ಬೈಂದೂರು: ನೆಮ್ಮದಿಯ ಜೀವನಕ್ಕೆ ಆರೋಗ್ಯ ಮುಖ್ಯ. ಅದರಲ್ಲೂ ಕಣ್ಣಿನ ಸುರಕ್ಷತೆಯ ಬಗ್ಗೆ ಅಗತ್ಯ ಗಮನ ಹರಿಸಬೇಕು ಎಂದು ನಾವುಂದದ ಮರವಂತೆ- ಬಡಾಕೆರೆ ವ್ಯವಸಾಯ ಸೇವಾ ಸಹಕಾರಿ ಸಂಘದ ಅಧ್ಯಕ್ಷ ಜಗದೀಶ ಪೂಜಾರಿ ಹಕ್ಕಾಡಿ ಹೇಳಿದರು.

ನಾವುಂದದ ಹಿಂದೂ ಅಭ್ಯುದಯ ಸಂಘ, ಮರವಂತೆ-ಬಡಾಕೆರೆ ವ್ಯವಸಾಯ ಸೇವಾ ಸಹಕಾರಿ ಸಂಘ, ನಾವುಂದ ಮತ್ತು ಪಾರ್ವತಿ ಮಹಾಬಲ ಶೆಟ್ಟಿ ಸ್ಮಾರಕ ಕಣ್ಣಿನ ಆಸ್ಪತ್ರೆ, ಶಿರೂರು- ಮುದ್ದುಮನೆ ಆಶ್ರಯದಲ್ಲಿ ನಾವುಂದದ ಮಹಾಗಣಪತಿ ಮಾಂಗಲ್ಯ ಮಂಟಪದಲ್ಲಿ ನಡೆದ ಉಚಿತ ಕನ್ನಡಕ ವಿತರಣಾ ಸಮಾರಂಭದಲ್ಲಿ ಅವರು ಮಾತನಾಡಿದರು.

ಹಿಂದೂ ಅಭ್ಯುದಯ ಸಂಘವು ಕಣ್ಣಿನ ತಪಾಸಣೆಯ ಬಗ್ಗೆ ಒತ್ತು ನೀಡಿ, ಪ್ರತಿವರ್ಷ ಉಚಿತ ನೇತ್ರ ಚಿಕಿತ್ಸಾ ಶಿಬಿರ ಏರ್ಪಡಿಸುತ್ತಿದೆ. ಇದರಿಂದ ನೂರಾರು ಜನರಿಗೆ ಅನುಕೂಲ ಆಗುತ್ತಿದ್ದು, ಪ್ರಶಂಸನೀಯ ಕಾರ್ಯವಾಗಿದೆ ಎಂದರು.

ಮರವಂತೆ-ಬಡಾಕೆರೆ ವ್ಯವಸಾಯ ಸೇವಾ ಸಹಕಾರಿ ಸಂಘದ ಸಹಕಾರದಲ್ಲಿ 74 ಜನರಿಗೆ ₹50 ಸಾವಿರ ಮೌಲ್ಯದ ಕನ್ನಡಕಗಳನ್ನು ಉಚಿತವಾಗಿ ವಿತರಿಸಲಾಯಿತು.

ಹಿಂದೂ ಅಭ್ಯುದಯ ಸಂಘದ ಎನ್. ಸಂಜೀವ ಗಾಣಿಗ ಅಧ್ಯಕ್ಷತೆ ವಹಿಸಿದ್ದರು. ಮರವಂತೆ- ಬಡಾಕೆರೆ ವ್ಯವಸಾಯ ಸಂಘದ ನಿರ್ದೇಶಕ ರಾಮ ಕಂತಿಹೊಂಡ, ಪಾರ್ವತಿ ಮಹಾಬಲ ಶೆಟ್ಟಿ ಸ್ಮಾರಕ ಕಣ್ಣಿನ ಆಸ್ಪತ್ರೆಯ ನೇತ್ರ ತಪಾಸಕ ರವಿ, ಸುರೇಶ ಸುವರ್ಣ ಮತ್ತು ಜಿತೇಶ್ ಕೆ. ಪೂಜಾರಿ ಇದ್ದರು.

ಸಂಘದ ಕಾರ್ಯದರ್ಶಿ ಎ. ಶಿವರಾಮ ಮಧ್ಯಸ್ಥ ಸ್ವಾಗತಿಸಿ, ನಿರೂಪಿಸಿದರು. ಸದಸ್ಯ ವಿಘ್ನೇಶ್ವರ ಜೋಯಿಸ್ ವಂದಿಸಿದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260508-28-1153991710

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.