ಬೈಂದೂರು: ಸರ್ಕಾರಿ ನೌಕರರ ಹಿತಾಸಕ್ತಿ ಕಾಪಾಡಲು, ಅವರ ಹಕ್ಕುಗಳಿಗಾಗಿ ಹೋರಾಡಲು ಹಾಗೂ ಸರ್ಕಾರಿ ಸೇವೆಗಳನ್ನು ಬಲಪಡಿಸುವುದರೊಂದಿಗೆ ನೌಕರರ ಶ್ರೇಯೋಭಿವೃದ್ಧಿಗಾಗಿ ಸರ್ಕಾರಿ ನೌಕರರ ಸಂಘ ಕೆಲಸ ಮಾಡುತ್ತಿದೆ ಎಂದು ಮಾಜಿ ಶಾಸಕ ಕೆ. ಗೋಪಾಲ ಪೂಜಾರಿ ಹೇಳಿದರು.

ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘದ ಬೈಂದೂರು ತಾಲ್ಲೂಕಿನ ನೂತನ ಕಚೇರಿಯನ್ನು ಶನಿವಾರ ಉದ್ಘಾಟಿಸಿ, ರೋಟರಿ ಸಮುದಾಯ ಭವನದಲ್ಲಿ ನಡೆದ ಸಭಾ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಎಸ್ಎಸ್ಎಲ್ಸಿ ಹಾಗೂ ದ್ವಿತೀಯ ಪಿಯುಸಿಯಲ್ಲಿ ಅತ್ಯಧಿಕ ಅಂಕ ಗಳಿಸಿದ ಸರ್ಕಾರಿ ನೌಕರರ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ನೀಡಲಾಯಿತು. ವಿವಿಧ ಕ್ಷೇತಗಳಲ್ಲಿ ಸಾಧನೆ ಮಾಡಿದ ಶಿಕ್ಷಕರನ್ನು ಸನ್ಮಾನಿಸಲಾಯಿತು.

ಸರ್ಕಾರಿ ನೌಕರರ ಸಂಘದ ಬೈಂದೂರು ತಾಲ್ಲೂಕು ಘಟಕದ ಅಧ್ಯಕ್ಷ ಶೇಖರ ಪೂಜಾರಿ ಅಧ್ಯಕ್ಷತೆ ವಹಿಸಿದ್ದರು. ಸುಮುಖ ಸರ್ಜಿಕಲ್ ಆಡಳಿತ ನಿರ್ದೇಶಕ ಬಿ.ಎಸ್. ಸುರೇಶ್ ಶೆಟ್ಟಿ, ಕೆ.ಡಿ.ಪಿ ಸದಸ್ಯ ಶೇಖರ ಪೂಜಾರಿ, ಸರ್ಕಾರಿ ನೌಕರರ ಸಂಘದ ಉಡುಪಿ ಜಿಲ್ಲಾ ಘಟಕದ ಅಧ್ಯಕ್ಷ ಅಂಪಾರು ದಿನಕರ ಶೆಟ್ಟಿ, ಕುಂದಾಪುರ ಘಟಕದ ಅಧ್ಯಕ್ಷ ನಾಗೇಶ್, ಉಡುಪಿ ಜಿಲ್ಲಾ ವಿದ್ಯಾಂಗ ಉಪ ನಿರ್ದೇಶಕ ಲೋಕೇಶ್, ರೈತ ಸಂಘದ ಅಧ್ಯಕ್ಷ ದೀಪಕ್ಕುಮಾರ್ ಶೆಟ್ಟಿ, ಎಂ.ಎಂ. ಫೌಂಡೇಶನ್ ಟ್ರಸ್ಟಿ ಅರುಣಕುಮಾರ್ ಶಿರೂರು, ತಾಲ್ಲೂಕು ಆಡಳಿತ ವೈದ್ಯಾಧಿಕಾರಿ ಪ್ರೇಮಾನಂದ, ಕ್ಷೇತ್ರ ಶಿಕ್ಷಣಾಧಿಕಾರಿ ನಾಗೇಶ್ ನಾಯ್ಕ್, ಪ್ರಮುಖರಾದ ಎಸ್. ರಾಜು ಪೂಜಾರಿ, ಎಸ್. ಮದನಕುಮಾರ, ಗೌರಿ ದೇವಾಡಿಗ, ಅಕ್ಷರ ದಾಸೋಹದ ಸಹಾಯಕ ನಿರ್ದೇಶಕ ಅರುಣಚಂದ್ರ ನಾಯಕ್, ಸಮುದಾಯ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ. ರಾಜೇಶ್, ಸರ್ಕಾರಿ ನೌಕರರ ಸಂಘದ ತಾಲ್ಲೂಕು ಘಟಕದ ಖಜಾಂಚಿ ಉದಯಕುಮಾರ್, ಎಂ.ಪಿ. ಗೌರವಾಧ್ಯಕ್ಷ ಷರೀಫ್ ಇದ್ದರು.

ಶಿಕ್ಷಕ ಸುಧಾಕರ ದೇವಾಡಿಗ ಸ್ವಾಗತಿಸಿದರು. ಗಣಪತಿ ಹೋಬಳಿದಾರ್ ವಂದಿಸಿದರು. ಸುಬ್ರಹ್ಮಣ್ಯ ಜಿ. ಉಪ್ಪುಂದ ನಿರೂಪಿಸಿದರು. ನಂತರ ಗಾಂಧಿ ಮೈದಾನದಲ್ಲಿ ಬೈಂದೂರು ಸರ್ಕಾರಿ ನೌಕರರ ಕ್ರೀಡಾಕೂಟ ನಡೆಯಿತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.