ಬೈಂದೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಈ ಬಾರಿ ಮಂಡಿಸಿರುವ ಬಜೆಟ್ನಲ್ಲಿ ಕರಾವಳಿ ಭಾಗದ ಜನರಿಗೆ ಶೂನ್ಯ ಕೊಡುಗೆ ನೀಡಿದ್ದಾರೆ. ಅದನ್ನು ಖಂಡಿಸಿ ಇದೇ 30 ರಂದು ಬೈಂದೂರು ವಿಧಾನಸಭಾ ಕ್ಷೇತ್ರದ ಪ್ರತಿ ಪಂಚಾಯಿತಿಗಳಲ್ಲಿ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸಲಿದ್ದೇವೆ ಎಂದು ಬೈಂದೂರು ರೈತಮೋರ್ಚಾ ಅಧ್ಯಕ್ಷ ಪ್ರಕಾಶ್ಚಂದ್ರ ಶೆಟ್ಟಿ ಹೇಳಿದರು.

ಉಪ್ಪುಂದದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಉಡುಪಿ ಜಿಲ್ಲೆಯಲ್ಲಿ ಕೃಷಿ ಕಾಲೇಜು ಹಾಗೂ ಮೆಡಿಕಲ್ ಕಾಲೇಜಿಗೆ ಪ್ರಸ್ತಾವನೆ ಇಡಲಾಗಿತ್ತು ಆದರೆ ಬಜೆಟ್ನಲ್ಲಿ ಘೋಷಣೆಯಾಗಿಲ್ಲ. ಪ್ರವಾಸೋದ್ಯಮಕ್ಕೆ ಉತ್ತೇಜನ ನೀಡುವ ಯಾವುದೇ ಕಾರ್ಯಕ್ರಮ ಹಮ್ಮಿಕೊಂಡಿಲ್ಲ. ರೈತರಿಗೆ ಬಜೆಟ್ನಿಂದ ಹೆಚ್ಚಿನ ಪ್ರಯೋಜನವಾಗಿಲ್ಲ ಎಂದು ಆರೋಪಿಸಿದರು.

ಬೈಂದೂರು ಬಿಜೆಪಿ ಯುವ ಮೋರ್ಚಾ ಅಧ್ಯಕ್ಷ ಗಜೇಂದ್ರ ಎಸ್. ಬೇಲೆಮನೆ, ಮಂಡಲದ ಕಾರ್ಯದರ್ಶಿ ಗೋಪಾಲ ಪೂಜಾರಿ ವಸ್ರೆ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260326-28-1616381348

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.