ಬ್ರಹ್ಮಾವರ: ಉಡುಪಿ ಜಿಲ್ಲಾ ವಿಜಯಾ ಬ್ಯಾಂಕ್ ನಿವೃತ್ತ ಅಧಿಕಾರಿಗಳ ಸಮಾವೇಶವು ಇತ್ತೀಚೆಗೆ ಬ್ರಹ್ಮಾವರದ ಆಶ್ರಯ ಹೋಟೆಲ್ ಸಭಾಂಗಣದಲ್ಲಿ ಜರುಗಿತು.

ಚೇರ್ಕಾಡಿ ಸಚ್ಚಿದಾನಂದ ಶೆಟ್ಟಿ ಮಾತನಾಡಿ, ‘ಸುದೀರ್ಘ ಅನುಭವ, ಜ್ಞಾನ ಮತ್ತು ಸಹನಶೀಲತೆಯ ಪ್ರತಿಫಲವಾಗಿ ನಾವು ಈ ಹಂತಕ್ಕೆ ತಲುಪಿದ್ದೇವೆ. ಮಾಜಿ ಸಹೋದ್ಯೋಗಿಗಳೊಂದಿಗೆ ಹಳೆಯ ನೆನಪುಗಳನ್ನು ಮೆಲುಕು ಹಾಕುವ ಈ ಸಂದರ್ಭದಲ್ಲಿ ನಮ್ಮ ಸಾಧನೆಗಳಿಗಿಂತ ಬೆಳೆಸಿಕೊಂಡ ಸಂಬಂಧಗಳು ಹೆಚ್ಚು ಮಹತ್ವಪೂರ್ಣವಾಗಿವೆ. ಹಳೆಯ ಸ್ನೇಹಿತರು ಮತ್ತು ಸಹೋದ್ಯೋಗಿಗಳು ನಮ್ಮ ದೊಡ್ಡ ಆಸ್ತಿ’ ಎಂದರು.

ಬೈಂದೂರಿನ ಸುರಭಿ ತಂಡದ ನಾಯಕ ಪಿ.ಸುಧಾಕರ್ ನೇತೃತ್ವದಲ್ಲಿ ವಿದ್ಯಾರ್ಥಿಗಳಿಂದ ನೃತ್ಯ ಸಿಂಚನ, ನಾದ ವೈಭವ ಸಾಂಸ್ಕೃತಿಕ ಕಾರ್ಯಕ್ರಮ ಪ್ರಸ್ತುತಗೊಂಡಿತು. ಕಾರ್ಯಕ್ರಮದಲ್ಲಿ ಗಾಯಕಿ ಗೀತಾ ಬೈಂದೂರು, ನೃತ್ಯ ಸಂಯೋಜಕಿ ನಿಶ್ಚಿತಾ ಬೈಂದೂರು ಅವರನ್ನು ಸನ್ಮಾನಿಸಲಾಯಿತು.

ಸಂಘದ ಸ್ಥಾಪಕಾಧ್ಯಕ್ಷ ಸುಬ್ಬಯ್ಯ ಹೆಗ್ಡೆ, ಮಾಜಿ ಅಧ್ಯಕ್ಷರಾದ ಆತ್ರಾಡಿ ನಾರಾಯಣ ಶೆಟ್ಟಿ, ಅಸ್ರಂಬಳ್ಳಿ ಸದಾಶಿವ ಹೆಗ್ಡೆ, ಉಳ್ತೂರು ವಾಸುದೇವ ಶೆಟ್ಟಿ, ಎಸ್.ಅಣ್ಣಪ್ಪ ಶೆಟ್ಟಿ, ರಾಜೀವ ಶೆಟ್ಟಿ, ಕಾರ್ಯದರ್ಶಿ ಮಂಜುನಾಥ ಶೆಟ್ಟಿ ಉಪಸ್ಥಿತರಿದ್ದರು. ವೇಣುಗೋಪಾಲ ಶೆಟ್ಟಿ ವಂದಿಸಿದರು. ಬಿ. ರತ್ನಾಕರ ಹೆಗ್ಡೆ ಕಾರ್ಯಕ್ರಮ ನಿರೂಪಿಸಿದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260430-28-432497148

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.