ಬ್ರಹ್ಮಾವರ: ‘ಕೃಷಿ ಭೂಮಿಯನ್ನು ಹಡಿಲು ಬೀಳಲು ಬಿಡಬೇಡಿ’ ಎಂದು ಕೋಟ ರೈತಧ್ವನಿ ಸಂಘಟನೆಯ ಅಧ್ಯಕ್ಷರ ಎಂ. ಜಯರಾಮ ಶೆಟ್ಟಿ ಹೇಳಿದರು.

ಕೋಟದ ಪಂಚವರ್ಣ ಮಹಿಳಾ ಮಂಡಲದ ನೇತೃತ್ವದಲ್ಲಿ ಮಾಣೂರಿನ ಗೀತಾನಂದ ಫೌಂಡೇಷನ್, ಸ್ನೇಹಕೂಟ, ಕಾರ್ಕಡದ ಗೆಳೆಯರ ಬಳಗ, ಕೋಟದ ರೈತಧ್ವನಿ ಸಂಘ, ರೋಟರಿ ಕ್ಲಬ್ ಕೋಟ ಸಾಲಿಗ್ರಾಮ ಸಹಯೋಗದಲ್ಲಿ ನಡೆದ ‘ರೈತರೆಡೆಗೆ ನಮ್ಮ ನಡಿಗೆ’ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಕೃಷಿಯಿಂದ ವಿಮುಖರಾಗುತ್ತಿರುವುದು ಸರಿಯಲ್ಲ. ಮುಂದಿನ ದಿನಗಳಲ್ಲಿ ಕೃಷಿಭೂಮಿಯೇ ನಿಜವಾದ ಶ್ರೀಮಂತಿಕೆಯಾಗಲಿದೆ. ಕೃಷಿಭೂಮಿಯನ್ನು ಪಾಳು ಬಿಟ್ಟರೆ ಭವಿಷ್ಯದಲ್ಲಿ ಸಂಕಷ್ಟ ಎದುರಿಸಬೇಕಾದೀತು ಎಂದು ಅವರು ಹೇಳಿದರು.

ಪಾರಿಜಾತ ಗಿಡ ನೆಟ್ಟು ಗೋ ಪೂಜೆ ನೆರವೇರಿಸಲಾಯಿತು. ಮಣೂರು ಬಾಳೆಬೆಟ್ಟಿನ ಯುವ ಕೃಷಿಕ ಚಂದ್ರಕಾಂತ್ ಮಧ್ಯಸ್ಥ ಅವರಿಗೆ ಪಂಚವರ್ಣ ರೈತ ಪುರಸ್ಕಾರ ಪ್ರದಾನ ಮಾಡಲಾಯಿತು. ಪಂಚವರ್ಣ ಸಂಘಟನೆಯ ಸ್ಥಾಪಕಾಧ್ಯಕ್ಷ ಶೇವಧಿ ಸುರೇಶ್ ಗಾಣಿಗ ಅಧ್ಯಕ್ಷತೆ ವಹಿಸಿದ್ದರು. ಮಣೂರು ಮಹಾಲಿಂಗೇಶ್ವರ ದೇವಸ್ಥಾನ ಆಡಳಿತ ಮಂಡಳಿಯ ಅಧ್ಯಕ್ಷ ಸತೀಶ್ ಎಚ್. ಕುಂದರ್, ಸ್ನೇಹಕೂಟದ ನಿರ್ದೇಶಕ ವಿಷ್ಣುಮೂರ್ತಿ ಮಯ್ಯ, ಗೆಳೆಯರ ಬಳಗದ ಅಧ್ಯಕ್ಷ ಕೆ. ತಾರಾನಾಥ ಹೊಳ್ಳ, ಸ್ನೇಹಕೂಟದ ಅಧ್ಯಕ್ಷೆ ಭಾರತಿ ವಿ. ಮಯ್ಯ ಹಾಗೂ ಪಂಚವರ್ಣ ಮಹಿಳಾ ಮಂಡಲದ ಅಧ್ಯಕ್ಷೆ ಲಲಿತಾ ಪೂಜಾರಿ ಪಾಲ್ಗೊಂಡಿದ್ದರು.

ಮಹಿಳಾ ಮಂಡಲದ ಕಾರ್ಯಾಧ್ಯಕ್ಷೆ ಕಲಾವತಿ ಅಶೋಕ್ ಪ್ರಾಸ್ತಾವಿಕವಾಗಿ ಮಾತನಾಡಿದರು. ನಿವೃತ್ತ ಮುಖ್ಯ ಶಿಕ್ಷಕ ಎಂ. ಎನ್ ಮಧ್ಯಸ್ಥ ಅಭಿನಂದನಾ ನುಡಿಗಳನ್ನಾಡಿದರು. ಸ್ನೇಹಕೂಟದ ವಿನಯ ಉಡುಪ ಸನ್ಮಾನ ಪತ್ರ ವಾಚಿಸಿದರು. ಸಂಚಾಲಕಿ ಸುಜಾತಾ ಬಾಯರಿ ನಿರೂಪಿಸಿದರು. ರವೀಂದ್ರ ಕೋಟ ಸಂಯೋಜಿಸಿದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260525-28-875168922

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.