ಬ್ರಹ್ಮಾವರ: ಇಲ್ಲಿಗೆ ಸಮೀಪದ ಉಪ್ಪೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ನಂದಿನಿ ಡೇರಿಗೆ ಸಂಪರ್ಕಿಸುವ ಮುಖ್ಯ ರಸ್ತೆಯಲ್ಲಿ ಬೃಹತ್ ಗುಂಡಿಗಳು ಉಂಟಾಗಿದ್ದು, ವಾಹನ ಸವಾರರಿಗೆ ಅಪಾಯಕಾರಿಯಾಗಿ ಪರಿಣಮಿಸಿವೆ.

ನಂದಿನಿ ಡೇರಿ ಸಂಪರ್ಕಿಸುವ ಪ್ರಮುಖ ರಸ್ತೆಯಾಗಿದ್ದು, ದಿನನಿತ್ಯ ನೂರಾರು ಹಾಲಿನ ಟ್ಯಾಂಕರ್ ಮತ್ತು ಟ್ರಕ್ಗಳು ಓಡಾಡುತ್ತವೆ. ಈ ಗುಂಡಿ ಮುಚ್ಚದೆ ಇದ್ದಲ್ಲಿ ಮಳೆಗಾಲದಲ್ಲಿ ಭಾರಿ ಅನಾಹುತಕ್ಕೆ ಕಾರಣವಾಗಲಿದೆ. 2000ಕ್ಕೂ ಅಧಿಕ ಜನಸಂಖ್ಯೆ ಹೊಂದಿರುವ ಈ ಪ್ರದೇಶದಲ್ಲಿ ದ್ವಿಚಕ್ರ ವಾಹನ ಸವಾರರು ಹೆಚ್ಚಿನ ಸಂಖ್ಯೆಯಲ್ಲಿ ಇದ್ದಾರೆ. ಅಪ್ಪಿ–ತಪ್ಪಿ ಈ ಹೊಂಡಕ್ಕೆ ವಾಹನ ಬಿದ್ದರೆ ಸವಾರರ ಪ್ರಾಣಕ್ಕೆ ಕುತ್ತು ಬರುವ ಸಾಧ್ಯತೆಯಿದ್ದು, ಸಂಬಂಧಿಸಿದ ಅಧಿಕಾರಿಗಳು ಗುಂಡಿ ಮುಚ್ಚಲು ಕ್ರಮ ಕೈಗೊಳ್ಳಬೇಕು ಎಂದು ಸಾರ್ವಜನಿಕರು ಒತ್ತಾಯಿಸಿದ್ದಾರೆ.

ಈ ಹಿಂದೆ ಕೆಂಪು ಕಲ್ಲಿನ ಕೋರೆಯಾಗಿತ್ತು. ರಸ್ತೆ ಭಾಗವನ್ನು ಬಿಟ್ಟು ಉಳಿದ ಭಾಗದಲ್ಲಿ ಕಲ್ಲಿನ ಗಣಿಗಾರಿಕೆ ನಡೆದಿದೆ. ಗುಂಡಿ ಬಿದ್ದಿರುವ ಸ್ಥಳಗಳಲ್ಲಿ ಕೆಳಭಾಗದ ಮಣ್ಣು ಸಡಿಲಗೊಂಡಿದ್ದು, ರಸ್ತೆ ನಿರ್ಮಾಣದ ವೇಳೆ ಸೂಕ್ತ ಕ್ರಮ ಕೈಗೊಳ್ಳದೇ ಡಾಂಬರು ಹಾಕಿರುವುದು ಸಮಸ್ಯೆಗೆ ಮುಖ್ಯ ಕಾರಣ ಎನ್ನುತ್ತಾರೆ ಸ್ಥಳೀಯರು. ನಿರಂತರ ಘನ ವಾಹನ ಸಂಚಾರ ಇಲ್ಲಿರುವುದರಿಂದ ಮಳೆಗಾ ಲದಲ್ಲಿ ರಸ್ತೆ ಕುಸಿಯುವ ಅಪಾಯವಿದೆ ಎಂದು ಅವರು ಹೇಳಿದರು.

ಸಮಸ್ಯೆ ಬಗ್ಗೆ ಸ್ಥಳೀಯರು ಹಲವು ಬಾರಿ ದೂರು ನೀಡಿದ್ದರೂ ಲೋಕೊಪಯೋಗಿ ಇಲಾಖೆ ಯಾವುದೇ ಕ್ರಮ ಕೈಗೊಂಡಿಲ್ಲ. ಕೆಎಂಎಫ್ ಕೂಡ ಈ ಬಗ್ಗೆ ಗಮನಹರಿಸಿಲ್ಲ. ಇಲ್ಲಿನ ರಸ್ತೆಯ ಬಗ್ಗೆ ತಜ್ಞರ ಸಮಿತಿಯನ್ನು ರಚಿಸಿ ಪರಿಶೀಲನೆ ನಡೆಸಿ ಮುಂದಿನ ಕ್ರಮ ಕೈಗೊಳ್ಳಬೇಕು ಎಂದು ಸ್ಥಳೀಯರು ಆಗ್ರಹಿಸಿದ್ದಾರೆ.

‘ಈ ರಸ್ತೆಯ ನಡುವೆ ಗುಂಡಿ ಎನ್ನುವುದು ಅಪಾಯಕಾರಿಯಾಗಿದೆ. ತಕ್ಷಣ ಈ ಗುಂಡಿಯನ್ನು ದುರಸ್ತಿಗೊಳಿಸಬೇಕು. ಮುಂದೆ ಈ ರಸ್ತೆಯ ಅಡಿಯ ಮಣ್ಣು ಸಡಿಲಗೊಂಡಿರುವುದರಿಂದ ಈ ಬಗ್ಗೆ ಪರಿಶೀಲನೆ ನಡೆಸಿ ಮುಂದಿನ ಕ್ರಮ ಕೈಗೊಳ್ಳಬೇಕು’ ಎಂದು ಸಾಮಾಜಿಕ ಹೋರಾಟಗಾರ ಸತೀಶ್ ಕಿಳಂಜೆ ಒತ್ತಾಯಿಸಿದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260525-28-1161025046

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.