ಸಾಲಿಗ್ರಾಮ (ಬ್ರಹ್ಮಾವರ): ಪಟ್ಟಣ ಪಂಚಾಯಿತಿ ವ್ಯಾಪ್ತಿಯ ಪಾರಂಪಳ್ಳಿಯಲ್ಲಿ ಘನ ತ್ಯಾಜ್ಯ ಘಟಕದ ಉದ್ಘಾಟನೆ ಶನಿವಾರ ನಡೆಯಿತು.

ಘಟಕ ಉದ್ಘಾಟನೆ ವಿರೋಧಿಸಿ ಸ್ಥಳೀಯರು ಶುಕ್ರವಾರ ರಾತ್ರಿ, ಶನಿವಾರ ಬೆಳಿಗ್ಗೆ ಕಪ್ಪು ಪಟ್ಟಿ ಧರಿಸಿ ಘಟಕದ ಸಮೀಪ ಪ್ರತಿಭಟನೆ ನಡೆಸಿದರು.

‘ಘಟಕದಿಂದ ಸ್ಥಳೀಯರಿಗೆ ಸಮಸ್ಯೆ ಮತ್ತು ಪರಿಸರಕ್ಕೆ ಹಾನಿಯಾಗಲಿದೆ. ಘಟಕ್ಕೆ ಸಿಆರ್ಜಡ್ ಅನುಮತಿ ಇದುವರೆಗೆ ಸಿಕ್ಕಿಲ್ಲ. ಲೋಕಾಯುಕ್ತದಲ್ಲಿ ಪ್ರಕರಣ ಇತ್ಯರ್ಥಕ್ಕೆ ಬಾಕಿ ಇದೆ. ಸ್ಥಳೀಯರು ಹೈಕೋರ್ಟ್ನಲ್ಲಿ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ಹಂತದಲ್ಲಿದೆ. ಹೀಗಾಗಿ ಉದ್ಘಾಟನೆ ನಡೆಸಿರುವುದು ಕಾನೂನುಬಾಹಿರ’ ಎಂದು ಆಕ್ರೋಶ ವ್ಯಕ್ತಪಡಿಸಿದರು

ಮುಂದೆ ಘಟಕದ ವಿರುದ್ಧವಾಗಿ ತೀರ್ಪು ಬಂದು ಕೋಟ್ಯಾಂತರ ರೂಪಾಯಿ ಹಾನಿಯಾದರೆ ಅದಕ್ಕೆ ಅಧಿಕಾರಿಗಳು, ಜನಪ್ರತಿನಿಧಿಗಳು ನೇರ ಹೊಣೆಯಾಗುತ್ತಾರೆ ಎಂದು ಎಚ್ಚರಿಕೆ ನೀಡಿದರು.

ಈ ಸಂದರ್ಭ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿತ್ತು. ಕಾಂಗ್ರೆಸ್ ಜಿಲ್ಲಾ ಹಿಂದುಳಿದ ಘಟಕದ ಉಪಾಧ್ಯಕ್ಷ ನಾಗೇಂದ್ರ ಪುತ್ರನ್ ಮಾತನಾಡಿದರು. ಪಟ್ಟಣ ಪಂಚಾಯಿತಿ ಸದಸ್ಯ ಶ್ರೀನಿವಾಸ ಅಮೀನ್, ಕಾಂಗ್ರೆಸ್ ಜಿಲ್ಲಾ ಹಿಂದುಳಿದ ಘಟಕದ ಅಧ್ಯಕ್ಷ ತಿಮ್ಮ ಪೂಜಾರಿ, ಉಪಾಧ್ಯಕ್ಷ ನಾಗೇಂದ್ರ ಪುತ್ರನ್, ದಿನೇಶ ಗಾಣಿಗ ಕೋಟ, ಮಹೇಶ ಪೂಜಾರಿ, ಸಂತೋಷ ಪೂಜಾರಿ, ಅಶೋಕ ಪೂಜಾರಿ, ನಾಗರಾಜ, ಗಣೇಶ ಮತ್ತಿತರರು ಭಾಗವಹಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.