ಬ್ರಹ್ಮಾವರ: ಇಲ್ಲಿನ ಕೃಷಿ ಕೇಂದ್ರದ ರಸ್ತೆಯಲ್ಲಿ ನಡೆದ ರಸ್ತೆ ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡಿದ್ದ ನೇಪಾಳ ಮೂಲದ ಯುವಕ ಮದನ್ ಕುಮಾರ್ ನೇಪಾಳ್ (35) ಬೆಂಗಳೂರಿನ ಆಸ್ಪತ್ರೆಯಲ್ಲಿ ಭಾನುವಾರ ಮೃತಪಟ್ಟಿದ್ದಾರೆ.

ಬೆಂಗಳೂರಿನಲ್ಲಿದ್ದ ಮದನ್ ಕುಮಾರ್ ಅವರು ಬ್ರಹ್ಮಾವರದ ಚೇರ್ಕಾಡಿಯಲ್ಲಿರುವ ತನ್ನ ಸ್ನೇಹಿತನನ್ನು ಭೇಟಿ ಮಾಡಲು ಏಪ್ರಿಲ್ 29ರಂದು ಬಂದಿದ್ದರು. ಅಂದು ರಾತ್ರಿ 11.45ರ ವೇಳೆಗೆ ಕೃಷಿ ಕೇಂದ್ರದ ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದಾಗ, ಪೇತ್ರಿ ಕಡೆಯಿಂದ ವೇಗವಾಗಿ ಬಂದ ಅಪರಿಚಿತ ವಾಹನವೊಂದು ಮದನ್ ಅವರಿಗೆ ಡಿಕ್ಕಿ ಹೊಡೆದಿದ್ದು, ರಸ್ತೆಗೆ ಬಿದ್ದಿದ್ದ ಅವರು ಗಂಭೀರವಾಗಿ ಗಾಯಗೊಂಡಿದ್ದರು. ವಾಹನದ ಚಾಲಕ ಸ್ಥಳದಲ್ಲಿ ವಾಹನ ನಿಲ್ಲಿಸದೆ ಪರಾರಿಯಾಗಿದ್ದ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ಸ್ಥಳದಲ್ಲಿದ್ದ ಸಾರ್ವಜನಿಕರು ತಕ್ಷಣ ಗಾಯಾಳುವನ್ನು ಬ್ರಹ್ಮಾವರ ಸಮುದಾಯ ಆರೋಗ್ಯ ಕೇಂದ್ರಕ್ಕೆ ದಾಖಲಿಸಿ ಪ್ರಥಮ ಚಿಕಿತ್ಸೆ ಕೊಡಿಸಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ಉಡುಪಿ ಜಿಲ್ಲಾ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಮೇ 2ರಂದು ಮದನ್ ಅಣ್ಣ ನರೇಶ್ ಕುಮಾರ್ ಅವರು ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಗೆ ಕರೆದೊಯ್ದು ಒಳರೋಗಿಯಾಗಿ ದಾಖಲಿಸಿದ್ದರು ಎಂದು ಮಾಹಿತಿ ನೀಡಿವೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260505-28-720865546

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.