ಮಂಗಳವಾರ, ಜೂನ್ 28, 2022
24 °C

ಉದ್ಯಮಿ ಭಾಸ್ಕರ್ ಶೆಟ್ಟಿ ಕೊಲೆ ಪ್ರಕರಣ: ಪತ್ನಿ, ಮಗನ ವಿರುದ್ಧ ಆರೋಪ ಸಾಬೀತು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಉಡುಪಿ: ಉದ್ಯಮಿ ಭಾಸ್ಕರ್ ಶೆಟ್ಟಿ(52) ಕೊಲೆ ಮಾಡಿ ಹೋಮಕುಂಡದಲ್ಲಿ ಸುಟ್ಟು ಹಾಕಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಉಡುಪಿ ಜಿಲ್ಲಾ ಮತ್ತು ಸೆಷನ್ಸ್  ನ್ಯಾಯಾಲಯ ಪ್ರಕರಣದ ಮೂವರು ಪ್ರಮುಖ ಆರೋಪಿಗಳು ದೋಷಿಗಳು ಎಂದು ಮಂಗಳವಾರ ತೀರ್ಪು ಪ್ರಕಟಿಸಿದೆ.

ಉದ್ಯಮಿ ಭಾಸ್ಕರ್ ಶೆಟ್ಟಿ ಪತ್ನಿ ರಾಜೇಶ್ವರಿ ಶೆಟ್ಟಿ, ಮಗ ನವನೀತ್ ಶೆಟ್ಟಿ, ರಾಜೇಶ್ವರಿ ಸ್ನೇಹಿತ ನಿರಂಜನ್ ಭಟ್ ಮೂವರು ದೋಷಿಗಳೆಂದು ತೀರ್ಪು ನೀಡಿದೆ.

ನಾಲ್ಕನೇ ಆರೋಪಿಯಾಗಿರುವ ನಿರಂಜನ್ ಭಟ್ ತಂದೆ ಅನಾರೋಗ್ಯದಿಂದ ಮೃತಪಟ್ಟಿದ್ದು, ಸಾಕ್ಷ್ಯ ನಾಶದ ಆರೋಪ ಎದುರಿಸುತ್ತಿದ್ದ ಐದನೇ ಆರೋಪಿ ರಾಘವೇಂದ್ರನನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಆರೋಪಿಗಳ ಶಿಕ್ಷೆ ಪ್ರಮಾಣವನ್ನು ಮಂಗಳವಾರ ಮಧ್ಯಾಹ್ನ ಉಡುಪಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶ ಸುಬ್ರಹ್ಮಣ್ಯ ಜೆ.ಎನ್. ಪ್ರಕಟಿಸಲಿದ್ದಾರೆ.

ಪ್ರಕರಣದ ವಿವರ: 2016ರ ಜು.28ರಂದು ಮಧ್ಯಾಹ್ನ  3 ಗಂಟೆಗೆ ಇಂದ್ರಾಳಿಯ ಮನೆಯಲ್ಲಿ ಭಾಸ್ಕರ್ ಶೆಟ್ಟಿ ಅವರನ್ನು ಕೊಲೆ ಮಾಡಲಾಗಿತ್ತು. ಬಳಿಕ ಮೃತದೇಹವನ್ನು ನಂದಳಿಕೆಯಲ್ಲಿರುವ ನಿರಂಜನ ಭಟ್ ಮನೆಯಲ್ಲಿನ ಹೋಮ ಕುಂಡದಲ್ಲಿ ಹಾಕಿ ಸುಟ್ಟು ಹಾಕಿದ್ದರು.

ಇದನ್ನೂ ಓದಿ: 

ಜು. 31 ರಂದು ಮಗ ನಾಪತ್ತೆಯಾಗಿರುವುದಾಗಿ ಭಾಸ್ಕರ್ ಶೆಟ್ಟಿ ಅವರ ತಾಯಿ ಮಣಿಪಾಲ ಪೊಲೀಸರಿಗೆ ದೂರು ಸಲ್ಲಿಸಿದ್ದರು. ಘಟನೆ ನಡೆದು 8 ದಿನಗಳ ಬಳಿಕ ಪೊಲೀಸರು ಪತ್ನಿ ಹಾಗೂ ಮಗನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ ಸತ್ಯಾಂಶ ಹೊರಬಂದಿತ್ತು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು