ಬ್ರಹ್ಮಾವರ: ಇಲ್ಲಿನ ತಹಶೀಲ್ದಾರ್ ಕಚೇರಿಗೆ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿ, ಪರಿಶೀಲನೆ ನಡೆಸಿದರು.

ತಹಶೀಲ್ದಾರ್ ಕಚೇರಿಯ ಕಾರ್ಯ ವೈಖರಿಯ ಬಗ್ಗೆ ದೂರು ಸಲ್ಲಿಕೆಯಾಗಿದ್ದ ಕಾರಣ ಶೋಧನಾ ವಾರೆಂಟ್ನೊಂದಿಗೆ ಬಂದ ಲೋಕಾಯುಕ್ತ ಪೊಲೀಸರು, ನಾಲ್ಕು ತಂಡಗಳಾಗಿ ತಾಲ್ಲೂಕು ಸೌಧದ ವಿವಿಧ ವಿಭಾಗಗಳನ್ನು ಪರಿಶೀಲಿಸಿದರು.

‘ಪರಿಶೀಲನೆ ವೇಳೆ ಹಲವಾರು ದಾಖಲೆಗಳು ವರ್ಷಗಳಿಂದ ವಿಲೇವಾರಿಯಾಗದೆ ಬಾಕಿ ಉಳಿದಿರುವುದು ಕಂಡುಬಂದಿದೆ. ನಿಯಮಬಾಹಿರವಾಗಿ ಹಲವಾರು ಕಡತಗಳು ವಿಲೇವಾರಿಯಾಗಿರುವ ಬಗ್ಗೆ ಶಂಕೆ ಇದೆ’ ಎಂದು ಲೋಕಾಯುಕ್ತ ಮೂಲಗಳು ತಿಳಿಸಿವೆ.

ಬ್ರಹ್ಮಾವರ ತಹಶೀಲ್ದಾರ್ ಕಚೇರಿಯಲ್ಲಿ ಆನ್ಲೈನ್ಗೆ ಕಡತಗಳು ಸರಿಯಾಗಿ ಅಪ್ಲೋಡ್ ಆಗಿಲ್ಲ. ಆಫ್ಲೈನ್ನಲ್ಲಿ ಕೂಡ ದಾಖಲೆಗಳು ಸರಿಯಾಗಿ ವಿಲೇವಾರಿ ಆಗುತ್ತಿಲ್ಲ ಎಂಬ ದೂರುಗಳು ಇದ್ದವು. ಅಧಿಕಾರಿಗಳನ್ನು ಪ್ರಶ್ನಿಸಿದ ಲೋಕಾಯುಕ್ತ ಪೊಲೀಸರು, ತರಾಟೆಗೆ ತೆಗೆದುಕೊಂಡರು.

ಕಾರಣ ನೀಡದ ಮತ್ತು ಅನುಮಾನಾಸ್ಪದ ದಾಖಲೆಗಳನ್ನು ಮಹಜರು ಮಾಡಿ ವಶಕ್ಕೆ ಪಡೆಯಲಾಗಿದೆ. ಸಂಬಂಧಪಟ್ಟ ಅಧಿಕಾರಿಗಳಿಗೆ ನೋಟಿಸ್ ನೀಡಿ ಉತ್ತರ ಕೇಳಲಾಗುತ್ತದೆ. ಸರಿಯಾದ ಉತ್ತರ ನೀಡದೇ ಇದಲ್ಲಿ ಮುಂದಿನ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಲೋಕಾಯುಕ್ತ ಪೊಲೀಸರು ಮಾಹಿತಿ ನೀಡಿದ್ದಾರೆ. ಮಂಗಳೂರು ಲೋಕಾಯುಕ್ತ ಎಸ್.ಪಿ ದಿನೇಶ್ ಕುಮಾರ್ ಮಾರ್ಗದರ್ಶನದಲ್ಲಿ, ಉಡುಪಿ ಲೋಕಾಯುಕ್ತ ಡಿವೈಎಸ್ಪಿ ಹಾಲಮೂರ್ತಿ ರಾವ್ ನೇತೃತ್ವ ವಹಿಸಿದ್ದರು. ಪೊಲೀಸ್ ಇನ್ಸ್ಪೆಕ್ಟರ್ ಮಂಜುನಾಥ್, ರಾಜೇಂದ್ರ ನಾಯ್ಕ್, ಇನ್ಸ್ಪೆಕ್ಟರ್ ಭಾರತಿ ಭಾಗವಹಿಸಿದ್ದರು.

ದಾಖಲೆ ಪರಿಶೀಲನೆ ಮಂಗಳವಾರ ಮುಂದುವರಿಯಲಿದೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260526-28-643595230

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.