ಬೈಂದೂರು: ಶಾಸಕರ ಸ್ಥಳೀಯ ಪ್ರದೇಶಾಭಿವೃದ್ಧಿ ಯೋಜನೆಯಡಿ ಕ್ಷೇತ್ರದ ಅಂಗವಿಕಲ ಫಲಾನುಭವಿಗಳಿಗೆ ಸಾಧನ ಸಲಕರಣೆ ವಿತರಣೆ ಕಾರ್ಯಕ್ರಮ ಮಂಗಳವಾರ ತಾಲ್ಲೂಕು ಪಂಚಾಯಿತಿಯಲ್ಲಿ ನಡೆಯಿತು.

ಶಾಸಕ ಗುರುರಾಜ್ ಗಂಟಿಹೊಳೆ ಅವರು, ಕ್ಷೇತ್ರದ ಅರ್ಹ ನಾಲ್ವರು ಅಂಗವಿಕಲರಿಗೆ ₹3 ಲಕ್ಷ ಮೌಲ್ಯದ ಸಲಕರಣೆ ವಿತರಿಸಿ, ‘ಕೆಲವೊಮ್ಮೆ ತಮ್ಮದಲ್ಲದ ತಪ್ಪಿನಿಂದ ಜನರು ಅಂಗವೈಕಲ್ಯಕ್ಕೆ ತುತ್ತಾಗಿರುವ ನಿದರ್ಶನಗಳು ನಮ್ಮ ಮುಂದಿವೆ. ಅಂಥವರು ಎಂದಿಗೂ ತಮ್ಮ ಮನೋಸ್ಥೈರ್ಯ ಕಳೆದುಕೊಳ್ಳದೆ, ಸಮಾಜದಲ್ಲಿ ಗೌರವಯುತ ಜೀವನ ನಡೆಸುವಂತಾಗಬೇಕು. ಈ ನಿಟ್ಟಿನಲ್ಲಿ ಸಮಾಜ ಹಾಗೂ ಸರ್ಕಾರ ಅವರ ಬೆನ್ನಿಗೆ ನಿಲ್ಲಬೇಕು’ ಎಂದರು.

ಇದೇ ಸಂದರ್ಭದಲ್ಲಿ ಇಬ್ಬರು ಫಲಾನುಭವಿಗಳಿಗೆ ತಲಾ ₹1 ಲಕ್ಷ ಮೌಲ್ಯದ ಯಂತ್ರ ಚಾಲಿತ ದ್ವಿಚಕ್ರ ವಾಹನ ಹಾಗೂ ಒಬ್ಬರಿಗೆ ₹58 ಸಾವಿರ ಮೌಲ್ಯದ ಶ್ರವಣ ಸಾಧನ ಮತ್ತು ಇನ್ನೊಬ್ಬರಿಗೆ ₹25 ಸಾವಿರ ಮೌಲ್ಯದ ಕ್ಯಾಲಿಪರ್ ಸಾಧನ ವಿತರಿಸಲಾಯಿತು.

ಏ. 13ರಿಂದ ಯುಡಿಐಡಿ ಕಾರ್ಡ್ ಸಪ್ತಾಹ: ಹಲವು ಅಂಗವಿಕಲರು ಯುಡಿಐಡಿ ಕಾರ್ಡ್ ಹೊಂದಿರುವುದಿಲ್ಲ. ಇದರಿಂದ ಸರ್ಕಾರಿ ಹಾಗೂ ಇನ್ನಿತರ ಸೌಲಭ್ಯ ಪಡೆಯಲು ಸಮಸ್ಯೆಯಾಗುತ್ತಿದೆ. ಹಾಗಾಗಿ ಕ್ಷೇತ್ರದ ಶೇ 100ರಷ್ಟು ಅಂಗವಿಕಲರಿಗೆ ಯುಡಿಐಡಿ ಕಾರ್ಡ್ ಒದಗಿಸುವ ಉದ್ದೇಶದಿಂದ ಏ. 13ರಿಂದ 17ರವರೆಗೆ ಕುಂದಾಪುರ ತಾಲ್ಲೂಕು ಆಸ್ಪತ್ರೆಯಲ್ಲಿ ಆರೋಗ್ಯ ತಪಾಸಣೆ ನಡೆಯಲಿದ್ದು, ಅರ್ಹ ಅಂಗವಿಕಲರು ಇದರ ಪ್ರಯೋಜನ ಪಡೆದುಕೊಳ್ಳಬೇಕು ಎಂದು ಶಾಸಕರು ತಿಳಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260408-28-1170253848

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.