ಶನಿವಾರ, 13 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ರಂಗಪ್ಪಯ್ಯ ಹೊಳ್ಳಗೆ ಪತ್ರಿಕಾದಿನದ ಗೌರವ

Published 7 ಜುಲೈ 2024, 14:21 IST
Last Updated 7 ಜುಲೈ 2024, 14:21 IST
ಅಕ್ಷರ ಗಾತ್ರ

ಬ್ರಹ್ಮಾವರ: ತಾಲ್ಲೂಕು ಪತ್ರಕರ್ತರ ಸಂಘದ ಆಶ್ರಯದಲ್ಲಿ ಪತ್ರಿಕಾ ದಿನಾಚರಣೆ ಪ್ರಯುಕ್ತ ಕೊಡಮಾಡುವ ಗೌರವ ಪುರಸ್ಕಾರಕ್ಕೆ ಪತ್ರಕರ್ತ ಕೋಟ ರಂಗಪ್ಪಯ್ಯ ಹೊಳ್ಳ ಆಯ್ಕೆಯಾಗಿದ್ದಾರೆ.

ಇದೇ 10ರಂದು ಮಧ್ಯಾಹ್ನ 12ಕ್ಕೆ ಕೋಟ ವಿವೇಕ ವಿದ್ಯಾಸಂಸ್ಥೆಯಲ್ಲಿ ಕಾರ್ಯಕ್ರಮ ನಡೆಯಲಿದೆ ಎಂದು ಬ್ರಹ್ಮಾವರ ಪತ್ರಕರ್ತರ ಸಂಘದ ಅಧ್ಯಕ್ಷ ರಾಜೇಶ ಗಾಣಿಗ ಅಚ್ಲಾಡಿ ತಿಳಿಸಿದ್ದಾರೆ.

ಹೊಳ್ಳ ಅವರು ಶಿಕ್ಷಕರಾಗಿದ್ದು, ಸುಧೀರ್ಘ ಕಾಲ ಕೋಟ ಭಾಗದಲ್ಲಿ ವರದಿಗಾರರಾಗಿ ಕರ್ತವ್ಯ ಸಲ್ಲಿಸಿ ನಿವೃತ್ತರಾಗಿದ್ದರು. ರಾಜ್ಯ ಪಠ್ಯ ರಚನ ಸಮಿತಿ ಸದಸ್ಯರಾಗಿಯೂ ಕಾರ್ಯ ನಿರ್ವಹಿಸಿದ್ದರು. 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT