ಉಡುಪಿ: ಜಿಲ್ಲೆಯಲ್ಲಿ ಸಾರಿಗೆ ಮುಷ್ಕರ ಸಡಿಲವಾಗುತ್ತಿದ್ದು, ಭಾನುವಾರ 13 ಕೆಎಸ್‌ಆರ್‌ಟಿಸಿ ಬಸ್‌ಗಳು ಉಡುಪಿಯಿಂದ ವಿವಿಧ ಮಾರ್ಗಗಳಲ್ಲಿ ಸಂಚಾರ ಮಾಡಿದವು.

ಬೆಳಗಾವಿ, ಮೈಸೂರು, ಬೆಂಗಳೂರು ಸೇರಿದಂತೆ ಜಿಲ್ಲಾ ವ್ಯಾಪ್ತಿಯ ಕಾರ್ಕಳ, ಪಡುಕೆರೆ ಸೇರಿದಂತೆ ಹಲವು ಭಾಗಗಳಿಗೆ ಸಾರಿಗೆ ಸಂಸ್ಥೆಯ ಬಸ್‌ಗಳು ಸಂಚರಿಸಿದವು ಎಂದು ಡಿಪೋ ಅಧಿಕಾರಿಗಳು ಮಾಹಿತಿ ನೀಡಿದರು.

ಮುಷ್ಕರ ಆರಂಭವಾದ ದಿನ ಉಡುಪಿ ನಿಲ್ದಾಣದಿಂದ ಒಂದು ಬಸ್ ಮಾತ್ರ ಸಂಚರಿಸಿತ್ತು. ನಂತರದ ದಿನಗಳಲ್ಲಿ ಬಸ್‌ಗಳ ಸಂಖ್ಯೆ ಹೆಚ್ಚಾಗುತ್ತಿದ್ದು, ಭಾನುವಾರ 13 ಬಸ್‌ಗಳು ಸಂಚರಿಸಿವೆ. ಕೆಲವು ಚಾಲಕರು ಹಾಗೂ ನಿರ್ವಾಹಕರು ಕರ್ತವ್ಯಕ್ಕೆ ಹಾಜರಾಗುತ್ತಿದ್ದು, ಕ್ರಮೇಣ ಪರಿಸ್ಥಿತಿ ಸಹಜ ಸ್ಥಿತಿಗೆ ಬರಲಿದೆ ಎಂದು ಅಧಿಕಾರಿಗಳು ತಿಳಿಸಿದರು.

ಮತ್ತೊಂದೆಡೆ, ಖಾಸಗಿ ಬಸ್‌ಗಳ ಸಂಚಾರ ಎಂದಿನಂತಿತ್ತು. ಜಿಲ್ಲಾ ವ್ಯಾಪ್ತಿ ಸೇರಿದಂತೆ ಹೊರ ಜಿಲ್ಲೆಗಳಿಗೆ ಹೆಚ್ಚಿನ ಬಸ್‌ಗಳು ಓಡಾಡಿದವರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.