ಬ್ರಹ್ಮಾವರ: ‘ಸರ್ಕಾರದ ಗ್ಯಾರಂಟಿ ಯೋಜನೆಗಳು ಗ್ರಾಮೀಣ ಮಹಿಳೆಯರ ಆರ್ಥಿಕ ಸಬಲೀಕರಣದೊಂದಿಗೆ ಗ್ರಾಮೀಣ ಆರ್ಥಿಕತೆಗೆ ಪೂರಕವಾಗಿವೆ’ ಎಂದು ಬ್ರಹ್ಮಾವರ ತಾಲ್ಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷೆ ಸುನಿತಾ ಶೆಟ್ಟಿ ಹೇಳಿದರು.

ಬ್ರಹ್ಮಾವರ ತಾಲ್ಲೂಕು ಪಂಚಾಯಿತಿ ಸಭಾಂಗಣದಲ್ಲಿ ನಡೆದ ಸಮಿತಿಯ ಮಾಸಿಕ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು ಆರ್ಥಿಕ ಅಸ್ಥಿರತೆಯ ಇಂದಿನ ದಿನಗಳಲ್ಲಿ ಗ್ಯಾರಂಟಿ ಯೋಜನೆಗಳು ಹೆಚ್ಚು ಅನ್ವಯವಾಗುತ್ತವೆ ಎಂದರು.

ತಾಲ್ಲೂಕು ವ್ಯಾಪ್ತಿಯಲ್ಲಿ ಗ್ಯಾರಂಟಿ ಯೋಜನೆಗಳ ಫಲಾನುಭವಿಗಳಿಗೆ ಸಂಬಂಧಿಸಿ ಹಲವು ಯಶೋಗಾಥೆಗಳು ಇದ್ದು ಅವುಗಳನ್ನು ಸರ್ಕಾರಕ್ಕೆ ಕಳುಹಿಸಲಾಗಿದೆ. ಇನ್ನಷ್ಟು ಯಶೋಗಾಥೆಗಳ ಮಾಹಿತಿ ಸಂಗ್ರಹಿಸಿ ದಾಖಲೀಕರಿಸಲಾಗುವುದು ಎಂದು ಅವರು ಹೇಳಿದರು.

ಸಾರಿಗೆ ಇಲಾಖೆ ವಿರುದ್ಧ ಅಸಮಾಧಾನ: ಸಾರಿಗೆ ಸಂಸ್ಥೆಯ ಕುರಿತು ತೀವ್ರ ಚರ್ಚೆ ನಡೆಯಿತು. ಸಮಿತಿಯ ಸದಸ್ಯ ರಮೇಶ್ ತಿಂಗಳಾಯ ಮಾತನಾಡಿ ‘ಸಾರಿಗೆ ವ್ಯವಸ್ಥೆ ಸುಧಾರಣೆ ಕುರಿತು ಹಿಂದಿನ ಹಲವು ಸಭೆಗಳಲ್ಲಿ ಚರ್ಚಿಸಿದ್ದರೂ ನಿರೀಕ್ಷಿತ ಫಲ ಕಂಡಿಲ್ಲ. ಕೋಡಿಬೇಂಗ್ರೆಗೆ ಬಸ್ ಪುನರಾರಂಭದ ಕುರಿತು ಸ್ಪಷ್ಟನೆ ಲಭಿಸಿಲ್ಲ. ನಿರಾಸಕ್ತಿ ಮುಂದುವರಿದರೆ ಹೋರಾಟ ಮಾಡಲಾಗುವುದು’ ಎಂದು ಎಚ್ಚರಿಸಿದರು.

ಶ್ರೀಕಾಂತ್ ಆಚಾರ್ಯ ಮಾತನಾಡಿ ಸರ್ವಿಸ್ ರಸ್ತೆಯಲ್ಲಿ ನಿರ್ದಿಷ್ಟ ಬಸ್ಗಳು ಕಡ್ಡಾಯವಾಗಿ ಸಂಚರಿಸಬೇಕು ಎಂಬ ನಿಯಮ ಪಾಲನೆಯಾಗುತ್ತಿಲ್ಲ ಎಂದರು. ಶಕ್ತಿ ಯೋಜನೆಯ ಲಾಭ ಮಹಿಳೆಯರಿಗೆ ಸಿಗಬೇಕಾದರೆ ಸಾರಿಗೆ ಸಂಸ್ಥೆ ಇನ್ನಷ್ಟು ಪರಿಣಾಮಕಾರಿಯಾಗಿ ಕೆಲಸ ಮಾಡಬೇಕು ಎಂದು ಗೋಪಿ ನಾಯ್ಕ, ದಿವಾಕರ ಗಾಣಿಗ, ಸುರೇಶ್ ಪೂಜಾರಿ, ರೇಖಾ ಸುವರ್ಣ ಹಾಗೂ ಶ್ರೀನಿವಾಸ ವಡ್ಡರ್ಸೆ ಹೇಳಿದರು.

ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಎಚ್.ವಿ ಇಬ್ರಾಹಿಂ ಪುರ, ಸಹಾಯಕ ಲೆಕ್ಕಾಧಿಕಾರಿ ಮೆಲ್ವಿನ್ ಬಾಂಜಿ ಇದ್ದರು. ಮಹೇಶ್ ಕೆ ಸ್ವಾಗತಿಸಿದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260525-28-1945036062

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.