ಸಹಕಾರ್ಯದರ್ಶಿ ಮೋಹನ್ ಉಡುಪ, ಇದೇ ಸಂದರ್ಭದಲ್ಲಿ ಕಸಾಪ ಉಡುಪಿ ತಾಲ್ಲೂಕು ಘಟಕದ ಗೌರವ ಕಾರ್ಯದರ್ಶಿ ರಂಜಿನಿ ವಸಂತ್ , ಸದಸ್ಯರಾದ ಭುವನ ಪ್ರಸಾದ್ ಹೆಗ್ಡೆ, ಡಾ. ನರೇಂದ್ರ ಕುಮಾರ್, ದೀಪ ಚಂದ್ರಶೇಖರ್, ಹಫೀಸ್ ರೆಹಮಾನ್, ಸಿದ್ದಬಸಯ್ಯ ಸ್ವಾಮಿ ಚಿಕ್ಕಮಠ, ಉರಗಪ್ರೇಮಿ ಗುರುರಾಜ್ ಸನಿಲ್ ಇದ್ದರು.

ಮನೆಯೇ ಗ್ರಂಥಾಲಯ ಅಭಿಯಾನದ ಸಂಚಾಲಕ ರಾಘವೇಂದ್ರ ಪ್ರಭು ಕರ್ವಾಲು ಅವರನ್ನು ಅಭಿನಂದಿಸಲಾಯಿತು. ಕಸಾಪ ಉಡುಪಿ ತಾಲೂಕು ಅಧ್ಯಕ್ಷ ರವಿರಾಜ್ ಎಚ್.ಪಿ. ಸ್ವಾಗತಿಸಿ, ಆಶಯ ಮಾತುಗಳನ್ನಾಡಿದರು. ರಾಘವೇಂದ್ರ ಪ್ರಭು ಕರ್ವಾಲು ನಿರೂಪಿಸಿದರು. ಸೌಮ್ಯ ವಂದಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT