ಬ್ರಹ್ಮಾವರ: ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಸಾಸ್ತಾನ ಜಂಕ್ಷನ್ ಬಳಿ ವೇಗವಾಗಿ ಬಂದ ಕಾರೊಂದು ರಸ್ತೆ ಬದಿಯಲ್ಲಿ ನಿಂತಿದ್ದ ಪಾದಚಾರಿಗೆ ಡಿಕ್ಕಿ ಹೊಡೆದಿದ್ದು, ಅವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ತಾಲ್ಲೂಕಿನ ಮೊಗವೀರ ಪೇಟೆಯ ನಿವಾಸಿ ಕೋಡಿ ಬೆಂಗ್ರೆ ನಿವಾಸಿ ಗಣೇಶ್ ಕರ್ಕೇರ ಮೃತಪಟ್ಟವರು. ಭಾನುವಾರ ತಡರಾತ್ರಿ ಅವರು ರಸ್ತೆ ದಾಟಲು ವಿಭಜಕದ ಬಳಿ ನಿಂತುಕೊಂಡಿದ್ದರು. ಈ ವೇಳೆ ಕುಂದಾಪುರ ಕಡೆಯಿಂದ ಉಡುಪಿ ಕಡೆಗೆ ಚಲಿಸುತ್ತಿದ್ದ ಕಾರು ಅವರಿಗೆ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಗಣೇಶ್ 5 ಮೀಟರ್ ದೂರದವರೆಗೆ ಎಳೆದೊಯ್ಯಲ್ಪಟ್ಟಿದ್ದಾರೆ. ತೀವ್ರ ಗಾಯದಿಂದ ಅವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಅಪಘಾತದ ಕುರಿತು ಪ್ರತ್ಯಕ್ಷದರ್ಶಿ ದಿನೇಶ್ ಮರಕಾಲ ನೀಡಿದ ದೂರಿನ ಮೇರೆಗೆ ಕೋಟ ಪೊಲೀಸ್ ಠಾಣೆಯಲ್ಲಿ ಕಾರು ಚಾಲಕ ಸನೀಶ್ ವಿರುದ್ಧ ಪ್ರಕರಣ ದಾಖಲಾಗಿದೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260602-28-1170434088

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.