ಗುರುವಾರ , ಅಕ್ಟೋಬರ್ 1, 2020
22 °C
ಬೆಳಗಾವಿಯಿಂದ ಮೂಡುಬಿದರೆಗೆ ಸಾಗಿಸುತ್ತಿದ್ದಾಗ ಹೊಸಂಗಡಿ ಬಳಿ ದಾಳಿ

52 ಕೋಣಗಳ ವಶ: ನಾಲ್ವರ ಬಂಧನ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಉಡುಪಿ: ಅಮಾಸೆಬೈಲು ಪೊಲೀಸ್ ಠಾಣೆ ವ್ಯಾಪ್ತಿಯ ಹೊಸಂಗಡಿ ಚೆಕ್‌ಪೋಸ್ಟ್‌ನಲ್ಲಿ ಅಕ್ರಮವಾಗಿ ಸಾಗಿಸಲಾಗುತ್ತಿದ್ದ 52 ಕೋಣಗಳನ್ನು ಮಂಗಳವಾರ ಪೊಲೀಸರು ವಶಪಡಿಸಿಕೊಂಡಿದ್ದಾರೆ.

ಬೆಳಗಾವಿಯಿಂದ ದಕ್ಷಿಣ ಕನ್ನಡ ಜಿಲ್ಲೆಯ ಮೂಡುಬಿದರೆಗೆ 2 ಕಂಟೈನರ್‌ಗಳಲ್ಲಿ 52 ಕೋಣಗಳನ್ನು ತುಂಬಿಕೊಂಡು ಸಾಗಿಸಲಾಗುತ್ತಿತ್ತು. ಒಂದು ಕಂಟೈನರ್‌ನಲ್ಲಿ 28, ಮತ್ತೊಂದು ಕಂಟೈನರ್‌ನಲ್ಲಿ 24 ಕೋಣಗಳಿದ್ದವು. ಚೆಕ್‌ಪೋಸ್ಟ್‌ನಲ್ಲಿ ವಾಹನಗಳನ್ನು ತಡೆದು ತಪಾಸಣೆ ಮಾಡಿದಾಗ ಕೋಣಗಳನ್ನು ಸಾಗಿಸುತ್ತಿರುವುದು ಪತ್ತೆಯಾಗಿದೆ. 

ದಾವಣಗೆರೆ ಜಿಲ್ಲೆ ಹರಿಹರ ತಾಲ್ಲೂಕಿನ ಮೆಹಬೂಬ್ ಪಾಷಾ, ದಾವಣಗೆರೆಯ ಚಿಕ್ಕನಹಳ್ಳಿ ಬಡಾವಣೆಯ ಇಮ್ರಾನ್‌, ಬೆಳಗಾವಿ ಜಿಲ್ಲೆ ಬೈಲಹೊಂಗಲ ತಾಲ್ಲೂಕಿನ ಬಾಪು ಸಾಹೇಬ್‌, ಮರಡಿ ಬಸವನ ಕ್ರಾಸ್‌ನ ಆಸಿಫ್‌ ಎಂಬುವರನ್ನು ಬಂಧಿಸಲಾಗಿದೆ. 2 ಕಂಟೈನರ್‌ಗಳನ್ನು ವಶಕ್ಕೆ ಪಡೆಯಲಾಗಿದೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು