ಶುಕ್ರವಾರ, ಅಕ್ಟೋಬರ್ 30, 2020
23 °C

ರಸ್ತೆಯಲ್ಲಿ ವ್ಯಕ್ತಿಯ ಬರ್ಬರ ಕೊಲೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಉಡುಪಿ: ಹಿರಿಯಡಕ ಪೇಟೆಯಲ್ಲಿ ಗುರುವಾರ ಹಾಡಹಗಲೇ ವ್ಯಕ್ತಿಯನ್ನು ಬರ್ಬರವಾಗಿ ಕೊಲೆ ಮಾಡಲಾಗಿದೆ. ಕೊಲೆಯಾದ ವ್ಯಕ್ತಿ ರಿಯಲ್‌ ಎಸ್ಟೆಟ್‌ ಉದ್ಯಮಿ ಕಿಶನ್‌ ಹೆಗ್ಡೆ ಎಂದು ತಿಳಿದುಬಂದಿದೆ.

ಎರಡು ಕಾರುಗಳಲ್ಲಿ ಹಿಂಬಾಲಿಸಿಕೊಂಡು ಬಂದ ದುಷ್ಕರ್ಮಿಗಳ ತಂಡ ನಡುರಸ್ತೆಯಲ್ಲಿ ಕಿಶನ್ ಹೆಗ್ಡೆಯನ್ನು ಅಡ್ಡಗಟ್ಟಿ ಮಾರಕಾಸ್ತ್ರಗಳಿಂದ ಭೀಕರವಾಗಿ ಕೊಲೆ ಮಾಡಿದ್ದಾರೆ. ಕೊಲೆಗೆ ಕಾರಣ ತಿಳಿದುಬಂದಿಲ್ಲ.

ಪ್ರಕರಣ ದಾಖಲಿಸಿಕೊಂಡಿರುವ ಹಿರಿಯಡಕ ಠಾಣೆ ಪೊಲೀಸರು ಆರೋಪಿಗಳ ಪತ್ತೆಗೆ ಶೋಧ ನಡೆಸುತ್ತಿದ್ದಾರೆ. ಕೊಲೆಯಾದ ಕಿಶನ್‌ ಹೆಗ್ಡೆ ವಿರುದ್ಧ ಉಡುಪಿಯ ಹಲವು ಠಾಣೆಗಳಲ್ಲಿ ಪ್ರಕರಣಗಳಿದ್ದು, ಮಾಹಿತಿ ಕಲೆಹಾಕಲಾಗುತ್ತಿದೆ ಎಂದು ಎಸ್‌ಪಿ ವಿಷ್ಣುವರ್ಧನ್‌ ಮಾಹಿತಿ ನೀಡಿದ್ದಾರೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು