ಬೈಂದೂರು: ‘ಡಾ. ಅಂಬೇಡ್ಕರ್ ಅವರ ಜೀವನ ತೆರೆದ ವಿಶ್ವಾವಿದ್ಯಾಲಯವಾಗಿದ್ದು, ಅವರ ಆದರ್ಶ, ಚಿಂತನೆ, ತತ್ವಗಳನ್ನು ನಾವು ಮೈಗೂಡಿಸಿಕೊಳ್ಳಬೇಕು’ ಎಂದು ಶಿಕ್ಷಣ ಸಂಯೋಜಕ ಸತ್ಯನಾ ಕೊಡೇರಿ ಹೇಳಿದರು.

ಇಲ್ಲಿನ ಶಾರದಾ ವೇದಿಕೆಯಲ್ಲಿ ಮಂಗಳವಾರ ಡಾ.ಬಿ.ಆರ್.ಅಂಬೇಡ್ಕರ್ ಯುವಕ ಸಂಘದ ವತಿಯಿಂದ ನಡೆದ ಅಂಬೇಡ್ಕರ್ ಜನ್ಮದಿನಾಚರಣೆ, ಸಂಘದ ವಾರ್ಷಿಕೋತ್ಸವದಲ್ಲಿ ಅವರು ಮಾತನಾಡಿದರು.

ಖೇಲೊ ಇಂಡಿಯಾ, ನ್ಯಾಷನಲ್ ಗೇಮ್ಸ್ನ ರಿಲೇಯಲ್ಲಿ ಚಿನ್ನದ ಪದಕ ಪಡೆದ ಕೀರ್ತನಾ, ಸೇನೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಸದಸ್ಯ ಜಯರಾಮ ಯಡ್ತರೆ ಅವರನ್ನು ಸನ್ಮಾನಿಸಲಾಯಿತು. ಎಸ್ಎಸ್ಎಲ್ಸಿಯಲ್ಲಿ ಅಧಿಕ ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನಡೆಯಿತು. ವಿವಿಧ ಸ್ಪರ್ಧೆಗಳ ವಿಜೇತರಿಗೆ ಬಹುಮಾನ ವಿತರಿಸಲಾಯಿತು.

ಸೇನೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಗಿರೀಶ್ ಬೈಂದೂರು ಅಧ್ಯಕ್ಷತೆ ವಹಿಸಿದ್ದರು. ಬೈಂದೂರು ಠಾಣಾಧಿಕಾರಿ ಸುನಿಲ್ ಕುಮಾರ್, ತಾಲ್ಲೂಕು ವಕೀಲರ ಸಂಘದ ಅಧ್ಯಕ್ಷ ಪ್ರಶಾಂತ ಪೂಜಾರಿ, ಜೆಸಿಐ ಸಿಟಿ ಅಧ್ಯಕ್ಷೆ ಚೈತ್ರಾ ಸತೀಶ್, ಅಂಬೇಡ್ಕರ್ ಯುವಕ ಸಂಘದ ಪ್ರಧಾನ ಕಾರ್ಯದರ್ಶಿ ಪಿ. ಕೃಷ್ಣ ಭಾಗವಹಿಸಿದ್ದರು. ಸಂಘದ ಅಧ್ಯಕ್ಷ ರಾಘವೇಂದ್ರ ಬಿ.ಕೆ. ಸ್ವಾಗತಿಸಿದರು. ಸುಹಾಸ್ ವರದಿ ವಾಚಿಸಿ, ವಂದಿಸಿದರು. ವಿಘ್ನೇಶ್ ಯಡ್ತರೆ ನಿರೂಪಿಸಿದರು. ಅರೆಹೊಳೆ ಪ್ರತಿಷ್ಠಾನದ ನಂದಗೋಕುಲ ತಂಡದವರಿಂದ ‘ಬಿಡುವನೇ ಬ್ರಹ್ಮಲಿಂಗ’ ನೃತ್ಯರೂಪಕ ಪ್ರದರ್ಶನಗೊಂಡಿತು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260416-28-1925352235

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.