ಬೈಂದೂರು: ಒಬ್ಬ ವ್ಯಕ್ತಿಯ ರಕ್ತದಿಂದ ಮೂರು ಜನರ ಜೀವ ಉಳಿಸಬಹುದು. ಯುವಜನರು ಸ್ವಯಂ ಪ್ರೇರಣೆಯಿಂದ ರಕ್ತದಾನಕ್ಕೆ ಮುಂದಾಗಬೇಕು. ಜಿಲ್ಲೆಯಲ್ಲಿ ರಕ್ತದ ಕೊರತೆಯಿದ್ದು, ಸಹೃದಯಿಗಳು ಸ್ಪಂದಿಸಬೇಕು ಎಂದು ಕುಂದಾಪುರ ಭಾರತೀಯ ರೆಡ್ಕ್ರಾಸ್ ಸೊಸೈಟಿ ಅಧ್ಯಕ್ಷ ಎಸ್. ಜಯಕರ ಶೆಟ್ಟಿ ಹೇಳಿದರು.

ಇಲ್ಲಿನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಯುವ ರೆಡ್ಕ್ರಾಸ್ ಘಟಕ, ರೆಡ್ ರಿಬ್ಬನ್ ಕ್ಲಬ್, ಎನ್ಎಸ್ಎಸ್, ರೋವರ್ಸ್ ಮತ್ತು ರೇಂಜರ್ಸ್, ಎನ್ಸಿಸಿ ಐಕ್ಯುಎಸಿ, ರೋಟರ್ಯಾಕ್ಟ್ ಕ್ಲಬ್, ಎಚ್ಡಿಎಫ್ಸಿ ಬ್ಯಾಂಕ್ ಕುಂದಾಪುರ ಸಹಯೋಗದಲ್ಲಿ ಆಯೋಜಿಸಿದ್ದ ರಕ್ತದಾನ ಶಿಬಿರ ಉದ್ಘಾಟಿಸಿ ಅವರು ಮಾತನಾಡಿದರು.

ಅಧ್ಯಕ್ಷತೆ ವಹಿಸಿ ಮಾತನಾಡಿದ ಪ್ರಾಂಶುಪಾಲ ಶಿವಕುಮಾರ ಪಿ.ವಿ, ನಮ್ಮ ವಿದ್ಯಾರ್ಥಿಗಳು ಪ್ರತಿವರ್ಷ ರಕ್ತದಾನ ಮಾಡುತ್ತಿದ್ದಾರೆ. ನಮ್ಮ ಕಾಲೇಜು ಹಲವು ಸಮಾಜಮುಖಿ ಕಾರ್ಯಗಳಲ್ಲಿ ತೊಡಗಿಕೊಂಡಿದೆ. ಕಾಲೇಜಿನ ವಿವಿಧ ಸಮಿತಿಗಳ ಮೂಲಕ ಸಮಾಜದ ಸ್ವಾಸ್ಥ್ಯಕ್ಕಾಗಿ ವಿದ್ಯಾರ್ಥಿಗಳು ಶ್ರಮಿಸಬೇಕು ಎಂದರು.

ರೆಡ್ಕ್ರಾಸ್ ಬೈಂದೂರು ಶಾಖೆ ಅಧ್ಯಕ್ಷ ನಿತಿನ್ ಶೆಟ್ಟಿ, ಖಜಾಂಚಿ ಸಂತೋಷ್ ಶೆಟ್ಟಿ, ಕಾರ್ಯದರ್ಶಿ ಸಂದೇಶ್ ಭಟ್, ಕುಂದಾಪುರ ರೆಡ್ಕ್ರಾಸ್ ಸೊಸೈಟಿ ಖಜಾಂಚಿ ಶಿವರಾಮ ಶೆಟ್ಟಿ, ಕುಂದಾಪುರ ಎಚ್ಡಿಎಫ್ಸಿ ಬ್ಯಾಂಕ್ ಮ್ಯಾನೇಜರ್ ತುಳಸಿ ಜೆ, ಸಹಾಯಕ ಪ್ರಾಧ್ಯಾಪಕರಾದ ಚಿತ್ರಾ ಪಡಿಯಾರ್, ಸವಿತಾ ಎಸ್, ಶರ್ಮಿಳಾ ಹಾರಾಡಿ, ಸುಚಿತ್ರಾ, ಸೋಮೇಶ್ವರಿ, ಆನಂದ್, ಮಮತಾ ಪೂಜಾರಿ, ಗೀತಾ, ಪ್ರದೀಪ್, ಶ್ಯಾಮಲಾ, ಜಲಕನ್ಯೆ, ಸವಿತಾ, ಶೇಖರ್, ಮಣಿಕಂಠ, ಸತೀಶ್, ಪೂಜಾ ರಾವ್ ಭಾಗವಹಿಸಿದ್ದರು.

ವಿದ್ಯಾರ್ಥಿನಿ ನಗ್ಮಾ ಸ್ವಾಗತಿಸಿದರು. ವೈದವಿ ನಿರೂಪಿಸಿದರು. ಭಾಗ್ಯಲಕ್ಷ್ಮಿ ವಂದಿಸಿದರು. ವಿದ್ಯಾರ್ಥಿಗಳು, ಪೋಷಕರು, ಶಿಕ್ಷಕರು, ಸಾರ್ವಜನಿಕರು ರಕ್ತದಾನ ಮಾಡಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.