ಗುರುವಾರ, 21 ಸೆಪ್ಟೆಂಬರ್ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಾದಕ ದ್ರವ್ಯ ವ್ಯಸನದಿಂದ ವಿದ್ಯಾರ್ಥಿಗಳನ್ನು ರಕ್ಷಿಸೋಣ: ನ್ಯಾಯಾಧೀಶೆ ಶರ್ಮಿಳಾ

ಬ್ರಹ್ಮಾವರ: ಮಾದಕ ದ್ರವ್ಯ ವಿರೋಧಿ ದಿನದಲ್ಲಿ ನ್ಯಾಯಾಧೀಶೆ ಶರ್ಮಿಳಾ
Published 28 ಜೂನ್ 2023, 12:37 IST
Last Updated 28 ಜೂನ್ 2023, 12:37 IST
ಅಕ್ಷರ ಗಾತ್ರ

ಬ್ರಹ್ಮಾವರ: ‘ವಿದ್ಯಾರ್ಥಿಗಳಿಗೆ ಮಾದಕ ವಸ್ತುಗಳಿಂದ ಆಗುವ ದುಷ್ಪರಿಣಾಮಗಳ ಮಾಹಿತಿ ನೀಡಿ ಜಾಗೃತಿ ಮೂಡಿಸಿ ಅವರ ಜೀವನ ರೂಪಿಸುವ ಕೆಲಸ ಮಾಡಬೇಕು’ ಎಂದು ಹಿರಿಯ ಸಿವಿಲ್‌ ನ್ಯಾಯಾಧೀಶೆ ಶರ್ಮಿಳಾ ಹೇಳಿದರು.

ಇಲ್ಲಿನ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಮಾದಕ ವಸ್ತು ವಿರೋಧಿ ಸಂಘ ಮತ್ತು ಉಡುಪಿ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸಂಯುಕ್ತ ಆಶ್ರಯದಲ್ಲಿ ಕಾಲೇಜಿನಲ್ಲಿ ನಡೆದ ಮಾದಕ ದ್ರವ್ಯ ವಿರೋಧಿ ದಿನಾಚರಣೆಯಲ್ಲಿ ಅವರು ಮಾತನಾಡಿದರು.

ಮಾದಕ ದ್ರವ್ಯ ವ್ಯಸನದ ದುಷ್ಪರಿಣಾಮ, ವಿದ್ಯಾರ್ಥಿಗಳ ಹಿತ ರಕ್ಷಣೆಗೆ ಸಂಬಂಧಿಸಿದ ವಿವಿಧ ಕಾನೂನುಗಳು ಮತ್ತು ಸಂಘಟನೆಗಳ ಬಗ್ಗೆ ಅವರು ವಿದ್ಯಾರ್ಥಿಗಳಿಗೆ ಮಾಹಿತಿ ನೀಡಿದರು.

ಉಡುಪಿ ದೊಡ್ಡಣಗುಡ್ಡೆಯ ಡಾ.ಎ.ವಿ.ಬಾಳಿಗಾ ಸ್ಮಾರಕ ಆಸ್ಪತ್ರೆಯ ಮನೋವೈದ್ಯ ಡಾ.ನಾಗರಾಜ ಮೂರ್ತಿ ಡಿ. ಮಾದಕ ದ್ರವ್ಯದ ವಿವಿಧ ರೂಪಗಳು ಮತ್ತು ಅವುಗಳು ವಿದ್ಯಾರ್ಥಿಗಳ ಬದುಕಿನ ಮೇಲೆ ಬೀರುವ ಪ್ರಭಾವದ ಕುರಿತು ತಿಳಿಸಿದರು.

ಪ್ರಾಂಶುಪಾಲ ರವೀಂದ್ರ ಉಪಾಧ್ಯ ಅಧ್ಯಕ್ಷತೆ ವಹಿಸಿದ್ದರು. ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಅರೆಕಾಲಿಕ ಸ್ವಯಂಸೇವಕಿ ಹಾಗೂ ನಿವೃತ್ತ ಶಿಕ್ಷಕಿ ತಿಲೋತ್ತಮೆ ಮತ್ತು ನಿವೃತ್ತ ಶಿಕ್ಷಕಿ ಸುಲೋಚನಾ ಕೊಡವೂರು ವಿದ್ಯಾರ್ಥಿಗಳಿಗೆ ಮುಂದಿನ ಬದುಕಿನ ಕುರಿತು ಮಾರ್ಗದರ್ಶನ ನೀಡಿದರು. ಉಪನ್ಯಾಸಕಿ ಅನುರಾಧ ಎಚ್. ನಿರೂಪಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT