ಶುಕ್ರವಾರ, ಆಗಸ್ಟ್ 6, 2021
21 °C

4 ಕಾಲು ಸೇತುವೆ ನಿರ್ಮಾಣಕ್ಕೆ ಅನುಮೋದನೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಉಡುಪಿ: ರಾಷ್ಟ್ರೀಯ ಹೆದ್ದಾರಿ 66 ರಲ್ಲಿ 4 ಕಾಲು ಸೇತುವೆ ನಿರ್ಮಾಣಕ್ಕೆ ₹ 4.36 ಕೋಟಿ ಅನುದಾನವನ್ನು ಕೇಂದ್ರ ಸರ್ಕಾರ ಮಂಜೂರು ಮಾಡಿದೆ ಎಂದು ಸಂಸದೆ ಶೋಭಾ ಕರಂದ್ಲಾಜೆ ತಿಳಿಸಿದ್ದಾರೆ.

ಜಿಲ್ಲೆಯಲ್ಲಿ ಹಾದು ಹೋಗುವ ರಾಷ್ಟ್ರೀಯ ಹೆದ್ದಾರಿ 66ರ ಹಲವು ಭಾಗಗಳಲ್ಲಿ ಕ್ರಾಸಿಂಗ್‌ ನಿರ್ಮಾಣ ಮಾಡುವ ಅಗತ್ಯತೆ ಇದ್ದು, ಈ ಸಂಬಂಧ ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರನ್ನು ಭೇಟಿ ಮಾಡಿ ವಿನಂತಿ ಮಾಡಲಾಗಿತ್ತು. ಮನವಿ ಪುರಸ್ಕರಿಸಿದ ಕೇಂದ್ರ ಭೂ ಸಾರಿಗೆ ಸಚಿವ ನಿತಿನ್ ಗಡ್ಕರಿ, ಜಿಲ್ಲೆಯ ನಾಲ್ಕು ಪ್ರದೇಶಗಳಲ್ಲಿ ₹ 4.36 ಕೋಟಿ ವೆಚ್ಚದಲ್ಲಿ ಪಾದಚಾರಿ ಕಾಲುಸೇತುವೆಗಳನ್ನು ನಿರ್ಮಿಸಲು ಅನುಮೋದನೆ ನೀಡಿ ಅನುದಾನ ಮಂಜೂರು ಮಾಡಿದ್ದಾರೆ.

ಕಾಪು ತಾಲ್ಲೂಕಿನ ಬಡಾ ಎರ್ಮಾಳ್‌ನಲ್ಲಿ, ಕುಂದಾಪುರ ತಾಲ್ಲೂಕಿನ ಆನೆಗುಡ್ಡೆ, ಉಡುಪಿಯ ಮಹೇಶ್ ಆಸ್ಪತ್ರೆಯ ಬಳಿ ಹಾಗೂ ಅಂಬಾಗಿಲಿನಲ್ಲಿ ತಲಾ ₹ 1.8 ಕೋಟಿ ವೆಚ್ಚದಲ್ಲಿ ಸ್ಟೀಲ್‌ ಕಾಲು ಸಂಕಗಳನ್ನು ನಿರ್ಮಾಣ ಮಾಡಲಾಗುತ್ತಿದೆ. ಕಾಮಗಾರಿಗಳ ಟೆಂಡರ್ ಪ್ರಕ್ರಿಯೆ ಪೂರ್ಣಗೊಂಡಿದ್ದು ಶೀಘ್ರ ಕಾಮಗಾರಿ ಆರಂಭವಾಗಲಿದೆ ಎಂದು ಸಂಸದೆ ತಿಳಿಸಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು