ಬ್ರಹ್ಮಾವರ: ಬ್ರಹ್ಮಾವರದ ಹಲಸು ಮತ್ತು ಹಣ್ಣಿನ ಮೇಳ ಮೇ 22ರಿಂದ ಮೂರು ದಿನಗಳ ಕಾಲ ಇಲ್ಲಿನ ಎಸ್.ಎಂ.ಎಸ್. ಸಮುದಾಯ ಭವನದಲ್ಲಿ ಜರುಗಲಿದೆ.

ರೋಟರಿ ಕ್ಲಬ್ ಬ್ರಹ್ಮಾವರ, ರೋಟರಿ ಕ್ಲಬ್ ಬಾರ್ಕೂರು, ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ ಶಿವಮೊಗ್ಗ, ಐ.ಸಿ.ಎ.ಆರ್ ಕೃಷಿ ವಿಜ್ಞಾನ ಕೇಂದ್ರ ಬ್ರಹ್ಮಾವರ ಹಾಗೂ ಎ.ಜಿ ಇವೆಂಟ್ಸ್ ಆಶ್ರಯದಲ್ಲಿ ನಡೆಯುವ ಮೇಳದಲ್ಲಿ ಹಣ್ಣುಗಳು ಪ್ರದರ್ಶನ ಮತ್ತು ಮಾರಾಟ ಇರಲಿದೆ.

ಮಾವು ಮತ್ತು ಹಲಸಿನ ಹೋಳಿಗೆ, ಹಲಸಿನ ಜಿಲೇಬಿ, ಹಲಸಿನ ಮುಳ್ಕ, ಕಬಾಬ್, ಮಂಚೂರಿ ಹಾಗೂ ಹಲಸಿನ ಬಿರಿಯಾನಿ ಸ್ಥಳದಲ್ಲೇ ಸಿದ್ಧಪಡಿಸಿ ಗ್ರಾಹಕರಿಗೆ ನೀಡಲಾಗುತ್ತದೆ.

ರಾಮನಗರದ ವಿಶೇಷ ಹತ್ತು ಬಗೆಯ ಮಾವಿನ ಹಣ್ಣುಗಳು, ತುಮಕೂರು ಮತ್ತು ಪಾಂಡಿಚೇರಿಯ ಚಂದ್ರ ಹಲಸು ಸೇರಿದಂತೆ ವಿವಿಧ ತಳಿಯ ಹಣ್ಣುಗಳು, ಹಲಸಿನ ಹಪ್ಪಳ, ಚಿಪ್ಸ್, ಜಾಮ್, ಉಪ್ಪಿನಕಾಯಿ, ಹಲಸಿನ ಹಣ್ಣಿನ ಐಸ್ಕ್ರೀಮ್ ಹಾಗೂ ಅಪ್ಪೆಮಿಡಿ ಚಟ್ನಿ ಸೇರಿದಂತೆ ಹಲವು ಬಗೆಯ ಮೌಲ್ಯವರ್ಧಿತ ಉತ್ಪನ್ನಗಳು ಮೇಳದಲ್ಲಿ ಇರುತ್ತವೆ.

ಇಳಕಲ್ ಮತ್ತು ಮೈಸೂರು ಸಿಲ್ಕ್ ಸೀರೆಗಳು, ಚೆನ್ನಪಟ್ಟಣದ ಬೊಂಬೆಗಳು, ಮಣ್ಣಿನ ಆಭರಣಗಳು, ಬೇಲೂರಿನ ಶಿಲಾಮೂರ್ತಿಗಳು ಹಾಗೂ ಆಯುರ್ವೇದಿಕ್ ಉತ್ಪನ್ನಗಳು ಇರಲಿವೆ.

ಕೃಷಿ ಆಸಕ್ತರಿಗೆ ವಿವಿಧ ತಳಿಯ ಹಣ್ಣಿನ ಗಿಡಗಳು, ತರಕಾರಿ ಬೀಜಗಳು ಹಾಗೂ ಹೂವಿನ ಗಿಡಗಳು ಇಲ್ಲಿ ದೊರೆಯಲಿವೆ. ಸಾರ್ವಜನಿಕರು ತಮ್ಮಲ್ಲಿರುವ ಹಳೆಯ ರೇಷ್ಮೆ ಸೀರೆಗಳನ್ನು (ಜರಿ ಇರುವಂಥದ್ದು) ಇಲ್ಲಿ ನೀಡಿ ಹಣ ಪಡೆಯಬಹುದು. ಮೇಳವು ಬೆಳಿಗ್ಗೆ 10 ಗಂಟೆಯಿಂದ ರಾತ್ರಿ 8 ಗಂಟೆಯವರೆಗೆ ಇರುತ್ತದೆ ಎಂದು ಸಂಘಟಕರು ತಿಳಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260522-28-960518943

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.