ಬ್ರಹ್ಮಾವರ: ಸಮಾಜದ ಋಣ ತೀರಿಸುವ ನಿಟ್ಟಿನಲ್ಲಿ ಹತ್ತು ಹಲವು ಜನಪರ ಕಾರ್ಯಕ್ರಮಗಳ ಮೂಲಕ ಜೈ ಕುಂದಾಪ್ರ ಸಂಘಟನೆಯು ಮನೆಮಾತಾಗಿ ಬೆಳೆದು ನಿಂತಿದೆ ಎಂದು ಕೋಟದ ಗೀತಾನಂದ ಫೌಂಡೇಶನ್ ಪ್ರವರ್ತಕ ಆನಂದ್ ಸಿ.ಕುಂದರ್ ಹೇಳಿದರು.

ಕುಂದಾಪುರದ ಜೈ ಕುಂದಾಪ್ರ ಸೇವಾ ಟ್ರಸ್ಟ್ ದಶಮಾನೋತ್ಸವ ಪ್ರಯುಕ್ತ ಈಚೆಗೆ ಕೋಟದಲ್ಲಿ ಆಯೋಜಿಸಿದ್ದ ಜೈ ಕುಂದಾಪ್ರ ಸಂಭ್ರಮ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಕಾರ್ಯಕ್ರಮದಲ್ಲಿ ಕೋಟದ ಪಂಚವರ್ಣ ಸಂಘಟನೆಗೆ ಜೈ ಕುಂದಾಪ್ರ ಸೇವಾ ಪುರಸ್ಕಾರ ನೀಡಿ ಸನ್ಮಾನಿಸಲಾಯಿತು. ಸಂಸದ ಕೋಟ ಶ್ರೀನಿವಾಸ ಪೂಜಾರಿ ಅವರು ಸಾಮಾಜಿಕ ಕಾರ್ಯಕರ್ತ ಕೋಟ ಶ್ರೀಕಾಂತ್ ಶೆಣೈ, ಪ್ರಗತಿಪರ ಕೃಷಿಕ ರವೀಂದ್ರ ಐತಾಳ್ ಹಾಗೂ ಧಾರ್ಮಿಕ ಕ್ಷೇತ್ರದ ಭಾಸ್ಕರ ಸ್ವಾಮಿ ಅವರಿಗೆ ವಿಶೇಷ ಅಭಿನಂದನೆ ಸಲ್ಲಿಸಿದರು.

ದಶಮಾನೋತ್ಸವದ ನೆನಪಿಗಾಗಿ ಅಶಕ್ತರಿಗೆ ನೆರವು, ಗಾಲಿ ಕುರ್ಚಿ ಹಸ್ತಾಂತರ, ಪ್ರತಿಭಾ ಪುರಸ್ಕಾರ ಕಾರ್ಯಕ್ರಮಗಳು ಜರುಗಿದವು.ವರಲಕ್ಷ್ಮಿ ಚಾರಿಟಬಲ್ ಟ್ರಸ್ಟ್ ಮುಖ್ಯಸ್ಥ ಗೋವಿಂದಬಾಬು ಪೂಜಾರಿ ಅಧ್ಯಕ್ಷತೆ ವಹಿಸಿದ್ದರು.

ಬೆಂಗಳೂರಿನ ಉದ್ಯಮಿಗಳಾದ ಪ್ರಕಾಶ್ ಶೆಟ್ಟಿ, ಸತೀಶ್ ಶೆಟ್ಟಿ, ಜೈರಾಮ್ ಕುಲಾಲ್ ಜನ್ನಾಡಿ, ಪ್ರಕಾಶ್ ಸಿ. ಶೆಟ್ಟಿ, ಜೈ ಕುಂದಾಪ್ರ ಸೇವಾ ಟ್ರಸ್ಟ್ನ ಆದಿತ್ಯ ಕೋಟ, ಕೋಟ ದಿನೇಶ್ ಗಾಣಿಗ, ಪಾಂಡು ಪೂಜಾರಿ, ನೀಲ್ ಫೆರೆರಾ, ಅಜಿತ್ ಶೆಟ್ಟಿ, ಅವಿನಾಶ್ ಬಳ್ಮನೆ, ಕೆ.ಆರ್.ನಾಯಕ್, ವಿವೇಕ್ ಸುವರ್ಣ, ಪುಂಡಲಿಕ ಮೊಗವೀರ, ಜಯರಾಜ್ ಸಾಲಿಯಾನ್ ಉಪಸ್ಥಿತರಿದ್ದರು. ಮಂಜುನಾಥ್ ಹಿಲಿಯಾಣ ಸ್ವಾಗತಿಸಿದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260418-28-1650606590

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.