ಬೈಂದೂರು: ‘ಉಪ್ಪುಂದದ ಕರಾವಳಿ ಸಾಂಪ್ರದಾಯಿಕ ನಾಡದೋಣಿ ಮೀನುಗಾರರ ಸಹಕಾರ ಸಂಘದ ಹಿಂದಿನ ಸಿಇಒ ಸುಭಾಶ್ಚಂದ್ರ ಹಾಗೂ ಸಿಬ್ಬಂದಿ ದೀಪಕ್ ಅವರು ಸುಮಾರು ₹40 ಲಕ್ಷವನ್ನು ದುರುಪಯೋಗ ಮಾಡಿಕೊಂಡಿರುವುದು ಪರಿಶೀಲನೆ ಯಿಂದ ತಿಳಿದುಬಂದಿದೆ. ಇದರ ವಸೂಲಿಗಾಗಿ ಕಾನೂನು ಕ್ರಮ ಕೈಗೊಳ್ಳಲಾಗಿದೆ’ ಎಂದು ಸಂಘದ ಅಧ್ಯಕ್ಷ ನಾಗೇಶ ಖಾರ್ವಿ ಅಳಿವೆಕೋಡಿ ಹೇಳಿದರು.

ಮಂಗಳವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದ ಅವರು, ‘ಈಗಾಗಲೇ ದೀಪಕ್ ಮತ್ತು ಸುಭಾಶ್ಚಂದ್ರ ಅವರನ್ನು ಕೆಲಸದಿಂದ ವಜಾಗೊಳಿಸಲಾಗಿದೆ. ತಮ್ಮ ತಪ್ಪು ಮುಚ್ಚಿಕೊಳ್ಳುವ ಉದ್ದೇಶದಿಂದ ಸಾಮಾಜಿಕ ಜಾಲತಾಣಗಳಲ್ಲಿ ಈಗಿನ ಆಡಳಿತ ಮಂಡಳಿ ವಿರುದ್ಧ ಸುಳ್ಳು ಆರೋಪಗಳನ್ನು ಮಾಡುತ್ತಿದ್ದು, ಇದು ಸತ್ಯಕ್ಕೆ ದೂರವಾದ ವಿಚಾರ’ ಎಂದು ಸ್ಪಷ್ಟಪಡಿಸಿದರು.

ಸುಭಾಶ್ಚಂದ್ರ ಹಾಗೂ ಸಿಬ್ಬಂದಿ ದೀಪಕ್ ಅವರು ಅಧಿಕಾರ ದುರುಪಯೋಗ ಪಡಿಸಿಕೊಂಡು ಅಂದಿನ ಆಡಳಿತ ಮಂಡಳಿಯ ಗಮನಕ್ಕೆ ತಾರದೆ ₹1.10 ಕೋಟಿ ಹಣವನ್ನು ಕುಂದಾಪುರ ಸೌಹಾರ್ದ ಸಹಕಾರಿಯಲ್ಲಿ ಠೇವಣಿಯಾಗಿ ಇಟ್ಟಿದ್ದು, ಆ ಸಹಕಾರಿಯಿಂದ ನಮ್ಮ ಠೇವಣಿ ವಾಪಸ್ ಬಂದಿಲ್ಲ. ಈ ಕುರಿತು ಸಿಐಡಿ ತನಿಖೆ ನಡೆಯುತ್ತಿದೆ ಎಂದರು.

ನಮ್ಮ ಹಿರಿಯರು ಮೀನುಗಾರರಿಗಾಗಿ ಈ ಸಂಸ್ಥೆಯನ್ನು ಹುಟ್ಟುಹಾಕಿದ್ದು 19 ವರ್ಷಗಳಿಂದ ಮೀನುಗಾರರ ಹಾಗೂ ಜನರ ಸಹಕಾರದಿಂದ ಸಾರ್ವಜನಿಕರ ವಿಶ್ವಾಸ ಗಳಿಸಿ ವ್ಯವಹಾರ ನಡೆಸುತ್ತಾ ಸದೃಢವಾಗಿದೆ. ಸಂಸ್ಥೆಯ ಅಭಿವೃದ್ಧಿಗಾಗಿ ಆಡಳಿತ ಮಂಡಳಿ ಕೆಲಸ ಮಾಡುತ್ತಿದೆ ಎಂದರು.

ಇಬ್ಬರ ವಿರುದ್ಧ ಬೈಂದೂರು ನ್ಯಾಯಾಲಯದಲ್ಲಿ ಹಾಗೂ ಕುಂದಾಪುರ ಸಹಕಾರ ಸಂಘಗಳ ಸಹಾಯಕ ನಿಬಂಧಕರ ಕಚೇರಿಯಲ್ಲಿ ಪ್ರಕರಣ ದಾಖಲಾಗಿ ತನಿಖಾ ಹಂತದಲ್ಲಿದೆ. ಅದನ್ನು ತಪ್ಪಿಸಿಕೊಳ್ಳಲು ಸಂಸ್ಥೆ ಈಗಿನ ಆಡಳಿತ ಮಂಡಳಿ ವಿರುದ್ಧ ಹಾಗೂ ನಿವೃತ್ತ ಸಹಾಯಕ ನಿಬಂಧಕ ಅರುಣ ಕುಮಾರ್ ಎಸ್.ವಿ ಅವರ ಮೇಲೆ ನಿರಾಧಾರ ಆರೋಪ ಮಾಡುತ್ತಿದ್ದಾರೆ ಎಂದು ಹೇಳಿದರು.

ಪತ್ರಿಕಾಗೋಷ್ಠಿಯಲ್ಲಿ ಉಪಾಧ್ಯಕ್ಷ ಶಂಕರ ಖಾರ್ವಿ, ನಿರ್ದೇಶಕರಾದ ಮಂಜುನಾಥ ಜಿ.ಖಾರ್ವಿ, ನಾಗೇಶ ಮಡಿಕಲ್, ಮೋಹನದಾಸ್ ಖಾರ್ವಿ, ರಾಜೇಂದ್ರ ಖಾರ್ವಿ, ಮಂಜುನಾಥ, ಮಹೇಶ್ ಕೆ., ಜ್ಯೋತಿ ಖಾರ್ವಿ, ಲಕ್ಷ್ಮಿ, ಸಂಸ್ಥೆಯ ಪ್ರಭಾರ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಶ್ರೀನಿವಾಸ ಕೆ. ಹಾಜರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260527-28-1842192491

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.