ಬ್ರಹ್ಮಾವರ: ದೇವಸ್ಥಾನಗಳಲ್ಲಿ ನಡೆಯುವ ಧಾರ್ಮಿಕ ಚಟುವಟಿಕೆಗಳು, ಬ್ರಹ್ಮಕಲಶದಂತಹ ಕಾರ್ಯಕ್ರಮಗಳು ಯುವಜನರಲ್ಲಿ ಧಾರ್ಮಿಕ ಭಾವನೆಗಳನ್ನು ಬೆಳೆಸಲು ಸಹಕಾರಿಯಾಗುತ್ತವೆ ಎಂದು ಕಾಂಗ್ರೆಸ್ ಮುಖಂಡ ಪ್ರಸಾದ್ ರಾಜ್ ಕಾಂಚನ್ ಅಭಿಪ್ರಾಯಪಟ್ಟರು.

ಪರಾರಿ ಬೊಬ್ಬರ್ಯ ದೈವಸ್ಥಾನದ ಪುನಃ ಪ್ರತಿಷ್ಠಾಪನಾ ಧಾರ್ಮಿಕ ಸಭೆಯನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಬ್ರಹ್ಮಾವರ ಜಿ.ಎಂ. ವಿದ್ಯಾನಿಕೇತನ ಪಬ್ಲಿಕ್ ಸ್ಕೂಲ್ನ ಆಡಳಿತ ನಿರ್ದೇಶಕ ಪ್ರಕಾಶ್ಚಂದ್ರ ಶೆಟ್ಟಿ ಮಾತನಾಡಿ, ಬೊಬ್ಬರ್ಯ ಪುನಃ ಪ್ರತಿಷ್ಠಾಪನಾ ಕಾರ್ಯಕ್ರಮದಿಂದ ಈ ಭಾಗದಲ್ಲಿ ಧಾರ್ಮಿಕ ಜಾಗೃತಿ ಹೆಚ್ಚುವಂತಾಗಿದೆ ಎಂದು ಹೇಳಿದರು.

ಬೊಬ್ಬರ್ಯ ಜೀರ್ಣೋದ್ಧಾರ ಸಮಿತಿಯ ಅಧ್ಯಕ್ಷ ಕೊಳಲಗಿರಿ ಗುರುರಾಜ್ ಭಟ್ ಅಧ್ಯಕ್ಷತೆ ವಹಿಸಿದ್ದರು.

ಬಿಲ್ಲವ ಸಮಾಜದ ಯುವ ವೇದಿಕೆಯ ಜಿಲ್ಲಾಧ್ಯಕ್ಷ ಪ್ರವೀಣ್ ಎಂ. ಪೂಜಾರಿ, ಪತ್ರಕರ್ತ ಮಟಪಾಡಿ ಕುಮಾರಸ್ವಾಮಿ, ಉಪ್ಪೂರು ಬಿಲ್ಲವ ಸೇವಾ ಸಂಘದ ಅಧ್ಯಕ್ಷ ರಾಜು ಪೂಜಾರಿ, ಕೆ.ಸಿ. ಅಮೀನ್, ಉದ್ಯಮಿಗಳಾದ ಮಾಧವ ಪಾಣ, ನವೀನ್ ಪೆರ್ಡೂರು, ವಿಕ್ರಾಂತ್ ಶೆಟ್ಟಿ, ಆತ್ಮರಾಮ ಪಾಟೀಲ್, ಫ್ರ್ಯಾಂಕಿ ಡಿಸೋಜ, ಸತೀಶ್ ಪೂಜಾರಿ ಕೀಳಿಂಜೆ, ಹರೀಶ್ ಪೂಜಾರಿ, ಸುರೇಶ್ ಬಿ. ಶೆಟ್ಟಿ, ಜಯ ಪೂಜಾರಿ ಇದ್ದರು.

ಅರ್ಚಕ ಗುರುರಾಜ್ ಭಟ್ ಪ್ರಾಸ್ತಾವಿಕ ಮಾತುಗಳನ್ನಾಡಿದರು. ಪ್ರಶಾಂತ್ ಶೆಟ್ಟಿ ನಿರೂಪಿಸಿದರು. ಲಕ್ಷ್ಮೀಶ್ ಭಟ್ ವಂದಿಸಿದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260422-28-1814357802

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.