ಬೈಂದೂರು: ಇಲ್ಲಿನ ತಾಲ್ಲೂಕು ಕಚೇರಿಯಲ್ಲಿ ಶಾಸಕ ಗುರುರಾಜ್ ಗಂಟಿಹೊಳೆ ಅವರ ಅಧ್ಯಕ್ಷತೆಯಲ್ಲಿ ಅಕ್ರಮ–ಸಕ್ರಮ ಕಡತಗಳ ವಿಲೇವಾರಿ ಕುರಿತ ಸಭೆ ನಡೆಯಿತು.

ತಾಲ್ಲೂಕು ಕಚೇರಿ, ಸರ್ವೆ ಇಲಾಖೆಯ ಅಧಿಕಾರಿಗಳು ಮತ್ತು ಸಿಬ್ಬಂದಿ ಅಕ್ರಮ–ಸಕ್ರಮ ಯೋಜನೆಯಡಿ ಸಲ್ಲಿಸಿರುವ ಅರ್ಹ ಅರ್ಜಿಗಳ ಕಡತಗಳನ್ನು ಮಂಜೂರು ಮಾಡುವಲ್ಲಿ ಅಸಡ್ಡೆ ತೋರಿಸುತ್ತಿದ್ದು, ವಿನಾಕಾರಣ ವಿಳಂಬ ಮಾಡುತ್ತಿರುವುದಕ್ಕೆ ಶಾಸಕರು ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು. ಇದಕ್ಕೆ ಕಾರಣರಾದವರ ವಿರುದ್ಧ ನೇರ ಕ್ರಮಕ್ಕೆ ಶಿಫಾರಸು ಮಾಡಲಾಗುವುದು ಎಂದು ಎಚ್ಚರಿಸಿದರು.

ಸೀಮಿತ ಸಂಖ್ಯೆಯಲ್ಲಿರುವ ಅರ್ಹ ಅರ್ಜಿಗಳನ್ನು ಕೂಡ ಕಾಲಮಿತಿಯಲ್ಲಿ ವಿಲೇವಾರಿ ಮಾಡದೇ, ತಾಂತ್ರಿಕ ಸಮಸ್ಯೆಗಳ ನೆಪವನ್ನು ಮುಂದಿಟ್ಟು ವರ್ಷಗಟ್ಟಲೆ ಮಂಜೂರಾತಿಗೆ ಪ್ರಯತ್ನಿಸದೇ ಇರುವುದನ್ನು ಸಹಿಸಲು ಸಾಧ್ಯವಿಲ್ಲ ಎಂದರು.

ಸರ್ವೆ ಇಲಾಖೆ ಹಾಗೂ ತಾಲ್ಲೂಕು ಕಚೇರಿ ವಿಭಾಗಗಳು ಸಮನ್ವಯದಿಂದ ಕಾರ್ಯನಿರ್ವಹಿಸಿ ಬಾಕಿ ಉಳಿದಿರುವ ಹಕ್ಕುಪತ್ರಗಳ ವಿತರಣೆಗೆ ಕ್ರಮ ಕೈಗೊಳ್ಳಬೇಕು ಎಂದು ಅವರು ಸೂಚಿಸಿದರು.

ಈ ಸಂದರ್ಭದಲ್ಲಿ ಜಡ್ಕಲ್, ಮುದೂರು ಹಾಗೂ ಹಳ್ಳಿಹೊಳೆ ಗ್ರಾಮಗಳ ಆರು ಮಂದಿ ಅರ್ಹ ಫಲಾನುಭವಿ ರೈತರಿಗೆ ಶಾಸಕರು ಹಕ್ಕುಪತ್ರ ವಿತರಿಸಿದರು.

ಬೈಂದೂರು ತಾಲ್ಲೂಕು ತಹಶೀಲ್ದಾರ್ ರಾಮಚಂದ್ರಪ್ಪ, ಭೂ ದಾಖಲೆಗಳ ಸಹಾಯಕ ನಿರ್ದೇಶಕರು, ಸರ್ವೆ ಮೇಲ್ವಿಚಾರಕರು, ಸರ್ವೆಯರು, ಗ್ರಾಮ ಆಡಳಿತಾಧಿಕಾರಿಗಳು ಹಾಗೂ ತಾಲ್ಲೂಕು ಕಚೇರಿ ವಿಷಯ ನಿರ್ವಾಹಕರು ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.