ಕೋಟ(ಬ್ರಹ್ಮಾವರ): ಕುಂದಾಪುರ ಕನ್ನಡ ಎಂಬ ಗ್ರಾಮೀಣ ಸೊಗಡಿನ ಕನ್ನಡ ಭಾಷಿಗೆ ಕೇವಲ ಭಾಷೆಯಾಗಿ ಉಳಿದಿಲ್ಲ, ಬದಲಾಗಿ ಕುಂದಾಪುರ ಕನ್ನಡ ಕರಾವಳಿ ಭಾಗದ ಜನರ ಬದುಕಾಗಿ ಜನ ಜೀವನದಲ್ಲಿ ಹಾಸು ಹೊಕ್ಕಿದೆ ಎಂದು ಉಡುಪಿ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಸಂಸದ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು.

ಕೋಟ ಶಿವರಾಮ ಕಾರಂತ ಥೀಂ ಕೋಟ ಕಾರಂತ ಥೀಂ ಪಾರ್ಕ್ನಲ್ಲಿ ಭಾನುವಾರ ಕೋಟ ಡಾ. ಶಿವರಾಮ ಕಾರಂತ ಹುಟ್ಟೂರ ಪ್ರಶಸ್ತಿ ಪ್ರತಿಷ್ಠಾನ, ಮಣೂರು ಗೀತಾನಂದ ಪೌಂಡೇಶನ್, ಕೋಟತಟ್ಟು ಗ್ರಾಮ ಪಂಚಾಯಿತಿ, ಉಸಿರು ಕೋಟ, ಬ್ರಹ್ಮಾವರ ತಾಲ್ಲೂಕು ಕಾರ್ಯನಿರತ ಪತ್ರಕರ್ತರ ಸಂಘ, ಉಡುಪಿ ಜಿಲ್ಲಾ ಕುಂದಾಪ್ರ ಕನ್ನಡ ಪರಿಷತ್ತಿನ ಸಂಯುಕ್ತ ಆಸರೆಯಲ್ಲಿ ನಡೆದ ಐದನೆಯ ಕುಂದಾಪ್ರ ಕನ್ನಡ ಸಾಹಿತ್ಯ ಸಮ್ಮೇಳನ ಕಾಂಬದ ಸಮಾರೋಪ ಸಮಾರಂಭದಲ್ಲಿ ಅವರು ಮಾತನಾಡಿದರು.

ಮೊದಮೊದಲು ಕುಂದಾಪುರದ ಕನ್ನಡವನ್ನು ಸಾರ್ವಜನಿಕವಾಗಿ ಮಾತನಾಡಲು ತಡಕಾಡುತ್ತಿದ್ದ ದಿನಗಳಿದ್ದವು. ಇಂದಿನ ದಿನಗಳಲ್ಲಿ ಕುಂದಾಪ್ರ ಕನ್ನಡಕ್ಕೆ ತನ್ನದೇ ಆದ ಗೌರವ, ಘನತೆಗಳು ಹೆಚ್ಚುತ್ತಿವೆ. ಆದ್ದರಿಂದ ಕುಂದಾಪ್ರ ಕನ್ನಡವನ್ನು ಹೆಮ್ಮೆಯಿಂದ ಹಂಚಿಕೊಳ್ಳೋಣ ಎಂದು ಕರೆಯಿತ್ತರು.

ಕುಂದಾಪ್ರ ಕನ್ನಡದ ಚಿಂತಕ ಡಾ.ಅಣ್ಣಯ್ಯ ಕುಲಾಲ ಸಮ್ಮೇಳನಾಧ್ಯಕ್ಷತೆ ವಹಿಸಿದ್ದರು. ಇದೇ ಸಂದರ್ಭ ಡಾ. ಅಣ್ಣಯ್ಯ ಕುಲಾಲ್ ದಂಪತಿಗಳನ್ನು ಕುಂದಾಪ್ರ ಕನ್ನಡಿಗರ ಪರವಾಗಿ ಸನ್ಮಾನಿಸಲಾಯಿತು. ಚಿಂತಕ ಡಾ.ಬಾಲಕೃಷ್ಣ ಶೆಟ್ಟಿ ಸಮಾರೋಪ ಭಾಷಣ ಮಾಡಿದರು.

ಕೋಟತಟ್ಟು ಗ್ರಾಮ ಪಂಚಾಯಿತಿ ಅಧ್ಯಕ್ಷ ಸತೀಶ ಕುಂದರ್ಬಾರಿಕೆರೆ, ಪಿಡಿಓ ರವೀಂದ್ರ ರಾವ್, ಕ.ಸಾ.ಪದ ಜಿಲ್ಲಾಧ್ಯಕ್ಷ ನೀಲಾವರ ಸುರೇಂದ್ರ ಅಡಿಗ,ಕಾರಂತ ಪ್ರತಿಷ್ಠಾನದ ಟ್ರಸ್ಟಿ ಸುಶೀಲ ಸೋಮಶೇಖರ, ಸರಸ್ವತಿ, ಕಾರಂತ ಪ್ರತಿಷ್ಠಾನದ ಕಾರ್ಯಾಧ್ಯಕ್ಷ ಆನಂದ ಸಿ ಕುಂದರ್, ಕ.ಸಾ.ಪದ ಪ್ರಧಾನ ಕಾರ್ಯದರ್ಶಿ ನರೇಂದ್ರ ಕುಮಾರ್ ಕೋಟ, ಸತೀಶ ವಡ್ಡರ್ಸೆ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.