ಮಂಗಳವಾರ, 19 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

6 ತಿಂಗಳು ತೆರಿಗೆ ವಿನಾಯಿತಿ ಕೊಡಿ: ಖಾಸಗಿ ಬಸ್‌ ಮಾಲೀಕರ ಒಕ್ಕೂಟ

ಸಂಕಷ್ಟದಲ್ಲಿ ಖಾಸಗಿ ಬಸ್‌ ಮಾಲೀಕರು
Last Updated 22 ಜೂನ್ 2021, 12:41 IST
ಅಕ್ಷರ ಗಾತ್ರ

ಉಡುಪಿ: ಲಾಕ್‌ಡೌನ್‌ ಹಾಗೂ ಡೀಸೆಲ್ ಬೆಲೆ ಹೆಚ್ಚಳದಿಂದ ಖಾಸಗಿ ಬಸ್‌ ಮಾಲೀಕರು ತೀವ್ರ ಸಂಕಷ್ಟಕ್ಕೆ ಸಿಲುಕಿದ್ದು, ರಾಜ್ಯ ಸರ್ಕಾರ ಕೂಡಲೇ 6 ತಿಂಗಳ ತೆರಿಗೆ ರಿಯಾಯಿತಿ ನೀಡಬೇಕು ಎಂದು ರಾಜ್ಯ ಖಾಸಗಿ ಬಸ್‌ ಮಾಲೀಕರ ಒಕ್ಕೂಟದ ಖಜಾಂಚಿ ಕುಯಿಲಾಡಿ ಸುರೇಶ್ ನಾಯಕ್ ಒತ್ತಾಯಿಸಿದರು.

ಮಂಗಳವಾರ ಮಾಧ್ಯಮ ಪ್ರತಿನಿಧಿಗಳ ಜತೆ ಮಾತನಾಡಿ, ಶಾಲಾ ವಿದ್ಯಾರ್ಥಿಗಳಿಗೆ ರಿಯಾಯಿತಿ ದರದಲ್ಲಿ ಪಾಸ್‌ ನೀಡಿದ್ದಕ್ಕೆ ಪ್ರತಿಯಾಗಿ ಸರ್ಕಾರ ಕೆಎಸ್‌ಆರ್‌ಟಿಸಿಗೆ ಇದುವರೆಗೂ ₹ 2,400 ಕೋಟಿ ಅನುದಾನ ನೀಡಿದೆ. ಖಾಸಗಿ ಬಸ್‌ಗಳು ಕೂಡ ವಿದ್ಯಾರ್ಥಿಗಳಿಗೆ ಹಾಗೂ ನಿತ್ಯ ಪ್ರಯಾಣಿಸುವವರಿಗೆ ರಿಯಾಯಿತಿ ನೀಡುತ್ತಿದೆ. ಇದಕ್ಕೆ ಪ್ರತಿಯಾಗಿ ಸರ್ಕಾರದಿಂದ ಯಾವುದೇ ಆರ್ಥಿಕ ನೆರವು ಸಿಗುತ್ತಿಲ್ಲ. ಪರ್ಯಾಯವಾಗಿ 6 ತಿಂಗಳ ತೆರಿಗೆ ವಿನಾಯಿತಿ ನೀಡಿದರೆ ಅನುಕೂಲವಾಗಲಿದೆ ಎಂದರು.

ಡೀಸೆಲ್‌ ಬೆಲೆ ಹೆಚ್ಚಳದಿಂದ ಬಸ್‌ ಮಾಲೀಕರಿಗೆ ದೊಡ್ಡ ಆರ್ಥಿಕ ಹೊರ ಬಿದ್ದಿದೆ. ಲಾಕ್‌ಡೌನ್‌ ಹಾಗೂ ಬಸ್‌ಗಳಲ್ಲಿ ಆಸನಗಳ ಸಾಮರ್ಥ್ಯದ ಶೇ 50ರಷ್ಟು ಸೀಟು ಮಾತ್ರ ಭರ್ತಿಗೆ ಅವಕಾಶ ಇರುವುದರಿಂದ ನಷ್ಟದ ಕಾರಣಕ್ಕೆ ಬಸ್‌ಗಳು ರಸ್ತೆಗಿಳಿದಿಲ್ಲ. ನಿಯಮಗಳಂತೆ ಬಸ್‌ ಓಡಿಸಿದರೆ ಡೀಸೆಲ್‌ ವೆಚ್ಚವೂ ಸಿಗುವುದಿಲ್ಲ ಎಂದು ಸಮಸ್ಯೆ ಹೇಳಿಕೊಂಡರು.

ಬಸ್‌ ಓಡಿಸಬೇಕಾದರೆ ವಿಮಾ ಮೊತ್ತ, ದುರಸ್ತಿ ವೆಚ್ಚ ಸೇರಿದಂತೆ ಕನಿಷ್ಠ ₹ 1 ಲಕ್ಷ ಅಗತ್ಯವಿದೆ. ಸೋಂಕು ಭೀತಿಯಿಂದ ಸಾರ್ವಜನಿಕರು ಕೂಡ ಬಸ್‌ ಪ್ರಯಾಣಕ್ಕೆ ಹಿಂಜರಿಯುತ್ತಿದ್ದಾರೆ. ಬಸ್‌ ಮಾಲೀಕರ ಸಮಸ್ಯೆ ಬಗೆಹರಿಸುವ ಸಂಬಂಧ ಶೀಘ್ರ ಸಾರಿಗೆ ಸಚಿವರನ್ನು ಭೇಟಿಯಾಗಿ ಮಾತುಕತೆ ನಡೆಸಲಾಗುವುದು. ತೀವ್ರ ಸಂಕಷ್ಟಕ್ಕೆ ಸಿಲುಕಿರುವ ಖಾಸಗಿ ಬಸ್‌ ಮಾಲೀಕರ ನೆರವಿಗೆ ಸರ್ಕಾರ ಮುಂದಾಗಬೇಕು ಎಂದು ಕುಯಿಲಾಡಿ ಸುರೇಶ್ ನಾಯಕ್ ಒತ್ತಾಯಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT