ಬೈಂದೂರು: ಇಲ್ಲಿನ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಸೌಕೂರು, ಸೌಪರ್ಣಿಕಾ ಏತ ನೀರಾವರಿ ಯೋಜನೆ ಸಾವಿರಾರು ಹೆಕ್ಟೇರ್ ಪ್ರದೇಶಗಳಿಗೆ ನಿರು ಒದಗಿಸುವ ಉತ್ತಮ ಯೋಜನೆಯಾಗಿದ್ದು, ನೂರಾರು ರೈತ ಕುಟುಂಬಗಳು ಪ್ರಯೋಜನ ಪಡೆಯುತ್ತಿವೆ. ಯೋಜನೆಯ ವಿದ್ಯುತ್ ಸ್ಥಾವರಗಳ ವಿದ್ಯುತ್ ಬಿಲ್ ಪಾವತಿಸುವಲ್ಲಿ ವಾರಾಹಿ ವಿಭಾಗದಿಂದ ಅನುದಾನದ ಕೊರತೆ ನೆಪವೊಡ್ಡಿ ಮೆಸ್ಕಾಂಗೆ ಕೋಟ್ಯಂತರ ರೂಪಾಯಿ ಬಿಲ್ ಬಾಕಿ ಇರಿಸಿಕೊಂಡಿರುವುದು ಸರಿಯಲ್ಲ. ತಕ್ಷಣ ವಿದ್ಯುತ್ ಬಿಲ್ ಪಾವತಿಗೆ ಅನುದಾನ ಬಿಡುಗಡೆ ಮಾಡಬೇಕು ಎಂದು ಬಿಜೆಪಿ ರೈತ ಮೋರ್ಚಾ ಆಗ್ರಹಿಸಿದೆ.

ಉಪ್ಪುಂದ ಕಾರ್ಯಕರ್ತರ ಕಚೇರಿಯಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಮಂಡಲ ರೈತ ಮೋರ್ಚಾ ಅಧ್ಯಕ್ಷ ಪ್ರಕಾಶ್ಚಂದ್ರ ಶೆಟ್ಟಿ ಕವ್ರಾಡಿ, ಮೆಸ್ಕಾಂ ಬಿಲ್ ಪಾವತಿ ಮಾಡದಿರುವುದರಿಂದ ವಿದ್ಯುತ್ ಸ್ಥಾವರಗಳ ವಿದ್ಯುತ್ ಸಂಪರ್ಕ ಕಡಿತಗೊಳಿಸಲಾಗಿದ್ದು, ಸದ್ಯ ಹಾಗೂ ಮುಂದಿನ ಬೇಸಿಗೆಯಲ್ಲಿ ರೈತರಿಗೆ ತೀವ್ರ ತೊಂದರೆ ಉಂಟಾಗುವ ಸಾಧ್ಯತೆಯಿದೆ. ವಾರಾಹಿ ಯೋಜನೆ ವಿಭಾಗ ಎಚ್ಚೆತ್ತುಕೊಂಡು ಮೆಸ್ಕಾಂಗೆ ಬಾಕಿ ಇರುವ ವಿದ್ಯುತ್ ಬಿಲ್ ಪಾವತಿಸಬೇಕು. ಸೌಪರ್ಣಿಕಾ ಏತ ನೀರಾವರಿ ಯೋಜನೆಯಡಿ ಬಾಕಿ ಇರುವ ₹1.09 ಕೋಟಿ, ಠೇವಣಿ ಮೊತ್ತ ₹1.03 ಲಕ್ಷ, ಸೌಕೂರು ಏತ ನೀರಾವರಿ ಯೋಜನೆಯಲ್ಲಿ ಬಾಕಿಯಿರುವ ₹2.04 ಕೋಟಿ, ಠೇವಣಿ ಮೊತ್ತ ₹4.30 ಲಕ್ಷ ಮೊತ್ತವನ್ನು ಮೆಸ್ಕಾಂಗೆ ವಾರಾಹಿ ವಿಭಾಗದಿಂದ ಬಾಕಿ ಇರಿಸಿಕೊಳ್ಳಲಾಗಿದೆ. ಕೂಡಲೇ ಹಣ ಬಿಡುಗಡೆ ಮಾಡಬೇಕು ಎಂದು ಆಗ್ರಹಿಸಿದರು.

ಸರ್ಕಾರದಲ್ಲಿ ಅನುದಾನದ ಕೊರತೆ, ಸರ್ಕಾರಿ ಇಲಾಖೆಗಳ ಹೊಂದಾಣಿಕೆ, ಸಮನ್ವಯದ ಕೊರತೆಯಿಂದಾಗಿ ನೀರಾವರಿ ಯೋಜನೆಗಳು ಕ್ಷೇತ್ರದಲ್ಲಿ ಹಳ್ಳ ಹಿಡಿಯುತ್ತಿದ್ದು, ರೈತರಿಗೆ ಪ್ರಯೋಜನ ಇಲ್ಲದಂತಾಗುತ್ತಿದೆ. ವಾರಾಹಿ ಯೋಜನೆ ವಿಭಾಗ ಜವಾಬ್ದಾರಿಯಿಂದ ನುಣುಚಿಕೊಳ್ಳುತ್ತಿದೆ. ರೈತರ ಬಗ್ಗೆ ಕಾಳಜಿ ವಹಿಸುತ್ತಿಲ್ಲ. ಇದರಿಂದಾಗಿ ರೈತರು ಆತಂಕದಿಂದ ದಿನ ದೂಡುವಂತಾಗಿದೆ. ಶಾಸಕ ಗುರುರಾಜ್ ಗಂಟಿಹೊಳೆ ತಾಲ್ಲೂಕು ಕೆಡಿಪಿ ಸಭೆಯಲ್ಲಿ ಈ ವಿಚಾರ ಪ್ರಸ್ತಾಪಿಸಿ ಬಾಕಿ ವಿದ್ಯುತ್ ಬಿಲ್ ಪಾವತಿಗೆ ಕ್ರಮ ವಹಿಸಲು ಇಲಾಖೆಗೆ ಸೂಚನೆ ನೀಡಿದ್ದಾರೆ. ಅದಾಗ್ಯೂ ಅಧಿಕಾರಿಗಳು ಬೇಜವಾಬ್ದಾರಿ ತೋರುವುದು ಸರಿಯಲ್ಲ. ಬಾಕಿ ಇರಿಸಿಕೊಂಡಿರುವ ಬಿಲ್ ಪಾವತಿಸಬೇಕು. ಇಲ್ಲದಿದ್ದರೆ ಹೋರಾಟ ನಡೆಸಲಿದ್ದೇವೆ ಎಂದು ಎಚ್ಚರಿಕೆ ನೀಡಿದರು.

ರೈತ ಮೋರ್ಚಾ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಪುಷ್ಪರಾಜ್ ಶೆಟ್ಟಿ, ಜಿಲ್ಲಾ ಉಪಾಧ್ಯಕ್ಷ ಮೋಹನ್ಚಂದ್ರ ಉಪ್ಪುಂದ, ಮಂಡಲ ಕೋಶಾಧಿಕಾರಿ ಗಣೇಶ್ ಗಾಣಿಗ ಉಪ್ಪುಂದ ಭಾಗವಹಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.