ಬುಧವಾರ, ಜನವರಿ 20, 2021
27 °C

ಮೊಬೈಲ್ ಕಿತ್ತುಕೊಂಡಿದ್ದಕ್ಕೆ ಶೌಚಾಲಯ ಸೇರಿದ್ದ ಬಾಲಕ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಉಡುಪಿ: ಪೋಷಕರು ಮೊಬೈಲ್‌ ಕಸಿದುಕೊಂಡಿದ್ದಕ್ಕೆ ಬೇಸರಗೊಂಡ ಬಾಲಕ ಮೂರುತಾಸು ಶೌಚಾಲಯದೊಳಗೆ ಸೇರಿಕೊಂಡು ಆತಂಕ ಮೂಡಿಸಿದ ಘಟನೆ ಶನಿವಾರ ಮಣಿಪಾಲದ ಎಂಐಟಿ ಸಿಬ್ಬಂದಿಗಳ ವಸತಿಗೃಹದಲ್ಲಿ ನಡೆದಿದೆ. ಸುದ್ದಿ ತಿಳಿದ ಕೂಡಲೇ ಸ್ಥಳಕ್ಕೆ ಧಾವಿಸಿದ ಅಗ್ನಿಶಾಮಕ ಸಿಬ್ಬಂದಿ ಬಾಲಕನನ್ನು ರಕ್ಷಣೆ ಮಾಡಿದ್ದಾರೆ.

ರಾತ್ರಿಯಿಡೀ ಮೊಬೈಲ್‌ ಗೇಮ್ ಆಡುತ್ತಿದ್ದ ಮಗನಿಗೆ ತಾಯಿ ಬೈದು ಬುದ್ದಿವಾದ ಹೇಳಿ ಮೊಬೈಲ್ ಕಿತ್ತುಕೊಂಡಿದ್ದರು. ಇದರಿಂದ ಕೋಪಗೊಂಡ ಬಾಲಕ ಶೌಚಾಲಯದ ಒಳಗೆ ಹೋಗಿ ಬಾಗಿಲು ಹಾಕಿಕೊಂಡಿದ್ದ. ಎಷ್ಟು ಅಂಗಲಾಚಿದರೂ ಬಾಗಿಲು ತೆರೆಯಲಿಲ್ಲ. ಇದರಿಂದ ಆತಂಕಗೊಂಡ ತಾಯಿ ಕಲಾ ಅಗ್ನಿಶಾಮಕ ದಳದ ಸಿಬ್ಬಂದಿಗೆ ಕರೆ ಮಾಡಿ ವಿಚಾರ ತಿಳಿಸಿದರು.

ತಕ್ಷಣ ಸ್ಥಳಕ್ಕೆ ಬಂದ ಸಿಬ್ಬಂದಿ ಹಗ್ಗದ ಸಹಾಯದಿಂದ ನಾಲ್ಕನೇ ಮಹಡಿಯಲ್ಲಿದ್ದ ಶೌಚಾಲಯದ ಕಿಟಕಿ ಮುರಿದು ಒಳ ಪ್ರವೇಶಿಸಿ ಬಾಲಕನನ್ನು ರಕ್ಷಣೆ ಮಾಡಿದರು. ಬಾಲಕ ಆರೋಗ್ಯವಾಗಿದ್ದಾನೆ ಎಂದು ಅಗ್ನಿಶಾಮಕ ದಳದ ಸಿಬ್ಬಂದಿ ತಿಳಿಸಿದ್ದಾರೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು