ಮಂಗಳವಾರ, ಮೇ 11, 2021
25 °C

16 ಸಾವಿರ ಪೊಲೀಸ್ ಸಿಬ್ಬಂದಿ ನೇಮಕ: ಗೃಹ ಸಚಿವ ಬಸವರಾಜ ಬೊಮ್ಮಾಯಿ ಹೇಳಿಕೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಉಡುಪಿ: ‘ರಾಜ್ಯ ಸರ್ಕಾರ ಈ ವರ್ಷ 6 ಸಾವಿರ ಪೊಲೀಸ್ ಸಿಬ್ಬಂದಿ ನೇಮಕ ಮಾಡಿಕೊಳ್ಳುತ್ತಿದ್ದು, ಮುಂದಿನ 3 ವರ್ಷಗಳಲ್ಲಿ 16 ಸಾವಿರ ಪೊಲೀಸರ ನೇಮಕಾತಿ ಮಾಡಲಾಗುವುದು’ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ತಿಳಿಸಿದರು.

ಕಾರ್ಕಳದಲ್ಲಿ ಶನಿವಾರ ಪೊಲೀಸ್ ವಸತಿ ಸಮುಚ್ಚಯ ಉದ್ಘಾಟಿಸಿ ಮಾತನಾಡಿದ ಅವರು, ‘ನೇಮಕಾತಿ ಸಂಪೂರ್ಣ ಪಾರದರ್ಶಕವಾಗಿ ನಡೆಯಲಿದೆ. ಶೇ 25 ಮಹಿಳೆಯರಿಗೆ ಮತ್ತು ಶೇ 2 ರಷ್ಟು ಕ್ರೀಡಾಪಟುಗಳಿಗೆ ಮೀಸಲಾತಿ ನೀಡಲಾಗುವುದು’ ಎಂದರು.

‘ಪೊಲೀಸ್‌ ವ್ಯವಸ್ಥೆಯ ಸುಧಾರಣೆಗೆ ಸಂಬಂಧಿಸಿದಂತೆ ಪೊಲೀಸ್ ಮಹಾನಿರ್ದೇಶಕ ಪ್ರವೀಣ್‌ ಸೂದ್‌ ಅವರು ಮಾರ್ಚ್‌ 31 ರೊಳಗೆ ವರದಿ ಸಲ್ಲಿಸಲಿದ್ದು, ವರದಿ ಆಧರಿಸಿ ಅಗತ್ಯ ಕ್ರಮ ಕೈಗೊಳ್ಳಲಾಗುವುದು’ ಎಂದ ಅವರು, ‘ಈಗಾಗಲೇ ರಾಜ್ಯ ಸರ್ಕಾರ 11 ಸಾವಿರ ಪೊಲೀಸ್ ವಸತಿ ಸಮುಚ್ಚಯ ನಿರ್ಮಾಣ ಮಾಡಿದ್ದು, ಬೇರೆ ರಾಜ್ಯಕ್ಕೆ ಹೋಲಿಸಿದರೆ ವಸತಿ ನಿರ್ಮಾಣದಲ್ಲಿ ರಾಜ್ಯವೇ ಪ್ರಥಮ ಸ್ಥಾನದಲ್ಲಿದೆ’ ಎಂದು ಹೇಳಿದರು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು