ಬ್ರಹ್ಮಾವರ: ಇಲ್ಲಿನ ವಿದ್ಯಾನಿಕೇತನ ಪಬ್ಲಿಕ್ ಸ್ಕೂಲ್ನ ವಿದ್ಯಾರ್ಥಿಗಳಿಗೆ ಕೃಷಿ ಕುರಿತು ಆಸಕ್ತಿ ಮೂಡಿಸಲು ‘ಭತ್ತ ಬೆಳೆಯುವತ್ತ ಮಕ್ಕಳ ಚಿತ್ತ’ ಕಾರ್ಯಕ್ರಮ ಶನಿವಾರ ಆಯೋಜಿಸಲಾಗಿತ್ತು.

ಸಂಸ್ಥೆಯ ಸ್ಕೌಟ್ ಮತ್ತು ಗೈಡ್ಸ್ ವಿದ್ಯಾರ್ಥಿಗಳು ಶಾಲಾ ಆಡಳಿತ ಮಂಡಳಿ ಅಧ್ಯಕ್ಷ ಪ್ರಕಾಶ್ಚಂದ್ರ ಶೆಟ್ಟಿ ಅವರ ಮಾರ್ಗದರ್ಶನದಲ್ಲಿ ಉಡುಪಿ ಉದ್ಯಾವರದ ಕುತ್ಪಾಡಿಯ ಕೃಷಿ ಭೂಮಿಯಲ್ಲಿ ಭತ್ತ ನಾಟಿ ಮಾಡಿದರು. ಸಂಪ್ರದಾಯ ಶೈಲಿಯಲ್ಲಿ ಕಂಬಳದ ಕೋಣಗಳಿಂದ ಗದ್ದೆ ಉಳುಮೆ ಮಾಡಿ ನಾಟಿ ಮಾಡಲಾಯಿತು. ಮಕ್ಕಳು ರೈತರೊಂದಿಗೆ ನೇಜಿ ನಾಟಿ ಮಾಡಿ ಕೃಷಿ ಅನುಭವ ಪಡೆದುಕೊಂಡರು.

ಕಾರ್ಯಕ್ರಮದಲ್ಲಿ ಸ್ಥಳೀಯ ರೈತರನ್ನು ಸನ್ಮಾಯಿಸಲಾಯಿತು. ಶಾಲಾ ಪ್ರಾಂಶುಪಾಲ ಜಾರ್ಜ್ ಕುರಿಯನ್ ಮಕ್ಕಳ ಜೊತೆಗಿದ್ದು ಸ್ಫೂರ್ತಿ ತುಂಬಿದರು. ಮಕ್ಕಳು ಮಧ್ಯಾಹ್ನ ಚಟ್ನಿ ಜೊತೆ ಗಂಜಿ ಊಟ ಮಾಡಿ ಹಳ್ಳಿಯ ಸೊಗಡನ್ನು ಅನುಭವಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.