ಬೈಂದೂರು: ಮೀನುಗಾರರ ಕಲ್ಯಾಣ ಸೇರಿದಂತೆ ಮೀನುಗಾರಿಕಾ ಕ್ಷೇತ್ರದ ಸಮಗ್ರ ಅಭಿವೃದ್ಧಿಗಾಗಿ ಕೇಂದ್ರ ಸರ್ಕಾರ ಹಲವಾರು ಯೋಜನೆ ಜಾರಿಗೆ ತಂದಿದೆ. ಅವುಗಳಲ್ಲಿ ಪ್ರಧಾನಮಂತ್ರಿ ಮತ್ಸ್ಯ ಸಂಪದ ಯೋಜನೆಯೂ ಒಂದು. ಈ ಯೋಜನೆ ಮೀನುಗಾರರ ಆದಾಯ ಹೆಚ್ಚಿಸುವಲ್ಲಿ, ಮೀನುಗಾರಿಕೆಯ ವಿವಿಧ ಉದ್ಯೋಗ ಸೃಷ್ಟಿಸುವಲ್ಲಿ ಸಹಕಾರಿಯಾಗಿದೆ ಎಂದು ಸಂಸದ ಬಿ.ವೈ. ರಾಘವೇಂದ್ರ ಹೇಳಿದರು.

ಅರಮಕೋಡಿ ಈಶ್ವರ ದೇವಸ್ಥಾನ ಮಡಿಕಲ್ ವಠಾರದಲ್ಲಿ ಶುಕ್ರವಾರ ಪ್ರಧಾನಮಂತ್ರಿ ಮತ್ಸ್ಯ ಸಂಪದ ಯೋಜನೆಯಡಿ ಶಿವಮೊಗ್ಗ ಲೋಕಸಭಾ ವ್ಯಾಪ್ತಿಯ ಬೈಂದೂರು ವಿಧಾನಸಭಾ ಕ್ಷೇತ್ರದ ಉಪ್ಪುಂದ ಗ್ರಾಮವನ್ನು ಹವಮಾನ ಸ್ಥಿತಿಸ್ಥಾಪಕ ಗ್ರಾಮವನ್ನಾಗಿ ಆಯ್ಕೆ ಮಾಡಿ ₹2 ಕೋಟಿ ಅನುದಾನದ ವಿವಿಧೋದ್ದೇಶ ಮೀನುಗಾರಿಕಾ ಕೇಂದ್ರ ನಿರ್ಮಾಣಕ್ಕೆ ಭೂಮಿ ಪೂಜೆ ನೆರವೇರಿಸಿದ ಬಳಿಕ ನಡೆದ ಸಭಾ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಅರಮಕೋಡಿ ಈಶ್ವರ ದೇವಸ್ಥಾನ, ನಾಡದೋಣಿ ಮಿನುಗಾರರ ಸಂಘದ ವತಿಯಿಂದ ಸಂಸದ ಬಿ.ವೈ. ರಾಘವೇಂದ್ರ, ಶಾಸಕ ಗುರುರಾಜ ಗಂಟಿಹೊಳೆ ಅವರನ್ನು ಸನ್ಮಾನಿಸಲಾಯಿತು.

ಬೈಂದೂರು ಬಿಜೆಪಿ ಮಂಡಲ ಅಧ್ಯಕ್ಷೆ ಅನಿತಾ ಆರ್.ಕೆ, ಕಾರ್ಯದರ್ಶಿ ಕರಣ್ ಪೂಜಾರಿ, ನಾಡದೋಣಿ ಮೀನುಗಾರರ ಸಂಘದ ಗೌರವಾಧ್ಯಕ್ಷ ನವೀನ್ ಚಂದ್ರ ಉಪ್ಪುಂದ, ನಾಡದೋಣಿ ಮೀನುಗಾರರ ಸಂಘದ ಅಧ್ಯಕ್ಷ ನಾಗೇಶ ಖಾರ್ವಿ, ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯರಾದ ರೋಹಿತ್ ಶೆಟ್ಟಿ, ಸುರೇಶ್ ಬಟವಾಡಿ, ರಾಣಿಬಲೆ ಒಕ್ಕೂಟದ ಅಧ್ಯಕ್ಷ ಕುಮಾರ್ ಬಿ.ಎಚ್.ಕೆ, ಅರಮಕೋಡಿ ಮಹಾಈಶ್ವರ ದೇವಸ್ಥಾನದ ಅಧ್ಯಕ್ಷ ಸುರೇಶ್ ಖಾರ್ವಿ, ಸೇವಾ ಸಮಿತಿ ಅಧ್ಯಕ್ಷ ರಾಮ ಖಾರ್ವಿ, ಮೀನುಗಾರಿಕಾ ಅಧಿಕಾರಿ ಹರೀಶ್ ಭಾಗವಹಿಸಿದ್ದರು.

ಜಗನ್ನಾಥ ಮೊಗವೀರ ಸ್ವಾಗತಿಸಿದರು. ಆನಂದ ಖಾರ್ವಿ ನಿರೂಪಿಸಿದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260530-28-161188990

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.